ಅಮರನಾಥ ಯಾತ್ರೆ ಸ್ಥಗಿತ । ಇಲ್ಲಿನ ಯಾತ್ರಿಕರಿಗೆ ಮಹತ್ವದ ಸೂಚನೆ ನೀಡಿದ ಜಿಲ್ಲಾಡಳಿತ
ದಕ್ಷಿಣ ಕಾಶ್ಮೀರದ ಪ್ರಖ್ಯಾತ ಅಮರನಾಥ ಗುಹೆಯ ಬಳಿ ಶುಕ್ರವಾರ ಸಂಭವಿಸಿದ ಭಾರಿ ಮಳೆಯಿಂದಾಗಿ ಕೃತಕ ನೆರೆ ಉಂಟಾಗಿ ಇದುವರೆಗೂ 16 ಮಂದಿ ಸಾವಿಗಿಡಗಿದ್ದಾರೆ.ಅಲ್ಲದೇ 60 ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.
ದ.ಕ. ಜಿಲ್ಲಾಡಾಳಿತ ಅಮರನಾಥ ಯಾತ್ರೆ ಯಾರಾದರೂ ಕೈಗೊಂಡಿದ್ದಲ್ಲಿ ಪ್ರಕಟಣೆ ಮೂಲಕ ಸಹಾಯವಾಣಿ ನಂಬರ್ ನೀಡಿದೆ.
ಪವಿತ್ರ ಕ್ಷೇತ್ರವಾದ ಅಮರನಾಥ ಗುಹೆ ಬಳಿ ಶುಕ್ರವಾರ ಸಂಜೆ 5.30ರ ಸುಮಾರಿಗೆ ಮೇಘಸ್ಫೋಟ ಸಂಭವಿಸಿದೆ. ಇದರಿಂದ ಅಮಧನಾಥ ಯಾತ್ರೆ ಮಾರ್ಗದಲ್ಲಿ ಪ್ರವಾಹದ ಸ್ಥಿತಿ ನಿರ್ಮಾಣವಾಗಿ ಭಾರೀ ಪ್ರಮಾಣದಲ್ಲಿ ನೀರು ಹರಿದು ಬಂದಿದೆ. ಧಿಡೀರನೇ ಜೋರಾಗಿ ನೀರು ಹರಿದು ಬಂದಿದ್ದರಿಂದ ಯಾತ್ರೆಯ ಮಾರ್ಗದಲ್ಲಿ ಯಾತ್ರಾರ್ಥಿಗಳು ತಂಗಲು ನಿರ್ಮಿಸಿದ್ದ ಟೆಂಟ್ ಗಳು ಪ್ರವಾಹದ ನೀರಿನ ಹೊಡೆತಕ್ಕೆ ಸಿಕ್ಕಿ ಕೊಚ್ಚಿಕೊಂಡು ಹೋಗಿವೆ. ಈ ಟೆಂಟ್ ಗಳಲ್ಲಿದ್ದ ಯಾತ್ರಾರ್ಥಿಗಳು ಪ್ರವಾಹದ ನೀರಿನಲ್ಲಿ ಸಿಲುಕಿ ಸಾವನ್ನಪ್ಪಿದ್ದಾರೆಂದು ವರದಿಯಾಗಿರುತ್ತದೆ. ಮೇಘಸ್ಫೋಟದ ಅನಾಹುತ ಬಳಿಕ ಅಮರನಾಥ ಯಾತ್ರೆಯನ್ನು ಮುಂದಿನ ಆದೇಶದವರೆಗೂ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಆದುದರಿಂದ ಈ ಮೂಲಕ ವಿನಂತಿಸಿಕೊಳ್ಳುವುದೇನೆಂದರೆ, ದಕ್ಷಿಣ ಕನ್ನಡ ಜಿಲ್ಲೆಯಿಂದ ಪವಿತ್ರ ಕ್ಷೇತ್ರವಾದ ಅಮರನಾಥ ಕ್ಷೇತ್ರ ಯಾತ್ರೆ ಕೈಗೊಂಡು, ಮೇಘಸ್ಫೋಟದ ಪ್ರವಾಹಕ್ಕೆ ಸಿಲುಕಿರುವ ಅಥವಾ ಸುರಕ್ತಿತವಾಗಿರುವ ಯಾತ್ರಾರ್ಥಿಗಳು ಯಾರಾದರೂ ಇದ್ದಲ್ಲಿ ಇವರ ಸಂಬಂಧಿಕರು ಕೂಡಲೇ ಜಿಲ್ಲಾಡಳಿತದ ನಿಯಂತ್ರಣ ಕೊಠಡಿ ಟೋಲ್ ಫ್ರೀ ಸಂಖ್ಯೆ 1077 ಕರೆ ಮಾಡಿ ಸಂಬಂಧಪಟ್ಟ ಯಾತ್ರಾರ್ಥಿಗಳ ವಿವರ / ಮಾಹಿತಿಯನ್ನು ನೀಡುವಂತೆ ಕೋರಿದೆ..
ಈ ಬಗ್ಗೆ ಗಂಭೀರವಾಗಿರುವ ರಾಜ್ಯ ಸರ್ಕಾರ ಕೂಡ ಅಮರನಾಥ ಯಾತ್ರೆಯಲ್ಲಿ ಭಯಾನಕ ಸ್ಥಿತಿಯಲ್ಲಿ ಸಿಲುಕಿರುವ ಭಾರತೀಯರ ನೇರವಿಗಾಗಿ ಸಹಾಯವಾಣಿಯನ್ನು ಆರಂಭಿಸಿದೆ.ಅಮರನಾಥ ಗುಹೆಯ ಬಳಿ ಕರ್ನಾಟಕದ ಯಾವುದೇ ವ್ಯಕ್ತಿಯೂ ಸಿಕ್ಕಿಬಿದ್ದಲ್ಲಿ 080-1070, 22340676 ಕರೆ ಮಾಡುವ ಮೂಲಕ ಅಥವಾ incomedmkar@gmail. Com ಗೆ ಇಮೇಲ್ ಮಾಡಿ ಸಂಪರ್ಕಿಸಿದ್ದಲ್ಲಿ ಸರ್ಕಾರ ಅಗತ್ಯ ಸಹಾಯ ಮಾಡಲಿದೆ ಎಂದು ತಿಳಿಸಿದೆ.
ಸಹಾಯವಾಣಿ ಸಂಖ್ಯೆ :
NDRF.
011-23438252, 011-23438253.
ಕಾಶ್ಮೀರಿ ವಿಭಾಗ ಸಹಾಯವಾಣಿ :
0194 -2496240
ದೇವಳ ಮಂಡಳಿಯ ಸಹಾಯವಾಣಿ :0194-2313149.