ಅನಂತ್ ನಾಗ್ ಸೇರಿ ಮೂವರು ಗಣ್ಯರಿಗೆ ಗೌರವ ಡಾಕ್ಟರೇಟ್ ; ಇಲ್ಲಿದೆ ಹೆಚ್ಚಿನ ಮಾಹಿತಿ

ಬೆಂಗಳೂರು ಉತ್ತರ ವಿವಿಯ ಎರಡನೇ ಘಟಿಕೋತ್ಸವು ಶುಕ್ರವಾರ ಜುಲೈ 15ರಂದು ಕೋಲಾರದ ‘ನಂದಿನಿ ಪ್ಯಾಲೇಸ್’ ಸಭಾಂಗಣದಲ್ಲಿ ನಡೆಯಲಿದೆ. ಈ ಸಂದರ್ಭದಲ್ಲಿ ಅನಂತ್ ನಾಗ್ ಸೇರಿ ಮೂವರು ಗಣ್ಯರಿಗೆ ಗೌರವ ಡಾಕ್ಟರೇಟ್ ನೀಡಲಾಗುತ್ತಿದೆ.

ಕಳೆದ ಐದು ದಶಕಗಳ ಕಾಲ ಕರ್ನಾಟಕದ ಸಾಂಸ್ಕೃತಿಕ ರಂಗಕ್ಕೆ ಅನಂತನಾಗ್‌ ಅವರು ನೀಡಿದ ಕೊಡುಗೆಯನ್ನು ಗುರುತಿಸಿ ಅವರಿಗೆ ಕಲಾ ವಿಭಾಗದಲ್ಲಿ ಗೌರವ ಡಾಕ್ಟರೇಟ್ ನೀಡಲಾಗುತ್ತಿದೆ.

ಅನಂತ್ ನಾಗ್ ಮಾತ್ರವಲ್ಲದೆ, ಹಿರಿಯ ಶೆಹನಾಯಿ ವಾದಕರಾದ ಪದ್ಮಶ್ರೀ ಎಸ್. ಬಲ್ಲೇಶ್ ಭಜಂತ್ರಿಯವರಿಗೂ ಡಾಕ್ಟರೇಟ್ ಗೌರವ ನೀಡಲಾಗುತ್ತಿದೆ. ಅವರು ಸಂಗೀತ ಕ್ಷೇತ್ರಕ್ಕೆ ನೀಡಿದ ಕೊಡುಗೆಯನ್ನು ಗಮನದಲ್ಲಿಟ್ಟುಕೊಂಡು ಈ ಗೌರವ ಸಲ್ಲಿಕೆ ಆಗುತ್ತಿದೆ. ಲಿಟರೇಚರ್ ಪದವಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದ ಕೊಡುಗೆಗಾಗಿ ಬೆಂಗಳೂರಿನ ಶರದ್ ಶರ್ಮ ಅವರಿಗೆ ‘ಡಾಕ್ಟರ್ ಆಫ್ ಸೈನ್ಸ್’ ಪದವಿ ನೀಡಲಾಗುತ್ತಿದೆ.

ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಈ ಘಟಿಕೋತ್ಸವದ ಅಧ್ಯಕ್ಷತೆ ವಹಿಸಲಿದ್ದಾರೆ. ಡಾ.ಸಿ.ಎನ್. ಮಂಜುನಾಥ್ ಘಟಿಕೋತ್ಸವದಲ್ಲಿ ಮಾತನಾಡಲಿದ್ದಾರೆ. ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರು ಘಟಿಕೋತ್ಸವದಲ್ಲಿ ಭಾಗಿಯಾಗಲಿದ್ದಾರೆ.

Leave A Reply

Your email address will not be published.