ಖಾದಿ ಗ್ರಾಮೋದ್ಯೋಗ ಮಂಡಳಿಯ ಗ್ರೂಪ್ ಬಿ,ಸಿ ಹುದ್ದೆಗೆ ಅರ್ಜಿ ಸಲ್ಲಿಸಿದವರಿಗೆ ಮುಖ್ಯವಾದ ಮಾಹಿತಿ!

ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯಲ್ಲಿ ಗ್ರೂಪ್ ಬಿ ಹಾಗೂ ಗ್ರೂಪ್ ಸಿ ಹುದ್ದೆಗಳ ನೇರ ನೇಮಕಾತಿಗಾಗಿ ನಡೆದ ಆನ್‌ಲೈನ್ ಸ್ಪರ್ಧಾತ್ಮಕ ಪರೀಕ್ಷೆಯ ಎಲ್ಲ ಅಭ್ಯರ್ಥಿಗಳ ಫಲಿತಾಂಶವನ್ನು ಹಾಗೂ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.

 

ಅಭ್ಯರ್ಥಿಗಳು ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯ ಅಧಿಕೃತ ವೆಬ್‌ಸೈಟ್‌
https://khadi.karnataka.gov.in ಗೆ ಭೇಟಿ ನೀಡಿ
ಫಲಿತಾಂಶವನ್ನು ಚೆಕ್ ಮಾಡಬಹುದು.

ಅಭ್ಯರ್ಥಿಗಳು ಓಪನ್ ಆದ ಪೇಜ್‌ನಲ್ಲಿ ಬಲಭಾಗದಲ್ಲಿ ‘ಮತ್ತಷ್ಟು ಓದಿ’ ಎಂದಿರುವಲ್ಲಿ ಕ್ಲಿಕ್ ಮಾಡಿ.

ನಂತರ ಓಪನ್ ಆಗುವ ಇತ್ತೀಚಿನ ಸುದ್ದಿಗಳ ಪೈಕಿ ತಾತ್ಕಾಲಿಕ ಆಯ್ಕೆಪಟ್ಟಿ, ಆಕ್ಷೇಪಣೆ ಸಲ್ಲಿಸಲು ಆನ್‌ಲೈನ್ ಲಿಂಕ್ ಎಲ್ಲವೂ ಲಭ್ಯ ವಿರುತ್ತದೆ. ಕ್ಲಿಕ್ ಮಾಡಿ ಚೆಕ್ ಮಾಡಬಹುದು.

ಖಾದಿ ಮಂಡಳಿಯ ಗ್ರೂಪ್ ಬಿ ಮತ್ತು ಗ್ರೂಪ್ ಸಿ ಹುದ್ದೆಗಳ ಕಲ್ಯಾಣ ಕರ್ನಾಟಕ ಹುದ್ದೆಗಳು ಹಾಗೂ ಮೂಲ ವೃಂದದ ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆಪಟ್ಟಿ ಪ್ರತ್ಯೇಕವಾಗಿ ನೀಡಲಾಗಿದೆ.

ಖಾದಿ ಮಂಡಳಿಯ ಗ್ರೂಪ್ ಬಿ ಮತ್ತು ಗ್ರೂಪ್ ಸಿ ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿಗೆ ಸಂಬಂಧಿಸಿದಂತೆ ಯಾವುದಾದರೂ ಆಕ್ಷೇಪಣೆಗಳಿದ್ದಲ್ಲಿ, ಅಭ್ಯರ್ಥಿಗಳು ದಿನಾಂಕ 28-07-2022 ರ ಸಂಜೆ 05-30 ರ ಒಳಗಾಗಿ ‘ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ನಂ.10, ಜನ್ಮಾಭವನ ರಸ್ತೆ, ಬೆಂಗಳೂರು-52’ ಇಲ್ಲಿಗೆ ಲಿಖಿತವಾಗಿ ಬರೆದು ಸಲ್ಲಿಸಬಹುದಾಗಿದೆ.

ಆಯ್ಕೆ ಪಟ್ಟಿಗೆ ಸಂಬಂಧಿಸಿದಂತೆ, ಅಭ್ಯರ್ಥಿಗಳ ಮೂಲ ದಾಖಲಾತಿಗಳನ್ನು ಪರಿಶೀಲನೆಗಾಗಿ ಹಾಜರುಪಡಿಸಲು ದಿನಾಂಕವನ್ನು ಮುಂದಿನ ದಿನದಲ್ಲಿ ಮಂಡಳಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುತ್ತದೆ.

Leave A Reply

Your email address will not be published.