ಬೆಳ್ತಂಗಡಿ : ರಕ್ಷಿತಾರಣ್ಯದಿಂದ ಬೆಲೆ ಬಾಳುವ ಮರ ಕಳ್ಳತನ | ನಾಲ್ವರು ಆರೋಪಿಗಳ ಬಂಧನ

ಬೆಳ್ತಂಗಡಿ: ಸರಕಾರಿ ರಕ್ಷಿತಾರಣ್ಯದಿಂದ ಬೆಲೆಬಾಳುವ ಮರಗಳನ್ನು ಕಡಿದು ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ಈ ಘಟನೆ ಬೆಳ್ತಂಗಡಿ ತಾಲೂಕಿನ ಕೊಕ್ಕಡದ ಶಿಬಾಜೆಯ ಕಜೆ ಎಂಬಲ್ಲಿ ಜು.17 ರಂದು ಸಂಜೆ ನಡೆದಿದೆ.

 

ಶಿಬಾಜೆ ಗ್ರಾಮದ ಕಜೆ ನಿವಾಸಿ ದಿನೇಶ್, ಕಳೆಂಜ ಗ್ರಾಮದ ಕಾಯಡ ನಿವಾಸಿ ಜಿತೇಂದ್ರ, ಶಿಬಾಜೆ ನಿವಾಸಿ ಉಮೇಶ ಹಾಗೂ ವಿಜಯ ಬಂಧಿತ ಆರೋಪಿಗಳು.

ಶಿಬಾಜೆ ರಕ್ಷಿತಾರಣ್ಯದ ಕಜೆ ಎಂಬಲ್ಲಿ ಬೆಲೆಬಾಳುವ ಮತ್ತಿ ಹಾಗೂ ಹೆಬ್ಬಲಸು ಮರಗಳನ್ನು ಅಕ್ರಮವಾಗಿ ಕಡಿಯಲಾಗುತ್ತಿತ್ತು. ಹಾಗೂ ಅದನ್ನು ಅಲ್ಲೇ ಸೈಜ್ ತುಂಡುಗಳನ್ನಾಗಿ ಮಾಡಿ ಮಾರಾಟ ಮಾಡುವ ಕೆಲಸ ಇವರು ಮಾಡುತ್ತಿದ್ದರು.

ಈ ಬಗ್ಗೆ ಖಚಿತ ಮಾಹಿತಿ ಪಡೆದ ಅರಣ್ಯಾಧಿಕಾರಿಗಳ ತಂಡ ದಾಳಿ ನಡೆಸಿ, ಆರೋಪಿಗಳನ್ನು ಬಂಧಿಸಿ, ಮರದ ದಿಮ್ಮಿಗಳನ್ನು ವಶಪಡಿಸಿಕೊಂಡಿದ್ದಾರೆ. ಉಪ ವಲಯ ಅರಣ್ಯಾಧಿಕಾರಿ ಸಂತೋಷ್ ತಡ್ಲಗಿ, ಅರಣ್ಯ ರಕ್ಷಕರಾದ ನಿಂಗಪ್ಪ ಅವಾರಿ, ಪ್ರಶಾಂತ್ ಮಾಳಗಿ, ರಸೂಲ್, ಸುನೀಲ್ ನಾಯಕ್, ಅರಣ್ಯ ವೀಕ್ಷಕ ದಾಮೋದರ, ವಾಹನ ಚಾಲಕ ಕಿಶೋರ್ ತಂಡ ಕಾರ್ಯಾಚರಣೆ ನಡೆಸಿ, ಮುಂದಿನ ತನಿಖೆಗಾಗಿ ಈ ಪ್ರಕರಣವನ್ನು ವಲಯ ಅರಣ್ಯಾಧಿಕಾರಿ ಮಧುಸೂಧನ್ ಅವರಿಗೆ ಹಸ್ತಾಂತರಿಸಿದ್ದಾರೆ.

Leave A Reply

Your email address will not be published.