ದಕ್ಷಿಣ ಸಿನಿರಂಗದ ಪವರ್ ಸ್ಟಾರ್ ಪವನ್ ಕಲ್ಯಾಣ್ ಆರೋಗ್ಯದಲ್ಲಿ ಏರುಪೇರು !!!

Share the Article

ದಕ್ಷಿಣ ಸಿನಿರಂಗದ ಪವರ್ ಸ್ಟಾರ್ ಪವನ್ ಕಲ್ಯಾಣ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಜನಸೇನಾ ಪಕ್ಷದ ಮುಖ್ಯಸ್ಥರಾಗಿರುವ ಪವನ್ ರಾಜಕೀಯ ಕಾರ್ಯಕ್ರಮದ ನಿಮಿತ್ತಾ ಪವನ್ ಕಲ್ಯಾಣ್ ಗೋದಾವರಿ ಜಿಲ್ಲೆಗಳಲ್ಲಿ ಎರಡು ದಿನದ ಪ್ರವಾಸ ಹೋಗಿದ್ದಾಗ, ಅನಾರೋಗ್ಯಕ್ಕೆ ಒಳಗಾಗಿದ್ದು, ವೈರಲ್ ಜ್ವರ ಕಾಣಿಸಿಕೊಂಡಿದೆ. ಹಾಗಾಗಿ ಈ ತಿಂಗಳ 24 ರಂದು ನಡೆಯಬೇಕಿದ್ದ ಜನವಾಣಿ ಕಾರ್ಯಕ್ರಮವನ್ನು ಮುಂದೂಡಲಾಗಿದೆ. ಈ ತಿಂಗಳ 31ರಂದು ಮತ್ತೆ ಕಾರ್ಯಕ್ರಮ ನಡೆಯಲಿದೆ ಎಂದು ಪಕ್ಷದ ಪಿಎಸಿ ಅಧ್ಯಕ್ಷ ನಾದೆಂಡ್ಲ ಮನೋಹರ್ ಹೇಳಿದರು.

ವೈರಲ್ ಜ್ವರದಿಂದ ಬಳಲುತ್ತಿರುವ ಪವನ್ ಪ್ರಸ್ತುತ ಹೈದರಾಬಾದ್‌ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ, ತಮ್ಮ ಚಿತ್ರಗಳ ಚಿತ್ರೀಕರಣಕ್ಕೆ ವಿರಾಮ ನೀಡಿದ್ದಾರೆ. ಈ ವಿಷಯವು ಅಂತರ್ಜಾಲದಲ್ಲಿ ವೈರಲ್ ಆಗುತ್ತಿದೆ. ಇನ್ನು ಅಭಿಮಾನಿಗಳು ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತಿದ್ದಾರೆ

Leave A Reply