ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಕೆನರಾ ಬ್ಯಾಂಕ್ ನಲ್ಲಿ ಉದ್ಯೋಗವಕಾಶ | ಇ-ಮೇಲ್ ಕಳುಹಿಸಲು ಕೊನೆದಿನ ಜುಲೈ 23

ಬ್ಯಾಂಕ್ ಉದ್ಯೋಗ ಪಡೆಯಲಿಚ್ಛಿಸುವ ಉದ್ಯೋಗಿಗಳಿಗೆ ಬೆಂಗಳೂರಿನಲ್ಲಿ ಕೆನರಾ ಬ್ಯಾಂಕ್ ನಲ್ಲಿ ಉದ್ಯೋಗವಕಾಶವಿದ್ದು, ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

 

ಮೂರು ವರ್ಷಗಳ ಒಪ್ಪಂದದ ಮೇರೆಗೆ ಈ ಹುದ್ದೆ ಆಯ್ಕೆ ನಡೆಯಲಿದೆ. ಅಗತ್ಯವಿದಲ್ಲಿ ಒಂದು ವರ್ಷ ಹುದ್ದೆ ವಿಸ್ತರಣೆ ನಡೆಯಲಿದೆ. ಈಗಾಗಲೇ ಕೆನರಾ ಬ್ಯಾಂಕ್​ನಲ್ಲಿ​ ಸೇವೆ ನಿರ್ವಹಿಸಿದ ನಿವೃತ್ತರು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಅಭ್ಯರ್ಥಿಗಳು ಗ್ರಾಮೀಣ ಬ್ಯಾಂಕಿಂಗ್​ನಲ್ಲಿ ಅನುಭವ ಹೊಂದಿರಬೆಕು ಜೊತೆಗೆ ಫೈನಾನ್ಸ್​ ವಿಷಯದ ಬಗ್ಗೆ ಅಗತ್ಯ ಅರಿವು ಹೊಂದಿರಬೇಕು.

ಹುದ್ದೆ ಮಾಹಿತಿ ಹುದ್ದೆ ವಿವರ:
ಬ್ಯಾಂಕ್ ಹೆಸರು : ಕೆನರಾ ಬ್ಯಾಂಕ್
ಹುದ್ದೆ : ಮ್ಯಾನೇಜಿಂಗ್ ಟ್ರಸ್ಟಿ
ಹುದ್ದೆ : 1
ಉದ್ಯೋಗ ಸ್ಥಳ : ಬೆಂಗಳೂರು
ವೇತನ : 60000 ರೂ. ಪ್ರತಿ ತಿಂಗಳು

ಶೈಕ್ಷಣಿಕ ಅರ್ಹತೆ: ಕೆನರಾ ಬ್ಯಾಂಕ್ ನೇಮಕಾತಿ ನಿಯಮಗಳ ಪ್ರಕಾರ ಅರ್ಹತೆ ಹೊಂದಿದ್ದು, ಈಗಾಗಲೇ ಕೆನರಾ ಬ್ಯಾಂಕ್​ನಲ್ಲಿ ಸೇವೆ ಸಲ್ಲಿಸಿರಬೇಕು.

ವಯಸ್ಸಿನ ಮಿತಿ: ಕೆನರಾ ಬ್ಯಾಂಕ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 62 ವರ್ಷಗಳು.

ವಯೋಮಿತಿ ಸಡಿಲಿಕೆ:
ಕೆನರಾ ಬ್ಯಾಂಕ್ ನಿಯಮಗಳ ಪ್ರಕಾರ

ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳ ಶಾರ್ಟ್​ಲಿಸ್ಟ್​ ಮಾಡಿ ಸಂದರ್ಶನ ನಡೆಸಲಾಗುವುದು.

ಅರ್ಜಿ ಸಲ್ಲಿಕೆ: ಇಮೇಲ್​ ಮುಖಾಂತರ
ಇಮೇಲ್​ ವಿಳಾಸ: cfat.bangalore@gmail.com

ಪ್ರಮುಖ ದಿನಾಂಕಗಳು:
ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ: 08 ಜುಲೈ 2022
ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ: 23 ಜುಲೈ-2022

ಅರ್ಜಿ ಸಲ್ಲಿಕೆ ವಿಧಾನ:
*ನೇಮಕಾತಿ ಅಧಿಸೂಚನೆ ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ.
*ವೆಬ್​​ಸೈಟ್​​ನಲ್ಲಿ ಲಭ್ಯವಿರುವ ನಿಗದಿತ ಅರ್ಜಿ ನಮೂನೆಯಲ್ಲಿ ಸ್ವಯಂ ದೃಢೀಕರಿಸಿದ ಅರ್ಜಿಗಳನ್ನು ಭರ್ತಿ ಮಾಡಿ ನಿಗದಿತ ದಿನಾಂಕದೊಳಗೆ ಮೇಲ್ಕಂಡ ಇಮೇಲ್​ ವಿಳಾಸಕ್ಕೆ ಕಳುಹಿಸಬೇಕು.
*ಅರ್ಜಿಜೊತೆಗೆ ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು, ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವಗಳನ್ನು ಅರ್ಜಿ ಜೊತೆ ಲಗತ್ತಿಸಿ.

Leave A Reply

Your email address will not be published.