KSP : ಪೊಲೀಸ್ ಕಾನ್ಸ್ಟೇಬಲ್ ಹುದ್ದೆಯ ಆಕಾಂಕ್ಷಿಗಳೇ ನಿಮಗೊಂದು ಗುಡ್ ನ್ಯೂಸ್ !!!
ಕರ್ನಾಟಕ ಪೊಲೀಸ್ ಇಲಾಖೆಯು 2022-23ನೇ ಸಾಲಿನಲ್ಲಿ ಈ ಕೆಳಕಂಡ ವೃಂದಗಳ ನೇಮಕಾತಿಗೆ ಸರ್ಕಾರದ ಅನುಮತಿ ದೊರೆತಿದ್ದು, ನೇಮಕ ಪ್ರಕ್ರಿಯೆಯನ್ನು ಶೀಘ್ರದಲ್ಲೇ ಕೈಗೊಳ್ಳಲಾಗುವುದು ಎಂದು ತಿಳಿಸಿದೆ. ಆ ಹುದ್ದೆಯ ಕುರಿತು ವಿವರಗಳನ್ನು ಈ ಕೆಳಗೆ ನೀಡಲಾಗಿದೆ. ಇವುಗಳನ್ನು ಓದಿ ಪೊಲೀಸ್ ಹುದ್ದೆ ಆಕಾಂಕ್ಷಿಗಳು ತಯಾರಿ ಮಾಡಿಕೊಳ್ಳಬಹುದು.
ಈ ಹುದ್ದೆಗಳಿಗೆ ಶೀಘ್ರದಲ್ಲಿಯೇ (ಒಂದು ವಾರದಲ್ಲಿಯೇ) ಅಧಿಸೂಚನೆ ಪ್ರಕಟಿಸಲಿದ್ದು, ಆಸಕ್ತರು ನಿಗದಿತ ಅರ್ಹತೆ ಹೊಂದಿದಲ್ಲಿ ಈಗಿನಿಂದಲೇ ಸ್ಪರ್ಧಾತ್ಮಕ ಪರೀಕ್ಷೆಗೆ ತಕ್ಕ ಸಿದ್ಧತೆಯಲ್ಲಿ ತೊಡಗಿಕೊಳ್ಳಬಹುದು.
ಹುದ್ದೆಗಳ ವಿವರ : ಪೊಲೀಸ್ ಸಬ್ಇನ್ಸ್ಪೆಕ್ಟರ್ 300
ಪೊಲೀಸ್ ಕಾನ್ಸ್ಟೇಬಲ್ (ಸಿವಿಲ್) : 1500
ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ (ಸಿಎಆರ್ ಮತ್ತು
ಡಿಎಆರ್) : 3550
ಒಟ್ಟು ಹುದ್ದೆಗಳು: 5350
ವಿದ್ಯಾರ್ಹತೆ : ಪೊಲೀಸ್ ಸಬ್ಇನ್ಸ್ಪೆಕ್ಟರ್ : ಯಾವುದೇ ಪದವಿ ಪಾಸ್
ಪೊಲೀಸ್ ಕಾನ್ಸ್ಟೇಬಲ್ (ಸಿವಿಲ್) : ದ್ವಿತೀಯ ಪಿಯುಸಿ ಪಾಸ್ | ತತ್ಸಮಾನ ವಿದ್ಯಾರ್ಹತೆ
ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ (ಸಿಎಆರ್ ಮತ್ತು ಡಿಎಆರ್) : ದ್ವಿತೀಯ ಪಿಯುಸಿ ಪಾಸ್ / ತತ್ಸಮಾನ ವಿದ್ಯಾರ್ಹತೆ
ಪದವಿಗೆ ತತ್ಸಮಾನ ವಿದ್ಯಾರ್ಹತೆಯ ಬಗ್ಗೆ ಈ ಕೆಳಗಿನಂತೆ ಇದೆ.
– ಯುಜಿಸಿ ಇಂದ ಮಾನ್ಯತೆ ಪಡೆದ ವಿವಿಗಳು, ಖಾಸಗಿ / ಡೀಮ್ ಹಾಗೂ ಹೊರರಾಜ್ಯದ ವಿವಿಗಳಿಂದ ಪಡೆದ ಪದವಿಗಳು. ( ಆದರೆ ವಿವಿಗಳ ಪದವಿಯ ತತ್ಸಮಾನದ ಬಗ್ಗೆ ಶಿಕ್ಷಣಕ್ಕೆ ಸಂಬಂಧಿಸಿದ, ಆಯಾ ವಿವಿ ಮತ್ತು ಉದ್ಯೋಗಕ್ಕೆ ಸಂಬಂಧಿಸಿದಂತೆ ಉದ್ಯೋಗ ನೀಡುವ ಪ್ರಾಧಿಕಾರ ತೀರ್ಮಾನ ತೆಗೆದುಕೊಳ್ಳುತ್ತದೆ).
– ಅಂಚೆ ಮತ್ತು ದೂರ ಶಿಕ್ಷಣದ ಮುಖಾಂತರ ಪಡೆದಿರುವ ಪದವಿಗಳು ಅರ್ಹ. (ಆದರೆ ನಿಯಮಬಾಹಿರವಾಗಿ ಕೆಲವು ವಿಶ್ವವಿದ್ಯಾಲಯಗಳು ಯುಜಿಸಿಯ ಮಾನ್ಯತೆ ಪಡೆಯದೇ ನಡೆಸುತ್ತಿದ್ದು, ಅಂಚೆ ಮತ್ತು ದೂರ ಶಿಕ್ಷಣದ ಕೋರ್ಸ್ಗಳನ್ನು ಹಾಗೂ ಅಂಚೆ ಮತ್ತು ದೂರ ಶಿಕ್ಷಣದ ಮುಖಾಂತರ ಪಡೆದ ತಾಂತ್ರಿಕ ಪದವಿಗಳನ್ನು ನೇಮಕಾತಿಗೆ ಪರಿಗಣಿಸುವುದಿಲ್ಲ.)
ವಯೋಮಿತಿ : ಅರ್ಜಿ ಸಲ್ಲಿಸಲು ಕನಿಷ್ಠ 21 ವರ್ಷ ಆಗಿರಬೇಕು. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 30 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.
ಎಸ್ಸಿ / ಎಸ್ಟಿ / ಒಬಿಸಿ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 32 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.
ಪೊಲೀಸ್ ಇಲಾಖೆಯ ಪಿಎಸ್ಐ, ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕ ಪ್ರಕ್ರಿಯೆಯಲ್ಲಿ ಲಿಖಿತ ಪರೀಕ್ಷೆ, ಸಹಿಷ್ಣುತಾ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ ವೈದ್ಯಕೀಯ ಪರೀಕ್ಷೆ, ಮೂಲದಾಖಲೆಗಳ ಪರಿಶೀಲನೆ ಎಲ್ಲವೂ ಕಡ್ಡಾಯವಾಗಿ ಇರುತ್ತವೆ.