ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಎಲ್ಲಾ ಶಾಲಾ – ಕಾಲೇಜು, ಮದರಸಾಗಳಲ್ಲೂ ಆ.11ರಿಂದ ಧ್ವಜಾರೋಹಣ ಕಡ್ಡಾಯ – ಶಿಕ್ಷಣ ಸಚಿವ ಬಿ.ಸಿ.ನಾಗೇಶ್

ಬೆಂಗಳೂರು : ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಎಲ್ಲಾ ಶಾಲಾ – ಕಾಲೇಜು ಸೇರಿದಂತೆ ಮದರಸಾಗಳಲ್ಲೂ ಧ್ವಜಾರೋಹಣ ಮಾಡಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

 

ರಾಜ್ಯದ ಎಲ್ಲ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳು, ಪಿಯು ಕಾಲೇಜುಗಳು ಹಾಗೂ ಮದರಸಾಗಳಲ್ಲೂ ಆಗಸ್ಟ್ 11 ರಿಂದ 17 ರವರೆಗೆ ರಾಷ್ಟ್ರಧ್ವಜಾರೋಹಣ ಮಾಡಬೇಕು ಎಂದು ಬಿ.ಸಿ.ನಾಗೇಶ್ ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಭಾರತ ಸ್ವಾತಂತ್ರ್ಯದ ಅಮೃ ಮಹೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ರಾಜ್ಯದ ಎಲ್ಲ ಪ್ರಾಥಮಿಕ, ಪ್ರೌಢಶಾಲೆಗಳು, ಪದವಿ ಪೂರ್ವ ಕಾಲೇಜುಗಳು ಹಾಗೂ ಮದರಸಾಗಳಲ್ಲಿ ಧ್ವಜಾರೋಹಣದ ಅಭಿಯಾನದ ಜೊತೆಗೆ ರಾಷ್ಟ್ರಭಕ್ತಿ ಮೂಡಿಸುವ ಸ್ವಾತಂತ್ರ್ಯದ ತ್ಯಾಗ, ಬಲಿದಾನ, ಸ್ಮರಣೆಯ ಗೀತೆ, ಗಾಯನ, ಕ್ವಿಚ್, ಪ್ರಬಂಧ ಸ್ಪರ್ಧೆ, ಸ್ವಾತಂತ್ರ್ಯ ಹೋರಾಟ, ಸ್ವಾತಂತ್ರ್ಯ ಹೋರಾಟಗಾರರ ಚಿತ್ರ ಬಿಡಿಸುವ ಸ್ಪರ್ಧೆ ಆಯೋಜಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ.

Leave A Reply

Your email address will not be published.