ಮಂಗಳೂರು ಗ್ರಾಮ ಪಂಚಾಯತಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಸಲು ಕೊನೆ ದಿನ- ಜುಲೈ 15, ಮಾಸಿಕ ವೇತನ : 17000 ರೂ.

ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಮಂಗಳೂರು ಗ್ರಾಮ ಪಂಚಾಯತಿಯಲ್ಲಿ ವಿವಿಧ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ. ಸ್ಥಳೀಯ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದು, ಎಸ್​ಎಸ್​ಎಲ್​ಸಿ ಉತ್ತೀರ್ಣರಾಗಿರಬೇಕು.

ಈ ಹುದ್ದೆಗೆ ಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಕೆಗೆ ಅರ್ಹರಾಗಿದ್ದಾರೆ. ಅಭ್ಯರ್ಥಿಗಳು ಮಹಾತ್ಮ ಗಾಂಧಿ ನರೇಗಾ ಯೋಜನೆ ಅಡಿ ಹಿಂದಿನ 3 ಅಥವಾ 2 ವರ್ಷಗಳಲ್ಲಿ 25 ದಿನಗಳಿಗೆ ಕಡಿಮೆ ಇಲ್ಲದಷ್ಟ ಕೂಲಿಗಾರರಾಗಿ ಕೆಲಸ ಮಾಡಿರಬೇಕು.

ಹುದ್ದೆ ಮಾಹಿತಿ ಹುದ್ದೆ ವಿವರ
ಸಂಸ್ಥೆ : ಮಂಗಳೂರು ಗ್ರಾಮ ಪಂಚಾಯಿತಿ
ಹುದ್ದೆ : ಬೇರ್​ ಫುಟ್​​​ ಟೆಕ್ನಿಷಿಯನ್​
ಹುದ್ದೆಗಳ ಸಂಖ್ಯೆ : 14
ಕಾರ್ಯ ನಿರ್ವಹಣೆ ಸ್ಥಳ : ಮಂಗಳೂರು
ವೇತನ : 17000 ರೂ ಮಾಸಿಕ

ವಿದ್ಯಾರ್ಹತೆ:
ಅಧಿಸೂಚನೆ ಪ್ರಕಾರ ಅಭ್ಯರ್ಥಿಯೂ 10ನೇ ತರಗತಿಯನ್ನು ಪಾಸ್​ ಮಾಡಿರಬೇಕು.

ವಯಸ್ಸಿನ ಮಿತಿ: ಅಧಿಸೂಚನೆ ಅನುಸಾರ ಅಭ್ಯರ್ಥಿಯು ಕನಿಷ್ಠ 18 ಮತ್ತು ಗರಿಷ್ಠ 45 ವರ್ಷ ಮೀರಿರಬಾರದು.

ವಿಶೇಷ ಸೂಚನೆ:
ಈ ಹುದ್ದೆಗೆ ಎಲ್ಲಾ ವರ್ಗದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಹಿಳಾ ಅಭ್ಯರ್ಥಿಗಳಿಗೆ ಪ್ರಾಧ್ಯಾನ್ಯತೆ ಇರಲಿದೆ.

ಅರ್ಜಿ ಸಲ್ಲಿಕೆ ವಿಧಾನ : ಆಫ್​ಲೈನ್ ಮುಖಾಂತರ​

ಅರ್ಜಿ ಶುಲ್ಕ: ವಿನಾಯಿತಿ ನೀಡಲಾಗಿದೆ

ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ: ಜುಲೈ 4, 2022
ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜುಲೈ15, 2022

ಅರ್ಜಿ ಸಲ್ಲಿಕೆ ಪ್ರಕ್ರಿಯೆ
-ಈ ಹುದ್ದೆಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕೆಳಗಿನ ವಿಳಾಸಕ್ಕೆ ಖುದ್ದು ಹೋಗಿ ಅರ್ಜಿ ಸಲ್ಲಿಸಬೇಕು.
-ಅರ್ಜಿ ಪಡೆಯ ಸ್ಥಳ: ಮಂಗಳೂರು ನಗರದ ಉರ್ವ ಸ್ಟೋರ್​ನಲ್ಲಿರುವ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿರುವ ಅಭಿವೃದ್ಧಿ ಶಾಖೆಯಲ್ಲಿ ಸಿಗುವ ನಿಗದಿತ ಅರ್ಜಿಯನ್ನು ಅಭ್ಯರ್ಥಿಗಳು ಭರ್ತಿ ಮಾಡಿ ಸಲ್ಲಿಸಬೇಕು.
-ಅರ್ಜಿಯಲ್ಲಿ ಅಭ್ಯರ್ಥಿ ವಿವರ, ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಮೊಬೈಲ್ ಸಂಖ್ಯೆಯನ್ನು, ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆಯನ್ನು ನಮೂದಿಸಬೇಕು.
-ಅರ್ಜಿ ಭರ್ತಿ ವೇಳೆ ಮಹಾತ್ಮಗಾಂಧಿ ನರೇಗಾ ಯೋಜನೆಯಲ್ಲಿ ಕಾರ್ಯ ನಿರ್ವಹಣೆ ಮಾಡಿದ ವಿವರವನ್ನು ನೀಡಬೇಕು.
-ಜಾತಿ ಮೀಸಲಾತಿ ಪ್ರಮಾಣ ಪತ್ರವಿದ್ದಲ್ಲಿ ಆ ಪತ್ರವನ್ನು ಅರ್ಜಿಯೊಂದಿಗೆ ಲಗತ್ತಿಸಬೇಕು.

ದಾಖಲೆಗಳು :
ಎಸ್​ಎಸ್​ಎಲ್​ಸಿ ಅಂಕಪಟ್ಟಿ
ನರೇಗಾ ಜಾಬ್​ ಕಾರ್ಡ್​
ಜಾತಿ ಪ್ರಮಾಣ ಪತ್ರ

Leave A Reply

Your email address will not be published.