WCD : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ನೇಮಕಾತಿ | ಈ ಕೂಡಲೇ ಅರ್ಜಿ ಸಲ್ಲಿಸಿ, ಆ.10 ಅರ್ಜಿ ಸಲ್ಲಿಸಲು ಕೊನೆಯ ದಿನ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಪ್ರಕಟಿಸಲಾಗಿದೆ. ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ನೇಮಕಾತಿ ಸಂಬಂಧ ಅಧಿಸೂಚನೆ ಹೊರಡಿಸಲಾಗಿದೆ.

ಒಟ್ಟು ಆರು ಹುದ್ದೆಗಳು ಖಾಲಿ ಇದ್ದು, ಅವುಗಳ ನೇಮಕಾತಿಗೆ ಇಲಾಖೆ ಮುಂದಾಗಿದೆ. ಈ ಸಂಬಂಧ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಆಗಸ್ಟ್ 10 ಆಗಿದೆ.

ಸರ್ಕಾರಿ ಆದೇಶದ ಅನ್ವಯ ಮಕ್ಕಳ ಹಕ್ಕುಗಳ ರಕ್ಷಣೆಯ ಆಯೋಗವನ್ನು ರಾಜ್ಯ ಸರ್ಕಾರ ಸ್ಥಾಪಿಸಿದ್ದು ಈ ಆಯೋಗಕಕ್ಕೆ ವಕೀಲರ ನೇಮಕಾತಿಗೆ ಇಲಾಖೆ ಮುಂದಾಗಿದೆ. ಈ ಹುದ್ದೆಯನ್ನು 3 ವರ್ಷಗಳ ಒಪ್ಪಂದದ ಆಧಾರದ ಮೇಲೆ ನೇಮಕಾತಿ ನಡೆಸಲಾಗುತ್ತಿದೆ.

ಹುದ್ದೆ : ಮಕ್ಕಳ ಹಕ್ಕುಗಳ ರಕ್ಷಣೆ ಮತ್ತು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರು.

ಒಟ್ಟು ಹುದ್ದೆ : 06

ಶೈಕ್ಷಣಿಕ ಅರ್ಹತೆ: ಮಕ್ಕಳ ಹಕ್ಕುಗಳ ರಕ್ಷಣೆ ಮತ್ತು ಮಕ್ಕಳ ಹಕ್ಕುಗಳ ಪ್ರತಿಪಾದಿಸುವಲ್ಲಿ ಕನಿಷ್ಠ 5 ವರ್ಷ ಅನುಭವವನ್ನು ಹೊಂದಿರಬೇಕು.

ವಯೋಮಿತಿ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಸದಸ್ಯರು ಗರಿಷ್ಠ 57 ವರ್ಷ ಮೀರಿರಬಾರದು.

ಅರ್ಜಿ ಸಲ್ಲಿಕೆ ವಿಧಾನ: ಆಫ್‌ಲೈನ್ ಮುಖಾಂತರ

ಅರ್ಜಿ ಶುಲ್ಕ: ವಿನಾಯಿತಿ ನೀಡಲಾಗಿದೆ.

ಆಯ್ಕೆ ವಿಧಾನ: ಕಾರ್ಯಾನುಭವದ ಆಧಾರದ ಮೇಲೆ ಶಾರ್ಟ್‌ಲಿಸ್ಟ್ ಮತ್ತು ಸಂದರ್ಶನದ ಮೂಲಕ ಅರ್ಜಿ ಸಲ್ಲಿಕೆ

ಪ್ರಮುಖ ದಿನಾಂಕ:
ಅರ್ಜಿ ಅಧಿಸೂಚನೆ ಹೊರಡಿಸಲಾದ ದಿನಾಂಕ: 11 ಜುಲೈ 2022
ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ : ಆಗಸ್ಟ್ 10, 2022

ಅಧಿಕೃತ ಅಧಿಸೂಚನೆ ಪಿಡಿಎಫ್‌ಗೆ ಇಲ್ಲಿ ಕ್ಲಿಕ್ ಮಾಡಿ ಅಧಿಕೃತ ವೆಬ್‌ಸೈಟ್: kscpcr.karnataka.gov.in

ಅರ್ಜಿ ಸಲ್ಲಿಕೆ ವಿಧಾನ : ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ.

-ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಳ್ಳಿ.

-ಮೇಲಿನ ಲಿಂಕ್‌ನಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿ. ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

-ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಕೆಳಕಂಡ ವಿಳಾಸಕ್ಕೆ ನಿಗದಿತ ದಿನಾಂಕದೊಳಗೆ ಅರ್ಜಿಯನ್ನು ಸಲ್ಲಿಸಬೇಕು.

ಅರ್ಜಿ ಸಲ್ಲಿಕೆ ವಿಳಾಸ

ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬಹುಮಹಡಿ ಕಟ್ಟಡ, 1ನೇ ಮಹಡಿ, ಬೆಂಗಳೂರು.

Leave A Reply

Your email address will not be published.