Breaking news:‌ ಜಮ್ಮುವಿನಲ್ಲಿ ಆಕಸ್ಮಿಕವಾಗಿ ಗ್ರೆನೇಡ್ ಸ್ಫೋಟ, ಇಬ್ಬರು ಸೇನಾಧಿಕಾರಿಗಳು ಸಾವು

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಆಕಸ್ಮಿಕವಾಗಿ ಸ್ಫೋಟಗೊಂಡ ಗ್ರೆನೇಡ್ ಸೇನಾ ಕ್ಯಾಪ್ಟನ್ ಮತ್ತು ಜೂನಿಯರ್ ಕಮಿಷನ್ಡ್ ಅಧಿಕಾರಿ ಇಬ್ಬರನ್ನೂ ಬಲಿ ತೆಗೆದುಕೊಂಡಿದೆ ಎಂದು ಅಧಿಕಾರಿಗಳು ಇಂದು ತಿಳಿಸಿದ್ದಾರೆ.

 

ಭಾನುವಾರ ತಡರಾತ್ರಿ ಪೂಂಚ್‌ನ ಮೆಂಧರ್ ಸೆಕ್ಟರ್‌ನಲ್ಲಿ ಈ ಘಟನೆ ನಡೆದಾಗ ಸೇನಾ ಸಿಬ್ಬಂದಿ ಕರ್ತವ್ಯದಲ್ಲಿದ್ದರು ಎಂದು ಸೇನಾ ಪಿಆರ್‌ಒ ತಿಳಿಸಿದ್ದಾರೆ.

ಘಟನೆ ನಡೆದ ತಕ್ಷನವೇ ಸೇನಾ ಕ್ಯಾಪ್ಟನ್ ಮತ್ತು ನೈಬ್-ಸುಬೇದಾರ್ (ಜೆಸಿಒ) ಅವರನ್ನು ಹೆಲಿಕಾಪ್ಟರ್‌ನಲ್ಲಿ ಚಿಕಿತ್ಸೆಗಾಗಿ ಉಧಮ್‌ಪುರಕ್ಕೆ ಕರೆದೊಯ್ಯಲಾಯಿತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Leave A Reply

Your email address will not be published.