“ಕುರ್ಬಾನಿಯಾಗಿ 14 ವರ್ಷ ಮೇಲ್ಪಟ್ಟ ಕೋಣದ ವಧೆಗೆ ಕಾನೂನಿನಲ್ಲಿ ಅವಕಾಶ ಇದೆ” ಸರ್ಕಾರದ ನಿರ್ಧಾರ ಸ್ಪಷ್ಟಪಡಿಸಿ -ಯು.ಟಿ ಖಾದರ್

ಮಂಗಳೂರು : ಬಕ್ರೀದ್ ಹಿನ್ನೆಲೆಯಲ್ಲಿ ಕುರ್ಬಾನಿಯಾಗಿ 14 ವರ್ಷ ಮೇಲ್ಪಟ್ಟ ಕೋಣದ ವಧೆಗೆ ಕಾನೂನಿನಲ್ಲಿ ಅವಕಾಶ ಇದೆ. ಹಾಗಾಗಿ ಈ ಬಗ್ಗೆ ಸರ್ಕಾರ ಸ್ಪಷ್ಟನೆ ನೀಡಬೇಕು. ಈ ಬಗ್ಗೆ ಗೊಂದಲ ಸೃಷ್ಟಿಸುವ ಅಗತ್ಯವಿಲ್ಲ ಎಂದು ಅಕ್ರಮ ಗೋಹತ್ಯೆ ಮಾಡಿದರೆ ಆಸ್ತಿ ಮುಟ್ಟುಗೋಲು ಹಾಕುವ ಮಂಗಳೂರು ಶಾಸಕ ಡಾ. ಭರತ್ ಶೆಟ್ಟಿ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ ಯು ಟಿ ಖಾದರ್.

ಯಾರೂ ಕಾನೂನು ಮೀರಿ ಹೋಗಬಾರದು.
ಕಾನೂನು ವ್ಯಾಪ್ತಿಯಲ್ಲಿ ಪ್ರಾಣಿವಧೆಗೆ
ಅವಕಾಶವಿದೆ, ಅದರ ಸ್ಪಷ್ಟ ನಿಯಮಾವಳಿ ಸರ್ಕಾರ ಜನತೆಗೆ ತಿಳಿಸಬೇಕು, ಯಾರೂ ಕಾನೂನು ಮೀರಿ ನಡೆಯಬಾರದು ಎಂದು ಮಾಜಿ ಸಚಿವ ಹಾಗೂ ಕಾಂಗ್ರೆಸ್ ಶಾಸಕ ಯು.ಟಿ. ಖಾದರ್ ಹೇಳಿದ್ದಾರೆ.

ಮಂಗಳೂರು ನಗರ ಉತ್ತರ ಶಾಸಕರಾದ ಡಾ.ಭರತ್ ಶೆಟ್ಟಿಯವರು ನಮ್ಮ ರಾಜ್ಯ ಸರಕಾರ ಜಾರಿಗೆ ತಂದಿರುವ ಕಾನೂನನ್ನು ಕಟ್ಟುನಿಟ್ಟಾಗಿ ಜಾರಿಗೆ ತಂದಲ್ಲಿ ಅದರ ಉದ್ದೇಶ ಈಡೇರಿದಂತಾಗುತ್ತದೆ. ಆರೋಪಿಗಳ ಸ್ವತ್ತುಗಳನ್ನು ಮುಟ್ಟುಗೋಲು ಹಾಕಲು ಅಧಿಕಾರಿಗಳಿಗೆ ಕಾಯ್ದೆಯಲ್ಲಿಯೇ ಅಧಿಕಾರ ನೀಡಲಾಗಿದೆ. ಅಧಿಕಾರಿಗಳು ಖಡಕ್ಕಾಗಿ ಬಳಸುವ ಮೂಲಕ ಗೋಹಂತಕರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ. ಗೋಹಂತಕರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳಲು ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ ಎಂಬ ಮಾತನ್ನು ನಿನ್ನೆ ಹೇಳಿದ್ದಾರೆ.

Leave A Reply