ಶಿಕ್ಷಕರೇ ನಿಮಗೊಂದು ಗುಡ್ ನ್ಯೂಸ್ : ಕಲ್ಯಾಣ ಕರ್ನಾಟಕ ಭಾಗಕ್ಕೆ 5000 ಶಿಕ್ಷಕರ ನೇಮಕ!

Share the Article

ಶಿಕ್ಷಣ ಕ್ಷೇತ್ರವನ್ನು ಇನ್ನಷ್ಟು ಬಲಗೊಳಿಸುವ ಸಲುವಾಗಿ ಸರ್ಕಾರದಿಂದ 15 ಸಾವಿರ ಹೊಸ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಈ ಪೈಕಿ 5 ಸಾವಿರ ಶಿಕ್ಷಕರನ್ನು ಕಲ್ಯಾಣ ಕರ್ನಾಟಕ ಭಾಗಕ್ಕೆ ನೀಡಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರಾದ ಬಿ.ಸಿ.ನಾಗೇಶ್ ಅವರು ಹೇಳಿದರು.

ಅವರು ಮಂಗಳವಾರ ಜಿಲ್ಲೆಯ ದೇವದುರ್ಗ ತಾಲೂಕಿನ ಅರಕೇರಿ ಗ್ರಾಮದ ಆದರ್ಶ ವಿದ್ಯಾಲಯದಲ್ಲಿ ಅಳವಡಿಸಿರುವ ಮಳೆ ನೀರು ಕೊಯ್ದು ಯೋಜನೆಗೆ ಚಾಲನೆ ನೀಡಿ ಮಾತನಾಡಿದರು.

ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಕರ ಕೊರತೆ ಇದೆ. ಅದನ್ನು ನಿವಾರಿಸಲು ಶಿಕ್ಷಕರ ನೇಮಕಾತಿಗೆ ಚಾಲನೆ ನೀಡಲಾಗಿದೆ. 371(ಜೆ) ಮೀಸಲಾತಿಯಡಿ ಸ್ಥಳೀಯರು ನೇಮಕಾತಿ ಆಗುವುದರಿಂದ ಪ್ರದೇಶ ಬಿಟ್ಟು ಶಿಕ್ಷಕರು ಬೇರೆಡೆ ವರ್ಗಾವಣೆ ಆಗುವುದಿಲ್ಲ ಎಂದು ಹೇಳಿದರು.

ಕೋವಿಡ್ ಕಾರಣದಿಂದ ಕಳೆದ ವರ್ಷ ಸರಿಯಾಗಿ ಶಾಲೆಗಳು ನಡೆಯದ ಕಾರಣ ಮಕ್ಕಳ ಶಿಕ್ಷಣದ ಮೇಲೆ ಗಂಭೀರ ಪರಿಣಾಮ ಬೀರಿದ್ದು, ಹೀಗಾಗಿ ಪ್ರಸಕ್ತ ಶೈಕ್ಷಣಿಕ ಸಾಲಿನಿಂದ ಕಲಿಕಾ ಚೇತರಿಕೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಕಲಿಕಾ ಚೇತರಿಕೆ ಕೋರ್ಸ್ ಬೋಧಿಸಿದ ನಂತರವೇ ಪಠ್ಯ ಬೋಧನೆ ಮಾಡಲಾಗುತ್ತದೆ ಎಂದು ತಿಳಿಸಿದರು.

Leave A Reply