ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಆಚರಣೆಗೆ ದಿನಾಂಕ ಫಿಕ್ಸ್ | ಅ.5ರಂದು ಜಂಬೂಸವಾರಿ

ವಿಧಾನಸೌದದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಆಚರಣೆ-2022ರ ದಿನಾಂಕ ನಿಗದಿ ಪಡಿಸಲಾಗಿದ್ದು, ಮೈಸೂರು ದಸರಾ ನಿಮಿತ್ತ ನಡೆಯುವಂತ ಜಂಬೂಸವಾರಿಯನ್ನು ಅಕ್ಟೋಬರ್ 5ರಂದು ನಡೆಸಲು ದಿನಾಂಕ ನಿಗದಿ ಪಡಿಸಲಾಗಿದೆ.

ಸೆಪ್ಟೆಂಬರ್ 26ರಿಂದ ಮೈಸೂರು ದಸರದ ನವರಾತ್ರಿ ಉತ್ಸವ ಆರಂಭಗೊಳ್ಳಲಿದ್ದು, ಅಕ್ಟೋಬರ್ 5ರಂದು ವಿಶ್ವವಿಖ್ಯಾತ ಜಂಬೂಸವಾರಿ ಮೆರವಣಿಗೆ ನಡೆಯಲಿದೆ. ಕಳೆದ 2 ವರ್ಷಕೋವಿಡ್ ಹಿನ್ನೆಲೆ ಅದ್ದೂರಿ ದಸರಕ್ಕೆ ಸರ್ಕಾರ ಬ್ರೇಕ್ ಹಾಕಿತ್ತು. ಆದ್ರೆ ಈ ಬಾರಿ ಕೊರೋನಾ ಇಳಿಕೆ ಕಾರಣ ವಿಜೃಂಭಣೆಯಿಂದ ದಸರಾ ನಡೆಸಲು ಚಿಂತನೆ ನಡೆಸಲಾಗಿದೆ.

ಈ ಬಗ್ಗೆ ದಸರಾ ಮಹೋತ್ಸವ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಈ ಬಾರಿ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಚಾರಕ್ಕೆ ಹೆಚ್ಚು ಪ್ರಾಧಾನ್ಯತೆ ನೀಡಲಾಗುತ್ತದೆ. ವಿಶ್ವದಾದ್ಯಂತ ಪ್ರಚಾರ ಆಗುವಂತೆ ನೋಡಿಕೊಳ್ಳಲಾಗುತ್ತದೆ. ದಸರಾ ಬ್ರ್ಯಾಂಡ್ ಆಗಬೇಕು. ಆ ನಿಟ್ಟಿನಲ್ಲಿ ಪ್ರಚಾರ ಮಾಡಲಾಗುತ್ತದೆ ಎಂದರು.

Leave A Reply

Your email address will not be published.