ಬಂಟ್ವಾಳ : ಮಹಿಳೆಗೆ ಫೋನಿನಲ್ಲಿ ಅವಾಚ್ಯ ಶಬ್ದಗಳಿಂದ ನಿಂದನೆ | ಆರೋಪಿ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ನಡೆಸುವಂತೆ ನ್ಯಾಯಾಲಯ ಆದೇಶ

ಬಂಟ್ವಾಳ: ಮಹಿಳೆಗೆ ಪೋನಿನಲ್ಲಿ ಅವಾಚ್ಯ ಶಬ್ದಗಳಿಂದ ಬೈದು, ಅಶ್ಲೀಲವಾಗಿ ನಿಂದಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ತನಿಖೆ ನಡೆಸುವಂತೆ ಬಂಟ್ವಾಳ ವೃತ್ತ ನಿರೀಕ್ಷಕರಿಗೆ, ಬಂಟ್ವಾಳ ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶರು ಆದೇಶಿಸಿದ್ದಾರೆ.

ಆರೋಪಿ ವಲ್ಲಿ ಯಾನೆ ವಾಲ್ಟರ್.

ತಾಲೂಕಿನ ಬರಿಮಾರು ಗ್ರಾಮದ ಕೃಷಿಕ ಕುಟುಂಬದ ಮಹಿಳೆಯೋರ್ವರಿಗೆ ಜಮೀನು ವಿಚಾರಕ್ಕೆ ಸಂಬಂಧಿಸಿದಂತೆ, ಫೋನ್ ಮುಖಾಂತರ ಆರೋಪಿ ವಲ್ಲಿ ಯಾನೆ ವಾಲ್ಟರ್ ಕೊಲೆ ಬೆದರಿಕೆ ಒಡ್ಡಿ ಅವ್ಯಾಚ್ಯ ಶಬ್ದಗಳಿಂದ ಬೈದು, ಅಶ್ಲೀಲ ವಾಗಿ ನಿಂದಿಸಿದ್ದಾನೆ.

ಈ ಬಗ್ಗೆ ಪೋಲೀಸ್ ಠಾಣೆಗೆ ಹಾಗು ದ.ಕ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಿದ್ದರೂ, ಆರೋಪಿ ವಿರುದ್ಧ ಯಾವುದೇ ಕ್ರಮ ಕೈಗೊಂಡಿರುವುದಿಲ್ಲ. ಬಳಿಕ ಮಹಿಳೆ ನ್ಯಾಯಾಲಯದ ಮುಂದೆ ಸಲ್ಲಿಸಿರುತ್ತಾರೆ. ಬಂಟ್ವಾಳ ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶರು, ಈ ಬಗ್ಗೆ ಸೂಕ್ತ ತನಿಖೆ ನಡೆಸಿ ಆರೋಪಿತನ ವಿರುದ್ಧ ಪ್ರಕರಣ ದಾಖಲಿಸಿ ವರದಿ ಸಲ್ಲಿಸುವಂತೆ ಬಂಟ್ವಾಳ ವೃತ್ತ ನಿರೀಕ್ಷಕರಿಗೆ ಆದೇಶಿಸಿದೆ.

ಇದರಂತೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಆರೋಪಿ ಬರಿಮಾರು ಗ್ರಾಮದ ಬಲ್ಯ ನಿವಾಸಿ ವಳ್ಳಿ ಯಾನೆ ವಾಲ್ಟರ್ವಿರುದ್ಧ ಕಲಂ 504,506,507,509 ರಂತೆ ಪ್ರಕರಣದಾಖಲಾಗಿದ್ದು ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.

Leave A Reply

Your email address will not be published.