ಬೈಕ್ ಸ್ಕಿಡ್ | ಇಬ್ಬರು ವಿದ್ಯಾರ್ಥಿಗಳ ದಾರುಣ ಸಾವು

ಕುಂದಾಪುರ : ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಂಬದಕೋಣೆ ಬಳಿಯ ಸೇತುವೆ ಸಮೀಪ ಬೈಕ್ ಸ್ಕಿಡ್ ಆಗಿದ್ದು, ಸವಾರರಿಬ್ಬರು ಸಾವನ್ನಪ್ಪಿದ ದುರ್ಘಟನೆ ಭಾನುವಾರ ಸಂಭವಿಸಿದೆ.

ಆಂಧ್ರಪ್ರದೇಶದ ಆದಿತ್ಯ ರೆಡ್ಡಿ(18) ಮತ್ತು ತರುಣ್ ಕುಮಾರ್ ರೆಡ್ಡಿ( 19) ಸಾವನಪ್ಪಿದವರು. ಇವರಿಬ್ಬರೂ ಉಡುಪಿಯ ಕಾಲೇಜೊಂದರಲ್ಲಿ ಕಲಿಯುತ್ತಿದ್ದು ಅಲ್ಲಿನ ವಿದ್ಯಾರ್ಥಿಗಳಾಗಿದ್ದಾರೆ.

ಸವಾರರು ಕುಂದಾಪುರದಿಂದ ಬೈಂದೂರಿಗೆ ಹೋಗುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದ್ದು, ಸುದ್ದಿ ತಿಳಿದ ತಕ್ಷಣ ಗಂಗೊಳ್ಳಿಯ 24*7 ಆಪತ್ಭಾಂಧವ ಆಂಬ್ಯುಲೆನ್ಸ್ ಚಾಲಕ ಇಬ್ರಾಹಿಂ ಗಂಗೊಳ್ಳಿ ಸ್ಥಳಕ್ಕೆ ಆಗಮಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ನೆರವಾಗಿದ್ದಾರೆ. ಪ್ರದೀಪ್ ಖಾರ್ವಿ ಉಪ್ಪುಂದ, ಚಾಲಕ ಕೃಷ್ಣ ಹಾಗೂ ನದೀಂ ಸಹಕಾರದಿಂದ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಯಿತು.

ಬೈಂದೂರು ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ ಮತ್ತು ಈ ಪ್ರಕರಣ ಪೊಲೀಸ್ ಠಾಣೆಯಲ್ಲಿ ದಾಖಲೆಯಾಗಿದೆ.

Leave A Reply