ದಕ್ಷಿಣ ಕನ್ನಡ ಶಾಲಾ ಕಾಲೇಜಿಗೆ ಮಹತ್ವದ ಆದೇಶ


Ad Widget

Ad Widget

ಜಿಲ್ಲೆಯಲ್ಲಿ ಕಳೆದ ಮಂಗಳವಾರದಿಂದ ವಿಪರೀತ ಮಳೆ ಸುರಿಯುತ್ತಿದ್ದು, ನಿರಂತರವಾಗಿ ರೆಡ್ ಅಲರ್ಟ್ ಘೋಷಣೆಯಾಗುತ್ತಿದೆ. ಈ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಕಳೆದ ನಾಲ್ಕು ದಿನಗಳಿಂದ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ, ಪದವಿ ಕಾಲೇಜು, ಸ್ನಾತಕೋತ್ತರ ಪದವಿ, ಡಿಪ್ಲೊಮಾ, ಐಟಿಐ ಸೇರಿದಂತೆ ಸರ್ಕಾರಿ, ಅನುದಾನಿತ, ಖಾಸಗಿ ವಿದ್ಯಾಸಂಸ್ಥೆಗಳಿಗೆ ರಜೆ ಸಾರಲಾಗಿದ್ದು, ಶನಿವಾರವೂ ರಜೆ ಮುಂದುವರಿಯಲಿದೆ.


Ad Widget

ಈ ಅವಧಿಯಲ್ಲಿ ನಿರ್ವಹಿಸಬೇಕಾದ ಪಠ್ಯಗಳಿಗೆ ರಜೆಯಿಂದಾಗಿ ಸಮಸ್ಯೆಯಾಗಿದ್ದು, ಶೈಕ್ಷಣಿಕ ವರ್ಷದ ಪಠ್ಯಕ್ರಮದ ಮೇಲೂ ಪರಿಣಾಮ ಬೀರಲಿದೆ. ಈ ಅಂಶವನ್ನು ಗಮನದಲ್ಲಿಟ್ಟುಕೊಂಡು ಮಳೆಗಾಗಿ ನೀಡಿದ ರಜೆಯ ಅವಧಿಯಲ್ಲಿ ನಿರ್ವಹಿಸಬೇಕಾದ ಪಠ್ಯಗಳನ್ನು ಇತರ ಸಾರ್ವತ್ರಿಕ ರಜೆಗಳಂದು ಸರಿದೂಗಿಸಬೇಕು ಎಂದು ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.

ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಜಿಲ್ಲೆಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಶಾಲಾ ಕಾಲೇಜುಗಳಿಗೆ ನೀಡಲಾದ ರಜೆಯ ಅವಧಿಯಲ್ಲಿ ನಿರ್ವಹಿಸಬೇಕಾಗಿದ್ದ ಪಠ್ಯಗಳನ್ನು ಇತರ ಸಾರ್ವತ್ರಿಕ ರಜಾದಿನಗಳಂದು ಸರಿದೂಗಿಸಬೇಕು ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಶಿಕ್ಷಣ ಸಂಸ್ಥೆಗಳಿಗೆ ಸೂಚಿಸಿದ್ದಾರೆ.

Ad Widget

Ad Widget

Ad Widget

1 thought on “ದಕ್ಷಿಣ ಕನ್ನಡ ಶಾಲಾ ಕಾಲೇಜಿಗೆ ಮಹತ್ವದ ಆದೇಶ”

  1. Pingback: ದಕ್ಷಿಣ ಕನ್ನಡ ಶಾಲಾ ಕಾಲೇಜಿಗೆ ಮಹತ್ವದ ಆದೇಶ-MY PERSONAL BLOG – MY PERSONAL BLOG – My Blog

error: Content is protected !!
Scroll to Top
%d bloggers like this: