ಬೆಳ್ಳಾರೆ:ಮಳೆಯಿಂದಾಗಿ ರಸ್ತೆಗೆ ಜರಿದ ಗುಡ್ಡ-ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟ ಎಸ್.ಡಿ.ಪಿ.ಐ!!

ಬೆಳ್ಳಾರೆ:ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ವರುಣನ ಆರ್ಭಟ ಹೆಚ್ಚಿದ್ದು ಅಲ್ಲಲ್ಲಿ ಗುಡ್ಡ ಕುಸಿತ, ಪ್ರವಾಹದಂತಹ ಪ್ರಸಂಗಗಳು ಬೆಳಕಿಗೆ ಬರುತ್ತಲೇ ಇವೆ. ಈ ನಡುವೆ ಬೆಳ್ಳಾರೆಯಲ್ಲೂ ರಸ್ತೆಗೆ ಗುಡ್ಡ ಕುಸಿದಿದ್ದು, ಕೂಡಲೇ ಕಾರ್ಯಪ್ರವೃತ್ತರಾದ ಎಸ್.ಡಿ.ಪಿ.ಐ ಕಾರ್ಯಕರ್ತರ ತಂಡ ಮಣ್ಣು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟ ಘಟನೆಯೊಂದು ನಡೆದಿದೆ.


Ad Widget

Ad Widget

Ad Widget

Ad Widget

Ad Widget

Ad Widget

ಬೆಳ್ಳಾರೆಯ ವೆಂಕಟರಮಣ ದೇವಸ್ಥಾನದ ಸಮೀಪದ ಮುಖ್ಯ ರಸ್ತೆಗೆ ಮಳೆಯಿಂದಾಗಿ ಗುಡ್ಡವೊಂದು ಕುಸಿದು ಸಂಚಾರಕ್ಕೆ ತೊಡಕಾಗಿತ್ತು. ಕೂಡಲೇ ವಿಷಯ ತಿಳಿದ ಎಸ್ ಡಿ ಪಿ ಐ ಕಾರ್ಯಕರ್ತರು ಮಣ್ಣು ತೆರವುಗೊಳಿಸಿ ಇತರರಿಗೆ ಮಾದರಿಯಾಗಿದ್ದಾರೆ. ಈ ಸಂದರ್ಭದಲ್ಲಿ ಬೆಳ್ಳಾರೆ ಗ್ರಾಮ ಸಮಿತಿಯ ಅಧ್ಯಕ್ಷ ಶಾಹಿದ್ ಬೆಳ್ಳಾರೆ, ಉಪಾಧ್ಯಕ್ಷರಾದ ಶಫಿಕ್ ಬೆಳ್ಳಾರೆ, ಕಾರ್ಯದರ್ಶಿ ಜಾಬಿರ್, ಬೂತ್ ಅಧ್ಯಕ್ಷರಾದ ಸದ್ದಾಂ, ಆಸಿರ್, ಸ್ಥಳೀಯರಾದ ಅತಾವುಲ್ಲ ಹಾಗೂ ಇತರ ಕಾರ್ಯಕರ್ತರು ಪಾಲ್ಗೊಂಡಿದ್ದರು.

error: Content is protected !!
Scroll to Top
%d bloggers like this: