ಶಿರಾಡಿಘಾಟ್‌ನಲ್ಲಿ ಮತ್ತೆ ಕುಸಿದ ಭೂಮಿ!!; ಸಂಚಾರ ನಿಷೇಧ

ಸಕಲೇಶಪುರ: ಶಿರಾಡಿಘಾಟ್‌ನಲ್ಲಿ ಮತ್ತೆ ಭೂಕುಸಿತವಾಗುತ್ತಿರುವ ಹಿನ್ನೆಲೆಯಲ್ಲಿ ಘನ ವಾಹನಗಳ ಸಂಚಾರ ನಿಷೇಧ ಮಾಡಲಾಗಿದೆ.

 

ಇಂದು ಮಧ್ಯಾಹ್ನದ ವೇಳೆಗೆ, ರಾಜಧಾನಿ ಬೆಂಗಳೂರು ಹಾಗೂ ಬಂದರು ನಗರಿ ಮಂಗಳೂರು ನಡುವೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 75 ರ ಬಳಿ ಮತ್ತೆ ಭೂಕುಸಿತವಾಗಿದೆ. ಈ ಹಿನ್ನೆಲೆಯಲ್ಲಿ ಘನ ವಾಹನಗಳ ಸಂಚಾರಕ್ಕೆ ನಿಷೇಧ ಹೇರಲಾಗಿದ್ದು, ಲಘು ವಾಹನಗಳನ್ನು ಏಕ ಮುಖ ಸಂಚಾರದಂತೆ ಚಲಿಸಲು ಉಪವಿಭಾಗಾಧಿಕಾರಿ ಪ್ರತೀಕ್ ಬಯಾಲ್ ಅವಕಾಶ ನೀಡಿದ್ದಾರೆ.

ಸಕಲೇಶಪುರ ತಾಲ್ಲೂಕಿನ ದೋಣಿಗಲ್ ಸಮೀಪ ವಾರದ ಹಿಂದೆ ಅಲ್ಪ ಪ್ರಮಾಣದಲ್ಲಿ ರಸ್ತೆ ಕುಸಿದಿತ್ತು. ರಸ್ತೆ ಕುಸಿದ ಸ್ಥಳಕ್ಕೆ ಲೋಕೋಪಯೋಗಿ ಸಚಿವ ಸಿ.ಸಿ ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಆದರೆ, ಸಚಿವರು ಭೇಟಿ ನೀಡಿದ ನಾಲ್ಕನೇ ದಿನಕ್ಕೆ ಮತ್ತೆ ಭೂಕುಸಿತವಾಗಿ ಅಪಾಯಕಾರಿ ನಿರ್ಮಾಣವಾಗಿದೆ. ಕಳೆದ ವರ್ಷ ಕೂಡ ಇದೇ ಸ್ಥಳದಲ್ಲಿ ರಸ್ತೆ ಕುಸಿದಿತ್ತು.

Leave A Reply

Your email address will not be published.