ಬೆಳ್ಳಾರೆ : ಯುವಕನ ಮೇಲೆ ತಂಡದಿಂದ ಮಾರಣಾಂತಿಕ ಹಲ್ಲೆ

ಸುಳ್ಯ: ಜು 19ರ ರಾತ್ರಿ ತಂಡವೊಂದು ಯುವಕನ ಮೇಲೆ ಸೋಡಾ ಬಾಟಲಿಯಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಸುಳ್ಯ ತಾಲೂಕಿನ ಬೆಳ್ಳಾರೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬೆಳ್ಳಾರೆಯ ಕಳಂಜ ಎಂಬಲ್ಲಿ ಕಳೆದ ರಾತ್ರಿ ಈ ಹಲ್ಲೆ ನಡೆದಿದ್ದು ಮಸೂದ್ (19) ಎಂಬವರು ಗಂಭೀರವಾಗಿ ಗಾಯಗೊಂಡವರು. ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಆತನ ಸ್ಥಿತಿ ಚಿಂತಾಜನಕವಾಗಿದೆ ಎಂದು ಮೂಲಗಳು ತಿಳಿಸಿವೆ.


Ad Widget

Ad Widget

Ad Widget

Ad Widget

Ad Widget

Ad Widget

ಮಸೂದ್ ಹಾಗೂ ಸುಧೀರ್ ಮಧ್ಯೆ ನಿನ್ನೆ ರಾತ್ರಿ 9 ಗಂಟೆ ಸುಮಾರಿಗೆ ಅಂಗಡಿಯೊಂದರ ಸಮೀಪ ಕ್ಷುಲ್ಲಕ ಕಾರಣಕ್ಕೆ ಜಗಳ ಆರಂಭವಾಗಿದೆ . ಈ ವೇಳೆ ಪರಸ್ಪರರು ಹೊಡೆದಾಡಿಕೊಂಡಿದ್ದಾರೆ. ಸ್ವಲ್ಪ ಹೊತ್ತಿನ ಬಳಿಕ ಬೇರೆ ಯುವಕರು ಈ ಜಗಳಕ್ಕೆ ಎಂಟ್ರಿ ಕೊಟ್ಟಿದ್ದು ಈ ವೇಳೆ ಹೊಡೆದಾಟ ವಿಪರೀತಕ್ಕೆ ಹೋಗಿದೆ ಎನ್ನಲಾಗಿದೆ.

ಮಾಹಿತಿ ತಿಳಿಯುತ್ತಲೇ ಬೆಳ್ಳಾರೆ ಠಾಣಾ ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿ, ತನಿಖೆ ಕೈಗೆತ್ತಿಕೊಂಡಿದ್ದಾರೆ. ಕ್ಷಿಪ್ರ ಕಾರ್ಯಚರಣೆ ನಡೆಸಿದ ಪೊಲೀಸರು ಹೊಡೆದಾಟದಲ್ಲಿ ಭಾಗಿಯಾದ 4-5 ಯುವಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.ಹೆಚ್ಚಿನ ಮಾಹಿತಿ ತನಿಖೆಯಿಂದ ತಿಳಿದು ಬರಬೇಕಿದೆ.

error: Content is protected !!
Scroll to Top
%d bloggers like this: