ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪಿ ಯು ಇಲಾಖೆಯಿಂದ ಮಹತ್ವದ ಮತ್ತೊಂದು ಮಾಹಿತಿ !
2021-22ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಬರೆದ ವಿದ್ಯಾರ್ಥಿಗಳಿಗೆ ಉತ್ತರ ಪತ್ರಿಕೆಯ ಸ್ಕ್ಯಾನ್ ಪ್ರತಿ ಪಡೆಯಲು ಅವಕಾಶ ನೀಡಲಾಗಿತ್ತು. ಈಗಾಗಲೇ ಅವಕಾಶ ನೀಡಲಾಗಿದ್ದು, ಈಗ ಅರ್ಜಿ ಸಲ್ಲಿಸಲು ದಿನಾಂಕವನ್ನು ವಿಸ್ತರಿಸಲಾಗಿದೆ.
ಸ್ಕ್ಯಾನ್ ಪ್ರತಿ ಪಡೆಯಲು ಮತ್ತು ಮರುಮೌಲ್ಯಮಾಪನ ಮತ್ತು ಮರುಎಣಿಕೆಗೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಪದವಿ ಪೂರ್ವ ಶಿಕ್ಷಣ ಇಲಾಖೆ ಅಧಿಕೃತ ವೆಬ್ಸೈಟ್ www.pue.karnataka.gov.in ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.
ಈ ಹಿಂದೆ ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿ ಪಡೆಯಲು ದಿನಾಂಕ 30-06-2022ರವರೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಇನ್ನೂ ಸ್ಕ್ಯಾನ್‌ಪ್ರತಿ ಡೌನ್‌ಲೋಡ್ ಮಾಡಿಕೊಳ್ಳಲು 10-07 2022 ರವರೆಗೆ ಅವಕಾಶ ನೀಡಲಾಗಿತ್ತು. ಈಗ ಆ ದಿನಾಂಕವನ್ನು ವಿಸ್ತರಿಸಲಾಗಿದೆ. ಉತ್ತರ ಪತ್ರಿಕೆಯ
ಸ್ಕ್ಯಾನ್ ಪ್ರತಿ ಡೌನ್‌ಲೋಡ್ ಮಾಡಿಕೊಳ್ಳಲು 15-07 2022ರವರೆಗೆ ಅವಕಾಶ ನೀಡಲಾಗಿದೆ.
ಇನ್ನೂ ಉತ್ತರ ಪತ್ರಿಕೆ ಮರುಮೌಲ್ಯಮಾಪನ ಮತ್ತು ಮರುಎಣಿಕೆಗಾಗಿ ಅರ್ಜಿ ಸಲ್ಲಿಸಲು( ಸ್ಕ್ಯಾನ್‌ಪ್ರತಿ ಪಡೆದುಕೊಂಡವರು ಮಾತ್ರ) ದಿನಾಂಕ 13-07-2022ರ ವರೆಗೆ ಅವಕಾಶ ನೀಡಲಾಗಿತ್ತು. ಈಗ ದಿನಾಂಕವನ್ನು ವಿಸ್ತರಿಸಲಾಗಿದ್ದು, ಮರುಮೌಲ್ಯಮಾಪನ ಮತ್ತು ಮರುಎಣಿಕೆಗಾಗಿ 18-07-2022ರ ವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ನಿಗದಿತ ದಿನಾಂಕದೊಳಗೆ ಆನ್‌ಲೈನ್ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳಿಗೆ ಹಂತ ಹಂತವಾಗಿ ಸ್ಕ್ಯಾನ್ ಪ್ರತಿಗಳನ್ನು ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾಗುವುದು. ಈ ಬಗ್ಗೆ ಅಪ್‌ಲೋಡ್ ಮಾಡಿರುವ ವಿದ್ಯಾರ್ಥಿಗಳಿಗೆ SMS ಮೂಲಕ ಸಂದೇಶ ರವಾನಿಸಲಾಗುವುದು. ಸಂದೇಶ ಸ್ವೀಕರಿಸಿದ ವಿದ್ಯಾರ್ಥಿಗಳು ಸಂಬಂಧಿಸಿದ ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿಯನ್ನು pue.karnataka.govt.in ನಲ್ಲಿ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ.
ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳಿಗೆ ಸೂಚನೆ
ವಿದ್ಯಾರ್ಥಿಗಳು ಉತ್ತರ ಪತ್ರಿಕೆಯ ಸ್ಕ್ಯಾನ್ ಪ್ರತಿಗಳಿಗೆ ಅರ್ಜಿ ಸಲ್ಲಿಸಿ ಪಡೆದ ವಿಷಯಗಳಿಗೆ ಮಾತ್ರ ಮರುಮೌಲ್ಯಮಾಪನ/ ಮರುಎಣಿಕೆಗಾಗಿ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.
ಮರುಮೌಲ್ಯಮಾಪನಕ್ಕಾಗಿ ಅರ್ಜಿ ಸಲ್ಲಿಸಿರುವ ವಿಷಯಗಳಿಗೆ ಮರುಎಣಿಕೆಗೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರವುದಿಲ್ಲ,
ಆನ್‌ಲೈನ್‌ನಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.
ನಿಗದಿಯಾಗಿರುವ ಶುಲ್ಕವನ್ನು ಆನ್‌ಲೈನ್ ಮೂಲಕ ಬೆಂಗಳೂರು ಒನ್, ಕರ್ನಾಟಕ ಒನ್ ಅಥವಾ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ(ಕಾರ್ಪೋರೇಷನ್ ಬ್ಯಾಂಕ್)ಗಳ ರಾಜ್ಯದ ಯಾವುದೇ ಶಾಖೆಯ ಮೂಲಕ ಪಾವತಿ ಮಾಡಲು ಅವಕಾಶವಿರುತ್ತದೆ.
ಸ್ಕ್ಯಾನ್ ಪ್ರತಿ ಅರ್ಜಿ ಸಲ್ಲಿಸಲು ಪ್ರತಿ ವಿಷಯಕ್ಕೆ- 530
ರೂಪಾಯಿ.
ಮರುಮೌಲ್ಯಮಾಪನ ಅರ್ಜಿ ಸಲ್ಲಿಸಲು ಪ್ರತಿ ವಿಷಯಕ್ಕೆ -1,670 ರೂಪಾಯಿ.
ಅಂಕಗಳ ಮರುಎಣಿಕೆಗೆ ಯಾವುದೇ ಶುಲ್ಕ
ಇರುವುದಿಲ್ಲ.
ಅರ್ಜಿ ಸಲ್ಲಿಸಲು ಇರುವ ಪ್ರಮುಖ ದಿನಾಂಕಗಳು
ಸ್ಕ್ಯಾನ್ ಪ್ರತಿ ಡೌನ್‌ಲೋಡ್ ಮಾಡಿಕೊಳ್ಳಲು ಪ್ರಾರಂಭ ಹಾಗೂ ಕೊನೆಯ ದಿನಾಂಕ – 06-07-2022 ರಿಂದ
15 07-2022
ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಹಾಗೂ ಮರುಎಣಿಕೆಗೆ ಅರ್ಜಿ ಸಲ್ಲಿಸಲು ದಿನಾಂಕ- 07-07
2022 ರಿಂದ 18-07-2022ರವರೆಗೆ.
ಉತ್ತರ ಪತ್ರಿಕೆ ಸ್ಕ್ಯಾನ್ ಪ್ರತಿ ಪಡೆಯುದು ಹೇಗೆ?
ಅಧಿಕೃತ ವೆಬ್ಸೈಟ್ www.pue.karnataka.gov.in ಭೇಟಿ ನೀಡಿ. ಓಪನ್ ಆದ ಮುಖಪುಟದಲ್ಲಿ Answer Sheet Scanned Copy ಎಂದು ಇರುತ್ತದೆ ಆ ಲಿಂಕ್ ಮೇಲೆ ಕ್ಲಿಕ್ ಮಾಡಿ. ನಂತರ ದ್ವಿತೀಯ ಪಿಯುಸಿ ಪರೀಕ್ಷೆಯ ನೋಂದಣಿ ಸಂಖ್ಯೆ ನಮೂದಿಸಿ. ನೀವು ಯಾವ ವಿಷಯದ ಸ್ಕ್ಯಾನ್ ಪ್ರತಿ ಪಡೆಯಬೇಕು ಆ ವಿಷಯದ ಮೇಲೆ ಕ್ಲಿಕ್ ಮಾಡಿ. ಆಗ ನಿಮಗೆ ನಿಮ್ಮ ಉತ್ತರ ಪತ್ರಿಕೆಯ ಸ್ಕ್ಯಾನ್ ಪ್ರತಿ ದೊರೆಯುತ್ತದೆ. ನಂತರ ಅದನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.