Breaking news | ಜುಲೈ 9 ರಿಂದ ಮದ್ಯ ಮಾರಾಟ ಬಂದ್ !

ಬೆಂಗಳೂರು: ಮದ್ಯ ಪೂರೈಕೆ ವ್ಯವಸ್ಥೆಯಲ್ಲಿನ ಲೋಪಗಳಿಂದಾಗಿ, ನಾವು ಮದ್ಯ ಮಾರಾಟ ಬಂದ್ ಮಾಡಿ ಉಗ್ರ ಹೋರಾಟ ನಡೆಸುತ್ತೆವೆಂದು ಮದ್ಯ ಮಾರಾಟಗಾರರ ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷರು ಹೇಳಿದ್ದಾರೆ. ಈ ಮೂಲಕ ಎಣ್ಣೆ ಪ್ರಿಯರಿಗೆ ಮದ್ಯ ಸಿಗದೇ ಇರುವ ಚಾನ್ಸ್ ಜಾಸ್ತಿ ಆಗಿದೆ. ಮದ್ಯಪ್ರಿಯರಲ್ಲಿ ಆತಂಕ ಶುರುವಾಗಿದೆ. ಕಾರಣ ಅನಿರ್ದಿಷ್ಟ ಕಾಲ ಮದ್ಯ ಮಾರಾಟ ಬಂಧ್ ಆಗುವ ಸಂಭವ.

ರಾಜ್ಯ ಸರ್ಕಾರ, ಮದ್ಯ ಪೂರೈಕೆ ವ್ಯವಸ್ಥೆಯಲ್ಲಿನ ಲೋಪಗಳನ್ನು ಸರಿಪಡಿಸದಿದ್ದರೆ, ಜುಲೈ 9ರಿಂದ ಮದ್ಯ ಮಾರಾಟ ಬಂದ್ ಮಾಡಲಾಗುವುದು ಎಂದು ಮದ್ಯ ಮಾರಾಟಗಾರರ ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ಎಸ್.ಗುರುಸ್ವಾಮಿ ಎಚ್ಚರಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮದ್ಯ ಖರೀದಿಗೆ ಅನುಸರಿಸಬೇಕಾದ ಪ್ರಕ್ರಿಯೆಯಲ್ಲಿ ಹತ್ತಾರು ಗೊಂದಲಗಳಿವೆ. ಸಕಾಲದಲ್ಲಿ ಮದ್ಯ ಪೂರೈಕೆಯಾಗದೇ ಬಾರ್ ಮಾಲೀಕರು ಸಂಕಷ್ಟ ಅನುಭವಿಸುವಂತಾಗಿದೆ. ನಮ್ಮನ್ನು ಹೀಗೇಕೆ ಗೋಳು ಹೊಯ್ದುಕೊಳ್ತಿದ್ದೀರಿ?’ ಎಂದು ಪ್ರಶ್ನಿಸಿದ್ದಾರೆ.

ಏಪ್ರಿಲ್ 4 ರಿಂದ ಮದ್ಯ ಮಾರಾಟದ ಹೊಸ ಪದ್ಧತಿ ಆರಂಭವಾಗಿದೆ. ಈ ಮೊದಲು ಕೆ ಎಸ್ ಬಿಸಿಎಲ್ ಅಕೌಂಟ್ ಗೆ ಹಣ ಹಾಕಿದರೆ ಮೊದಲು ನಮಗೆ ಬೇಕಾದ ಮದ್ಯ ಸುಲಭವಾಗಿ ಸಿಗುತ್ತಿತ್ತು. ಬಿಲ್ಲಿಂಗ್ ವ್ಯವಸ್ಥೆ ಮ್ಯಾನ್ಯುವಲ್ ಆಗಿ ಇತ್ತು. ಈಗ ವೆಬ್ ಇಂಡೆಂಟಿಂಗ್ ವ್ಯವಸ್ಥೆ ಜಾರಿಯಾದಾಗಿನಿಂದ ಎಲ್ಲವನ್ನೂ ಹಿಂದಿನ ದಿನವೇ ಪೂರ್ಣಗೊಳಿಸಬೇಕು.

ಸಗಟು ಮದ್ಯ ಖರೀದಿದಾರರಿಗೇ ಸಂಕಷ್ಟ ಎದುರಾಗಿದೆ ಎನ್ನುತ್ತಾ, ಸಗಟು ಮದ್ಯ ಖರೀದಿದಾರರ ಸಂಕಷ್ಟಗಳನ್ನು ಎಳೆಎಳೆಯಾಗಿ ಬಿಡಿಸಿಟ್ಟ ಅವರು, ಮೊದಲು ವೆಬ್​ಸೈಟ್​ಗೆ ಲಾಗಿನ್ ಆಗಿ ನಮ್ಮಲ್ಲಿ ಬೇಡಿಕೆಯಿರುವ ಬ್ರಾಂಡ್​ಗಳ ಮದ್ಯ ಆಯ್ಕೆ ಮಾಡಿಕೊಳ್ಳಬೇಕು. ಆದರೆ ಲಾಗಿನ್ ಆಗುವ ಅವಧಿಯನ್ನು ಮೊದಲು ಬೆಳಿಗ್ಗೆ 9 ಗಂಟೆಗೆ ನಿಗದಿಪಡಿಸಿದ್ದರು. ನಂತರ ಸಂಜೆ 5ರಿಂದ 6 ಗಂಟೆಗೆ ಅವಕಾಶ ಮಾಡಿಕೊಟ್ಟರು ಎಂದು ಹೇಳಿದರು. ಈಗಂತೂ ಪರಿಸ್ಥಿತಿ ಸಂಪೂರ್ಣ ಹದಗೆಟ್ಟಿದೆ. ಜುಲೈ 1ರಿಂದ ರಾಜ್ಯದಲ್ಲಿ ಎಲ್ಲಿಯೂ ಸಮರ್ಪಕ ರೀತಿಯಲ್ಲಿ ಮದ್ಯ ಖರೀದಿ ಸಾಧ್ಯವಾಗುತ್ತಿಲ್ಲ. ಒಂದೆಡೆ ಲೈಸೆನ್ಸ್​ಗಳು ನವೀಕರಣಗೊಂಡಿವೆ. ಇನ್ನೊಂದೆಡೆ ಸರ್ವ್ ವ್ಯವಸ್ಥೆ ಹಾಳಾಗಿದೆ. ಇಂದು ಮುಂಜಾನೆಯಿಂದ ಇಡೀ ಪ್ರಕ್ರಿಯೆ ಸಂಪೂರ್ಣ ಸ್ಥಗಿತಗೊಂಡಿದೆ ಎಂದು ವಿಷಾದಿಸಿದರು.

ಮದ್ಯ ಮಾರಾಟಗಾರರ ಪರಿಸ್ಥಿತಿಯ ಬಗ್ಗೆ ಸರ್ಕಾರದ ಗಮನ ಸೆಳೆಯಲು ಯತ್ನಿಸಿದ್ದೇವೆ. ಆರ್ಥಿಕ ಇಲಾಖೆ, ಅಬಕಾರಿ ಇಲಾಖೆ, ಕೆಎಸ್​ಬಿಸಿಎಲ್ ವ್ಯವಸ್ಥಾಪಕ ನಿರ್ದೇಶಕರು, ಇ-ಆಡಳಿತದ ಅಧಿಕಾರಿಗಳು ಎಲ್ಲರಿಗೂ ಮನವಿ ಮಾಡಿದ್ದೇವೆ. ಆದರೂ ಪರಿಸ್ಥಿತಿ ಸುಧಾರಿಸುತ್ತಿಲ್ಲ. ಇದೇ ಪರಿಸ್ಥಿತಿ ಮುಂದುವರಿದರೆ ನಮ್ಮ ಪರಿಸ್ಥಿತಿ ಕಷ್ಟವಾಗುತ್ತದೆ. ಮುಂದಿನ 24 ಗಂಟೆಗಳ ಒಳಗೆ ಮದ್ಯ ಖರೀದಿ ಇಂಡೆಂಟಿಂಗ್ ವ್ಯವಸ್ಥೆಯನ್ನು ಗಂಟೆಯೊಳಗೆ ಸರಿಪಡಿಸಬೇಕು. ಇಲ್ಲದಿದ್ದರೆ ಮದ್ಯ ಮಾರಾಟವನ್ನು ನಿಲ್ಲಿಸಿ ಉಗ್ರ ಹೋರಾಟ ಮಾಡುತ್ತೇವೆ. ಅದಕ್ಕೆ ಅವಕಾಶ ಕೊಡಬೇಡಿ ಎಂದು ಆಗ್ರಹಿಸಿದರು.

ಸರ್ಕಾರವು ಮದ್ಯ ಮಾರಾಟಗಾರರ ತಾಳ್ಮೆ ಪರಿಶೀಲಿಸುವುದು ಸರಿಯಲ್ಲ. ಪರಿಸ್ಥಿತಿ ಸುಧಾರಿಸದಿದ್ದರೆ ಮದ್ಯ ಮಾರಾಟದ ಬಂದ್ ಸೇರಿದಂತೆ ಹಲವು ರೀತಿಯ ಉಗ್ರ ಹೋರಾಟಕ್ಕೆ ಮುಂದಾಗಬೇಕಾಗುತ್ತದೆ. ಈಗಾಗಲೇ ರಾಜ್ಯದ ಕೆಲವೆಡೆ ಅನಿವಾರ್ಯವಾಗಿ ಕೆಲವು ಮದ್ಯದ ಅಂಗಡಿಗಳಿಗೆ ಮ್ಯಾನ್ಯುವಲ್ ಆಗಿಯೇ ಮದ್ಯ ಖರೀದಿಗೆ ಅವಕಾಶ ಮಾಡಿಕೊಡಲಾಗಿದೆ. ಆದರೆ ಅವರು ಬೇಡಿಕೆ ಇಟ್ಟ ಮದ್ಯದ ಬ್ರಾಂಡ್​ಗಳು ಸಿಗುತ್ತಿಲ್ಲ. ಒಟ್ಟಾರೆ ಇಂಡೆಂಟಿಂಗ್ ವ್ಯವಸ್ಥೆಯೇ ಹಾಳಾಗಿದೆ. ಏನಾಗಿದೆ ಎಂಬುದನ್ನು ಪರಿಶೀಲಿಸಿ ಸರಿಪಡಿಸಬೇಕಿದೆ ಎಂದು ವಿನಂತಿಸಿದರು.

Leave A Reply

Your email address will not be published.