KSRTC ನೌಕರರ ಸಂಘದ ಗೌರವ ಅಧ್ಯಕ್ಷ ಸ್ಥಾನದಿಂದ ರೈತ ನಾಯಕ ಕೋಡಿಹಳ್ಳಿ ಚಂದ್ರಶೇಖರ್ ವಜಾ

ಬೆಂಗಳೂರು : ರೈತ ನಾಯಕ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಭ್ರಷ್ಟಾಚಾರದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಅವರನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಸಂಘಡಾ ಗೌರವ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿದೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ತಾಪಂ ಅಧ್ಯಕ್ಷ ಆರ್.ಚಂದ್ರಶೇಖರ್, ಇತ್ತೀಚೆಗೆ ನಡೆದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದರು. ಕಳೆದ ವರ್ಷ ಏಪ್ರಿಲ್ ತಿಂಗಳಿನಲ್ಲಿ ನಡೆದ ನಮ್ಮ ಪ್ರತಿಭಟನೆಯ ಸಮಯದಲ್ಲಿ, ನಮ್ಮ ಹೋರಾಟವನ್ನು ಪ್ರತಿನಿಧಿಸಲು ಕೋಡಿ ಚಂದ್ರಶೇಖರ್ ಅವರನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಸಂಘವು ಅವರನ್ನು ಗೌರವ ಅಧ್ಯಕ್ಷರನ್ನಾಗಿ ಮಾಡಲಾಗಿತ್ತು. ಇದೀಗ ಅವರ ಮೇಲೆ ಬಂದಿರುವ ಗುರುತರ ಆರೋಪಗಳ ನಂತರ ನಾವು ಅವರನ್ನು ಹುದ್ದೆಯಿಂದ ತೆಗೆದುಹಾಕಿದ್ದೇವೆ ಎಂದು ಹೇಳಿದರು. ಈ ಸಂದರ್ಭ, ಕಳೆದ ವರ್ಷ ಏಪ್ರಿಲ್ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಸಾರಿಗೆ ನಿಗಮಗಳಿಂದ ಅಮಾನತುಗೊಂಡ ಎಲ್ಲಾ ಸಾರಿಗೆ ನೌಕರರನ್ನು ಸರ್ಕಾರ ಪುನಃ ಕೆಲಸಕ್ಕೆ ಸೇರಿಸಿಕೊಳ್ಳಬೇಕು ಎಂದು ಅವರು ಒತ್ತಾಯಿಸಿದರು.