ಉಪರಾಷ್ಟ್ರಪತಿ ಚುನಾವಣೆ: ಎನ್ ಡಿಎ ಅಭ್ಯರ್ಥಿಯಾಗಿ ಜಗದೀಪ್ ಧನಕರ್ ಆಯ್ಕೆ

ಬಿಜೆಪಿ ನೇತೃತ್ವದ ಎನ್‌ಡಿಎ ಮುಂಬರುವ ಉಪರಾಷ್ಟ್ರಪತಿ ಚುನಾವಣೆಯ ಅಭ್ಯರ್ಥಿಯಾಗಿ ಜಗದೀಪ್ ಧನಕರ್ ಅವರನ್ನು ಆಯ್ಕೆ ಮಾಡಿದೆ.

 

ಜಗದೀಪ್ ಧನಕ‌ ಪಶ್ಚಿಮ ಬಂಗಾಳದ
ರಾಜ್ಯಪಾಲರಾಗಿದ್ದಾರೆ. ಇದೀಗ ಮುಂಬರುವ
ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆಗೊಂಡಿದ್ದಾರೆ. ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಜಗದೀಪ್ ಧನಕರ್ ಹೆಸರನ್ನು ಸೂಚಿಸಿದ್ದಾರೆ.

ಜಗದೀಪ್ ಧನಕರ್ ಇಂದು ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾಗಿದ್ದರು. ಕೆಲದಿನಗಳ ಹಿಂದೆ ಗೃಹ ಸಚಿವ ಅಮಿತ್ ಶಾರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಆ ಬಳಿಕ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಭೇಟಿಯಾಗಿ ಸುಮಾರು 40 ನಿಮಿಷಗಳ ಮಾತುಕತೆ ನಡೆಸಿದ್ದರು. ಇದೀಗ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ

Leave A Reply

Your email address will not be published.