ದ್ವಿತೀಯ ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ |    ದ್ವಿತೀಯ ಪಿಯು ಸ್ಕ್ಯಾನ್ ಪ್ರತಿ ಪಡೆಯಲು ಸಹಾಯವಾಣಿ ಆರಂಭ – ಪಿಯು ಬೋರ್ಡ್

ಏಪ್ರಿಲ್ – ಮೇ 2022ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ದಿನಾಂಕ 18-06-2022 ರಂದು ಪ್ರಕಟಿಸಲಾಗಿದ್ದು, ವಿದ್ಯಾರ್ಥಿಗಳು ಉತ್ತರ ಪತ್ರಿಕೆಗಳ ಸ್ಕ್ಯಾನ್‌ಪ್ರತಿ ಪಡೆಯಲು ದಿನಾಂಕ 30-06 2022ರವರೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ನಿಗದಿತ ದಿನಾಂಕದೊಳಗೆ
ಆನ್‌ಲೈನ್ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳಿಗೆ ದಿನಾಂಕ
15-07-2022 ರಿಂದ ಹಂತ ಹಂತವಾಗಿ ಪ್ರತಿಗಳನ್ನು ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ.

ದ್ವಿತೀಯ ಪಿಯುಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಉತ್ತರ ಪತ್ರಿಕೆಯ ಸ್ಕ್ಯಾನ್ ಪ್ರತಿ ಪಡೆಯಲು ಅವಕಾಶ ನೀಡಲಾಗಿತ್ತು. ಉತ್ತರ ಪತ್ರಿಕೆಯ ಸ್ಕ್ಯಾನ್ ಪ್ರತಿ ಪಡೆಯಲು ಯಾವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ, ಸ್ಕ್ಯಾನ್ ಪ್ರತಿ ಪಡೆದಿದ್ದರೋ ಆ ವಿದ್ಯಾರ್ಥಿಗಳಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ಮಹತ್ವದ ಮಾಹಿತಿಯೊಂದನ್ನು ನೀಡಿದೆ.

ಈಗ ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತೊಂದು ಪ್ರಕಟಣೆ ಹೊರಡಿಸಿದ್ದು, ಏಪ್ರಿಲ್-ಮೇ 2022ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು 18-06-2022 ರಂದು ಪ್ರಕಟಿಸಿದ್ದು, ವಿದ್ಯಾರ್ಥಿಗಳು ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿ ಡೌನ್‌ಲೋಡ್ ಮಾಡಿಕೊಳ್ಳಲು ದಿನಾಂಕ 15-07 2022ರವರೆಗೆ ಅವಕಾಶ ನೀಡಲಾಗಿದೆ.

ಈ ಬಗ್ಗೆ ಅಪ್‌ಲೋಡ್ ಮಾಡಿರುವ ವಿದ್ಯಾರ್ಥಿಗಳಿಗೆ SMS ಮೂಲಕ ಸಂದೇಶ ರವಾನಿಸಲಾಗುವುದು. ಸಂದೇಶ ಪಡೆದ ವಿದ್ಯಾರ್ಥಿಗಳು ಸಂಬಂಧಿಸಿದ ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿಯನ್ನು pue.karnataka.govt.in ನಲ್ಲಿ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ. ಆದರೆ ವಿದ್ಯಾರ್ಥಿಗಳಿಗೆ ಉತ್ತರ ಪತ್ರಿಕೆಯ ಸ್ಕ್ಯಾನ್ ಪ್ರತಿ ಪಡೆಯಲು ಸಮಸ್ಯೆ ಆಗಿತ್ತು. ಈ ಹಿನ್ನಲೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸಹಾಯವಾಣಿಯನ್ನು ಆರಂಭಿಸಿದೆ.

ವಿದ್ಯಾರ್ಥಿಗಳು ಉತ್ತರ ಪತ್ರಿಕೆಯ ಸ್ಕ್ಯಾನ್ ಪ್ರತಿ ಡೌನ್‌ಲೋಡ್ ಮಾಡಿಕೊಂಡಾಗ,  ಯಾವುದೇ ಪುಟ ಸ್ಕ್ಯಾನ್ ಆಗಿಲ್ಲದಿದ್ದಲ್ಲಿ ಅಥವಾ ಯಾವುದೇ ರೀತಿಯ ನ್ಯೂನ್ಯತೆಗಳು ಕಂಡು ಬಂದಲ್ಲಿ jdexam.dpue@gmail.com ಮೇಲ್ ಗೆ ಮನವಿಯನ್ನು ಕಳುಹಿಸಲು ಸೂಚಿಸಿದೆ. ಈ ಸಂಬಂಧ ಸಹಾಯವಾಣಿ ಸಂಖ್ಯೆ 08023083864 ಅಥವಾ 08023083860 ಕ್ಕೆ ಬೆಳಗ್ಗೆ 10.30 ರಿಂದ ಸಂಜೆ 5 ಗಂಟೆಯವರೆಗೆ ಸಂಪರ್ಕಿಸಲು ಪದವಿ ಪೂರ್ವ ಶಿಕ್ಷಣ ಇಲಾಖೆ ತಿಳಿಸಿದೆ.

Leave A Reply