ವಸತಿ ರಹಿತರೇ ನಿಮಗೊಂದು ಸಿಹಿಸುದ್ದಿ|

ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮ, ಬೆಂಗಳೂರು ಇವರ ಆದೇಶ ಹಾಗೂ ನಗರ ಆಶ್ರಯ ಸಮಿತಿ ತೀರ್ಮಾನದಂತೆ ನಗರದ ಗೋಪಿಶೆಟ್ಟಿಕೊಪ್ಪ ಗ್ರಾಮದ ಒಟ್ಟು 19 ಎಕರೆ 23 ಗುಂಟೆ ಜಮೀನಿನಲ್ಲಿ ಜಿ+2 ಮಾದರಿಯ ಮನೆಗಳನ್ನು ನಗರದ ನಿವೇಶನರಹಿತರಿಗೆ ಹಂಚುವ ಸಲುವಾಗಿ ಹೊಸದಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಜುಲೈ 01 ರಿಂದ ಜುಲೈ 31 ರವರೆಗೆ ಅರ್ಜಿ ಸಲ್ಲಿಸಬಹುದು. ಬ್ಯಾಂಕ್ ಮೂಲಕ ನಿಗದಿತ ಶುಲ್ಕ ಪಾವತಿಸಲು ಆಗಸ್ಟ್ 07 ಕಡೆಯ ದಿನವಾಗಿದೆ.

ವೆಬ್‌ಸೈಟ್ Shivamoggacitycorp.org ಇಲ್ಲಿ 18 ವರ್ಷ ಮೇಲ್ಪಟ್ಟ ಮಹಿಳಾ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದು(ಪುರುಷ ಅಭ್ಯರ್ಥಿಯಾಗಿದ್ದಲ್ಲಿ ಮಾಜಿ ಸೈನಿಕ, ವಿಕಲಚೇತನ, ವಿಧುರ ಹಾಗೂ ಹಿರಿಯ ನಾಗರೀಕ ಅಭ್ಯರ್ಥಿಯಾಗಿರಬೇಕು).

ಸಾಮಾನ್ಯ ಪ್ರವರ್ಗ 1, 2(ಎ), 2(ಬಿ), 3(ಎ), 3(ಬಿ) ಗೆ ಸೇರಿದ ಅರ್ಜಿದಾರರಿಗೆ ಅರ್ಜಿ ಶುಲ್ಕ ರೂ.200/- ಇಎಂಡಿ ಮೊತ್ತ ರೂ.8000/- ಒಟ್ಟು 8200 ಮತ್ತು ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡಕ್ಕೆ ಸೇರಿದ ಅರ್ಜಿದಾರರಿಗೆ ಅರ್ಜಿ ಶುಲ್ಕ do.100/-, ಇಎಂಡಿ.5000/- ಒಟ್ಟು 5100 ಶುಲ್ಕವನ್ನು ಶಿವಮೊಗ್ಗ ನಗರದ ಕೆನರಾ ಬ್ಯಾಂಕ್‌ನ ಎಲ್ಲಾ ಶಾಖೆಗಳಲ್ಲಿ/ಬ್ಯಾಂಕ್ ಆಫ್ ಬರೋಡಾದ ಎಸ್.ಆರ್.ಶಾಖೆಗಳಲ್ಲಿ/ಇಂಡಿಯನ್ ಬ್ಯಾಂಕ್‌ನ ಮಹಾನಗರಪಾಲಿಕೆ ಶಾಖೆ ಹಾಗೂ ಶಿವಮೊಗ್ಗ ಒನ್ ಕೇಂದ್ರಗಳಲ್ಲಿ ನಗದು ಅಥವಾ ಡೆಬಿಟ್ ಕಾರ್ಡ್ ಮೂಲಕ ಪಾವತಿಸಬಹುದು.

ಅರ್ಜಿದಾರರು ಶಿವಮೊಗ್ಗ ನಗರ ಪ್ರದೇಶದಲ್ಲಿ ವಾಸವಾಗಿರಬೇಕು. ಬಿಪಿಎಲ್/ಅಂತ್ಯೋದಯ ಪಡಿತರ ಚೀಟಿಯನ್ನು ಹೊಂದಿರಬೇಕು. ಅರ್ಜಿದಾರ ಮತ್ತು ಅವರ ಕುಟುಂಬದವರು ಸ್ವಂತ ನಿವೇಶನ/ಮನೆಯನ್ನು ಹೊಂದಿರಬಾರದು. ಬೇರೆ ಯಾವುದೇ ಯೋಜನೆಯಡಿ ನಿವೇಶನ/ವಸತಿ ಸೌಲಭ್ಯ ಪಡೆದಿರಬಾರದು. ಅರ್ಜಿದಾರರ ಹೆಸರಿನಲ್ಲಿ ಇರುವ ಇತ್ತೀಚಿನ ವಾರ್ಷಿಕ ಆದಾಯ ಪ್ರಮಾಣಪತ್ರ(ರೂ.86,000 ಕಡಿಮೆ ಆದಾಯ ಹೊಂದಿರಬೇಕು). ತೃತೀಯ ಲಿಂಗಿಗಳು ಸಹ ಅರ್ಜಿಯನ್ನು ಸಲ್ಲಿಸಬಹುದು.

ಅರ್ಜಿದಾರರು ಇತ್ತೀಚಿನ 01 ಪಾಸ್‌ಪೋರ್ಟ್ ಸೈಜಿನ ಕಲರ್ ಭಾವಚಿತ್ರ, ಆಧಾರ್ ಕಾರ್ಡ್, ಬಿಪಿಎಲ್ ಪಡಿತರ ಚೀಟಿ, ಪ.ಜಾ/ಪ.ಪಂ/ವಿಕಲಚೇತನ/ಹಿರಿಯನಾಗರೀಕ/ ಮಾಜಿ ಸೈನಿಕ/ಸೈನಿಕರ ವಿಧವೆಯರು/ವಿಧುರರು/ ಸ್ವಾತಂತ್ರ್ಯ ಯೋಧರು ಸಕ್ಷಮ ಪ್ರಾಧಿಕಾರದಿಂದ ಪಡೆದಂತಹ ಪ್ರಮಾಣ ಪತ್ರವನ್ನು ಹೊಂದಿರಬೇಕು. ಅರ್ಜಿದಾರರ ಹೆಸರಿನಲ್ಲಿ ಚಾಲ್ತಿಯಲ್ಲಿರುವ ಬ್ಯಾಂಕಿನ ಪಾಸ್ ಪುಸ್ತಕ, ವಾರ್ಷಿಕ ಆದಾಯ ಪ್ರಮಾಣ ಪತ್ರ ಈ ದಾಖಲೆಗಳನ್ನು ಹೊಂದಿದ್ದು ಎಲ್ಲಾ ಮೂಲ ದಾಖಲಾತಿಗಳು ಹಾಗೂ ದಾಖಲಾತಿಗಳ ಸಂಖ್ಯೆಗಳನ್ನು ಆನ್‌ಲೈನ್ ಅರ್ಜಿ ಸಲ್ಲಿಸುವ ಸಮಯದಲ್ಲಿ ಮೂಲ ದಾಖಲೆಯಂತೆ ಮಾಹಿತಿಯನ್ನು ಸ್ಪಷ್ಟವಾಗಿ ಸಲ್ಲಿಸುವುದು.

ಅಪೂರ್ಣ ವಿವರ ನೀಡಿದಲ್ಲಿ ಅಥವಾ ತಪ್ಪು ಮಾಹಿತಿ ನೀಡಿದ್ದಲ್ಲಿ ಅರ್ಜಿದಾರರಿಗೆ ಯಾವುದೇ ತಿಳುವಳಿಕೆ ನೀಡದೆ ಅರ್ಜಿಯನ್ನು ತಿರಸ್ಕರಿಸಲಾಗುವುದು ಎಂದು ಶಿವಮೊಗ್ಗ ನಗರ ಆಶ್ರಯ ಸಮಿತಿ ಅಧ್ಯಕ್ಷರು ತಿಳಿಸಿದ್ದಾರೆ.

Leave A Reply

Your email address will not be published.