PM Kisan : ರೂ.6000 ಈ ರೈತ ಕುಟುಂಬಗಳಿಗೆ ದೊರಕಲ್ಲ, ಯಾಕೆ?

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 11ನೇ ಕಂತನ್ನು ಮೇ 31ರಂದು ಬಿಡುಗಡೆ ಮಾಡಿದ್ದಾರೆ. ಈ ಯೋಜನೆಯ ಲಾಭವನ್ನು ರೈತರು ಪಡೆದಿದ್ದಾರೆ. ಅಂದ ಹಾಗೇ ಈ ಯೋಜನೆಯಲ್ಲಿ ವಾರ್ಷಿಕವಾಗಿ ಆರು ಸಾವಿರ ಲಭ್ಯವಾಗಲಿದೆ. ಪ್ರತಿ ಕಂತಿನಲ್ಲಿ ಎರಡು ಸಾವಿರ ರೂಪಾಯಿ ಅರ್ಹ ರೈತ ಕುಟುಂಬಕ್ಕೆ ಸಿಗಲಿದೆ. ಆಧಾರ್ ಸಂಖ್ಯೆಯೊಂದಿಗೆ ಲಿಂಕ್ ಆಗಿರುವ ರೈತರ ಬ್ಯಾಂಕ್ ಖಾತೆಗೆ ಈ ಹಣವು ಜಮೆ ಆಗಲಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಸುಮಾರು 10 ಕೋಟಿ ಫಲಾನುಭವಿಗಳಿಗೆ ಸುಮಾರು 21,000 ಕೋಟಿ ರೂಪಾಯಿ ಬಿಡುಗಡೆ ಮಾಡಿದ್ದಾರೆ.

ಈ ಯೋಜನೆಯಲ್ಲಿ ಮೂರು ಕಂತಿನಂತೆ ಹಣವನ್ನು ಜಮೆ ಮಾಡಲಾಗುತ್ತದೆ. ಮೊದಲ ಕಂತು ಏಪ್ರಿಲ್-ಜುಲೈ ನಡುವೆ ಬಿಡುಗಡೆಯಾಗುತ್ತದೆ. ಎರಡನೇಯ ಕಂತು ಆಗಸ್ಟ್ ನವೆಂಬರ್ ನಡುವೆ ಬಿಡುಗಡೆಯಾಗಲಿದೆ. ಮೂರನೇ ಕಂತು ಡಿಸೆಂಬರ್ ಮಾರ್ಚ್ ನಡುವೆ ಬಿಡುಗಡೆಯಾಗಲಿದೆ. ಹಾಗಾದರೆ ಈ ಯೋಜನೆಗೆ ಯಾರೆಲ್ಲ ಅರ್ಹರು ? ಬನ್ನಿ ತಿಳಿಯೋಣ!

2019ರ ಫೆಬ್ರವರಿಯಲ್ಲಿ ಪಿಎಂ ಕಿಸಾನ್ ಯೋಜನೆ ಆರಂಭವಾದಾಗ ಸಣ್ಣ ರೈತ ಕುಟುಂಬ ಅಂದರೆ ಕಡಿಮೆ ಜಮೀನು ಹೊಂದಿರುವವರಿಗೆ ಮಾತ್ರವೇ ಈ ಯೋಜನೆಯ ಲಾಭ ದೊರಕುತ್ತಿತ್ತು. ಸುಮಾರು ಎರಡು ಎಕರೆಯಷ್ಟು ಜಮೀನು ಹೊಂದಿರುವವರು ಈ ಯೋಜನೆಯ ಲಾಭ ಪಡೆಯಲು ಅರ್ಹರಾಗಿದ್ದರು. ಆದರೆ 2019ರ ಜೂನ್ ತಿಂಗಳಿನಲ್ಲಿ ಈ ಯೋಜನೆಯಲ್ಲಿ ಪರಿಷ್ಕರಣೆ ಮಾಡಲಾಗಿದೆ. ಈಗ ಎಷ್ಟು ಎಕರೆ ಜಮೀನು ಇದ್ದರೂ ಕೂಡಾ ಈ ಯೋಜನೆಯ ಫಲವನ್ನು ಪಡೆಯಲು ಸಾಧ್ಯವಾಗುತ್ತದೆ.

ಈ ಯೋಜನೆಯ ಪ್ರಯೋಜನ ಯಾರಿಗೆ ಇಲ್ಲ : ಸಾಂಸ್ಥಿಕ ಭೂಮಿ ಹೊಂದಿರುವವರು, ಪ್ರಸ್ತುತ ಕಾರ್ಯನಿರ್ವಹಣೆ ಮಾಡುತ್ತಿರುವ ಅಥವಾ ನಿವೃತ್ತಿ ಹೊಂದಿರುವ ಅಧಿಕಾರಿಗಳು, ರಾಜ್ಯ ಅಥವಾ ಕೇಂದ್ರ ಸರ್ಕಾರದ ಉದ್ಯೋಗಿಗಳು, ಸರ್ಕಾರಿ ಸ್ವಾಯತ್ತ ಸಂಸ್ಥೆಗಳಿಗೆ, ವೈದ್ಯರು, ಇಂಜಿನಿಯರ್‌ಗಳು ಮತ್ತು ವಕೀಲರಂತಹ ವೃತ್ತಿಪರರು, 10,000 ರೂ.ಗಿಂತ ಹೆಚ್ಚಿನ ಮಾಸಿಕ ಪಿಂಚಣಿ ಹೊಂದಿರುವ ನಿವೃತ್ತ ಪಿಂಚಣಿದಾರರು, ಕಳೆದ ಮೌಲ್ಯಮಾಪನ ವರ್ಷದಲ್ಲಿ ಆದಾಯ ತೆರಿಗೆ ಪಾವತಿಸಿದವರು ಈ ಯೋಜನೆಯ ಪ್ರಯೋಜನಗಳಿಗೆ ಅರ್ಹರಲ್ಲ.

Leave A Reply

Your email address will not be published.