ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ ನಲ್ಲಿ ಉದ್ಯೋಗವಕಾಶ | ಒಟ್ಟು ಹುದ್ದೆ- 37, ಅರ್ಜಿ ಸಲ್ಲಿಸಲು ಕೊನೆ ದಿನ- ಆಗಸ್ಟ್ 14

ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್​ನಲ್ಲಿ 37 ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದ್ದು, 10ನೇ ತರಗತಿ ಹಾಗೂ ಪದವಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. 37 ಹುದ್ದೆಗಳಲ್ಲಿ 30 ಹುದ್ದೆಗಳನ್ನು ಪುರಷರು ಮತ್ತು 7 ಹುದ್ದೆಗಳು ಮಹಿಳೆಯರಿಗೆ ಮೀಸಲಾಗಿದೆ.

ಸಂಸ್ಥೆ : ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ (ITBP)
ಹುದ್ದೆ : ಸಬ್ ಇನ್ಸ್‌ಪೆಕ್ಟರ್
ಹುದ್ದೆಗಳ ಸಂಖ್ಯೆ : 37
ಉದ್ಯೋಗ ಸ್ಥಳ : ಅಖಿಲ ಭಾರತ
ವೇತನ : 35400-112400 ರೂ. ಪ್ರತಿ ತಿಂಗಳು

ಶೈಕ್ಷಣಿಕ ಅರ್ಹತೆ: ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು 10 ನೇ, ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ ಪೂರ್ಣಗೊಳಿಸಿರಬೇಕು.

ವಯೋಮಿತಿ: ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯುಕನಿಷ್ಠ 20 ವರ್ಷಗಳು ಮತ್ತು ಗರಿಷ್ಠ 25 ವರ್ಷಗಳನ್ನು ಹೊಂದಿರಬೇಕು.

ವಯೋಮಿತಿ ಸಡಿಲಿಕೆ: ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ ನಿಯಮಗಳ ಪ್ರಕಾರ

ಅರ್ಜಿ ಶುಲ್ಕ: ಅರ್ಜಿ ಶುಲ್ಕವಿಲ್ಲ

ಆಯ್ಕೆ ಪ್ರಕ್ರಿಯೆ:
ಪಿಇಟಿ, ಪಿಎಸ್​ಟಿ, ಲಿಖಿತ ಪರೀಕ್ಷೆ, ದಾಖಲೆ, ವೈದ್ಯಕೀಯ ಪರೀಕ್ಷೆ

ಪ್ರಮುಖ ದಿನಾಂಕಗಳು
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 16 ಜುಲೈ 2022
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 14 ಆಗಸ್ಟ್ 2022

ಅರ್ಜಿ ಸಲ್ಲಿಕೆ ವಿಧಾನ:

*ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ.
*ಅಧಿಕೃತ ವೆಬ್​ಸೈಟ್​ ಮೂಲಕ ಅರ್ಜಿ ನಮೂನೆಯನ್ನು ಡೌನ್​ಲೋಡ್​ ಮಾಡಿ ಸ್ವಯಂ ದೃಢೀಕರಿಸಿದ ಅರ್ಜಿಗಳನ್ನು ಮೇಲ್ಕಂಡ ಇಮೇಲ್​ ವಿಳಾಸಕ್ಕೆ ನಿಗದಿತ ದಿನಾಂಕದೊಳಗೆ ಕಳುಹಿಸಬೇಕು.
*ಅರ್ಜಿಜೊತೆಗೆ ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು, ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವಗಳನ್ನು ಅರ್ಜಿ ಜೊತೆ ಲಗತ್ತಿಸಿ.
*ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಸಲ್ಲಿಸು ಬಟನ್ ಅನ್ನು ಕ್ಲಿಕ್ ಮಾಡಿ

ಅಧಿಕೃತ ವೆಬ್‌ಸೈಟ್: itbpolice.nic.in

Leave A Reply

Your email address will not be published.