ಅಂಗನವಾಡಿ ಕಾರ್ಯಕರ್ತೆಯರು ಇನ್ನು ಮುಂದೆ ಶಿಕ್ಷಕಿಯರು!!

ಅಂಗನವಾಡಿ ಕಾರ್ಯಕರ್ತೆಯರಿಗೆ ಸಿಹಿ ಸುದ್ದಿಯೊಂದಿದ್ದು, ಅಂಗನವಾಡಿ ಕಾರ್ಯಕರ್ತೆಯರನ್ನು ಶಿಕ್ಷಕಿಯರೆಂದು ಪರಿಗಣಿಸಲು ರಾಷ್ಟ್ರೀಯ ಶಿಕ್ಷಣ ನೀತಿ ಶಿಫಾರಸ್ಸು ಮಾಡಿದೆ.

 

ಅಂಗನವಾಡಿ ಕಾರ್ಯಕರ್ತೆಯರನ್ನು ಈವರೆಗೆ 3 ರಿಂದ 6 ವರ್ಷದೊಳಗಿನ ಮಕ್ಕಳಿಗೆ ಶಿಕ್ಷಣ ಕಲಿಸುವ ಜೊತೆಗೆ ಬಾಣಂತಿಯರು, ಗರ್ಭಿಣಿಯರ ಆರೋಗ್ಯದ ಮೇಲೆ ನಿಗಾ ಇರಿಸಲು, ಪೌಷ್ಟಿಕ ಆಹಾರ ವಿತರಣೆ ಸೇರಿದಂತೆ ಸರ್ಕಾರದ ಹಲವು ಯೋಜನೆಗಳ ಅನುಷ್ಠಾನಕ್ಕಾಗಿ ಬಳಸಿಕೊಳ್ಳಲಾಗುತ್ತಿತ್ತು. ಇನ್ನು ಮುಂದೆ, ಅಂಗನವಾಡಿಗಳ ಜೊತೆಗೆ ಒಂದು ಮತ್ತು ಎರಡನೇ ತರಗತಿಗಳನ್ನು ಸಂಯೋಜಿಸಿ ಶಾಲೆಗಳ ಸ್ವರೂಪ ನೀಡಲು ಶಿಫಾರಸ್ಸು ಮಾಡಿದೆ.

ಇದೀಗ ಅವರನ್ನು ಶಿಕ್ಷಕಿಯರೆಂದು ಪರಿಗಣಿಸಲು ರಾಷ್ಟ್ರೀಯ ಶಿಕ್ಷಣ ನೀತಿ ಶಿಫಾರಸ್ಸು ಮಾಡಿರುವುದರಿಂದ ಅವರು ಪಡೆಯುತ್ತಿರುವ ಗೌರವ ಧನ, ವೇತನವಾಗಿ ಪರಿವರ್ತನೆಯಾಗಲಿದೆ. ಜೊತೆಗೆ ಸೇವಾ ಭದ್ರತೆಯೂ ದೊರೆಯಲಿದೆ. ಉತ್ತರಕಾಂಡ ರಾಜ್ಯವು ಇದನ್ನು ಈಗಾಗಲೇ ಅನುಷ್ಠಾನಗೊಳಿಸಿದ್ದು, ಕರ್ನಾಟಕದಲ್ಲೂ ಇದನ್ನು ಜಾರಿಗೊಳಿಸಲು ನಿರ್ಧರಿಸಲಾಗಿದೆ.

Leave A Reply

Your email address will not be published.