ಮಂಗಳೂರು: ಕಾಲೇಜು ವಿದ್ಯಾರ್ಥಿನಿಯ ಮನೆಗೆ ನುಗ್ಗಿ ಮಾನಭಂಗಕ್ಕೆ ಯತ್ನ!! ಆರೋಪಿ ತರಕಾರಿ ಅಂಗಡಿ ಮುಸ್ತಫಾ ಪೊಲೀಸರ ಅತಿಥಿ

ಮಂಗಳೂರು: ನಗರದ ಕಾಲೇಜೊಂದರ ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಓರ್ವನನ್ನು ಪಾಂಡೇಶ್ವರ ಮಹಿಳಾ ಠಾಣಾ ಪೊಲೀಸರು ಬಂಧಿಸಿದ್ದಾರೆ.ಬಂಧಿತನನ್ನು ಪಂಜಿಮೊಗರು ನಿವಾಸಿ ಮುಸ್ತಫಾ(35) ಎಂದು ಗುರುತಿಸಲಾಗಿದೆ.

ಆರೋಪಿ ಮುಸ್ತಫಾ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಶಾಂತಿನಗರ ಎಂಬಲ್ಲಿ ತರಕಾರಿ ಅಂಗಡಿಯಲ್ಲಿ ಕೆಲಸಕ್ಕಿದ್ದು,ಈ ಸಂದರ್ಭ ಪರಿಚಿತಳಾದ ಕಾಲೇಜು ವಿದ್ಯಾರ್ಥಿಗೆ ಕಿರುಕುಳ ನೀಡಲು ಮುಂದಾಗಿದ್ದ ಎನ್ನಲಾಗಿದೆ.

ಜುಲೈ 08ರ ರಾತ್ರಿ ವಿದ್ಯಾರ್ಥಿನಿಯ ಮನೆಗೆ ಪ್ರವೇಶಿಸಿದ ಆರೋಪಿ ಮಾನಭಂಗಕ್ಕೆ ಯತ್ನಿಸಿದ್ದು,ವಿಷಯ ಹೊರಗೆ ಹೇಳಿದಂತೆ ಬೆದರಿಕೆ ಒಡ್ಡಿದ್ದ ಎನ್ನಲಾಗಿದೆ.ಬಳಿಕ ವಿದ್ಯಾರ್ಥಿನಿ ತನ್ನ ತಾಯಿಗೆ ತಿಳಿಸಿದ್ದು, ಆ ಬಳಿಕ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Leave A Reply

Your email address will not be published.