ರಾಜ್ಯದ ಸರಕಾರಿ ಶಾಲೆಗಳಲ್ಲಿ ” ಸ್ಪೋಕನ್ ಇಂಗ್ಲೀಷ್ ಕ್ಲಾಸ್” ಶುರು !!!

ನಮ್ಮಲ್ಲಿ ಕನ್ನಡ ಮಾಧ್ಯಮ ಶಾಲೆಗಳು ಸಾಕಷ್ಟು ಹಿಂದೆ ಉಳಿದಿದೆ. ಇದಕ್ಕೆ ಕಾರಣವೇ ಮಕ್ಕಳ ಪೋಷಕರಲ್ಲಿ ತಮ್ಮ ಮಕ್ಕಳು ಇಂಗ್ಲಿಷ್ ಕಲಿಯಬೇಕು ಎಂಬ ಹಂಬಲದಿಂದ ತಮಗೆ ಎಷ್ಟು ಕಷ್ಟವಾದರೂ ಕೂಡ ಲೆಕ್ಕಿಸದೆ ದುಡಿದು ಮಕ್ಕಳನ್ನು ಇಂಗ್ಲಿಷ್ ಮೀಡಿಯಂ ಶಾಲೆಗೆ ಕಳುಹಿಸುವ ಪಾಲಕರು ಇದ್ದರೆ.

ಅದಕ್ಕಾಗಿಯೇ ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸಿ, ಬೆಳೆಸಿ ಎಂಬ ಕಾರಣಕ್ಕೆ ಕನ್ನಡ ಮಾಧ್ಯಮದ ಜೊತೆಗೆ ಉದ್ದೇಶಿತ ಸರ್ಕಾರಿ ಮಾದರಿ ಶಾಲೆಗಳಲ್ಲಿ ಪ್ರಾಥಮಿಕ ಶಾಲಾ ಹಂತದಿಂದಲೇ ಸ್ಪೋಕನ್ ಇಂಗ್ಲೀಷ್ ಕಲಿಸಲು ಅದನ್ನು ಕಡ್ಡಾಯವಾಗಿ ಮಾಡಲು ಶಿಕ್ಷಣ ಇಲಾಖೆ ಮುಂದಾಗಿದೆ.

ಪ್ರಸಕ್ತ ವರ್ಷದಿಂದಲೇ ರಾಜ್ಯದ ಶಾಲಾ ಮಕ್ಕಳಿಗೆ ಸ್ಪೋಕನ್ ಇಂಗ್ಲೀಷ್ ತರಗತಿ ಆರಂಭಿಸಲು ತಯಾರಿಕೆ ಮಾಡಲಾಗುತ್ತಿದೆ. ರಾಷ್ಟ್ರ ಮಟ್ಟದಲ್ಲಿ ಉತ್ತಮ ಸಂವಹನ ಮತ್ತು ಶಿಕ್ಷಣ ಪಡೆಯುವ ಉದ್ದೇಶದಿಂದ ಪ್ರಸಕ್ತ ವರ್ಷದಿಂದಲೇ ಇಂಗ್ಲೀಷ್ ಸ್ಪೋಕನ್ ಕ್ಲಾಸ್ ಶುರು ಮಾಡಲು ಮುಂದಾಗಿದೆ.

ಸರ್ಕಾರಿ ಶಾಲೆಗಳಲ್ಲಿರುವ ಇಂಗ್ಲೀಷ್ ಶಿಕ್ಷಕರಿಗೆ ಈ ಬಗ್ಗೆ ವಿಶೇಷ ತರಬೇತಿ ಮತ್ತು ಶಿಕ್ಷಕರ ಕೌಶಲ್ಯ ಹೆಚ್ಚಿಸಲು ಸಿದ್ಧತೆ ಮಾಡಲಾಗುತ್ತಿದೆ.ಖಾಸಗಿ ಶಾಲೆಗಳು ಮತ್ತು ಇಂಗ್ಲೀಷ್ ಮಾಧ್ಯಮ ಶಿಕ್ಷಣದ ವ್ಯಾಮೋಹ ಬಹಳಷ್ಟು ಜನರಲ್ಲಿ ಇದೆ. ಅದರ ಗುಣಮಟ್ಟ ಹೇಗಿದ್ದರೂ ಕೂಡ ಮಕ್ಕಳಿಗೆ ಇಂಗ್ಲೀಷ್ ಕಲಿಸಬೇಕೆಂಬ ಆಸೆಯು ಪಾಲಕರಲ್ಲಿ ಇದ್ದು .

ಆಗಾಗಿ ರಾಜ್ಯದಲ್ಲಿನ ಕೆಪಿಎಸ್ ಶಾಲೆಗಳಲ್ಲೂ ಕೂಡ ಇಂಗ್ಲೀಷ್ ಮಾಧ್ಯಮಕ್ಕೆ ಮಕ್ಕಳನ್ನು ಸೇರಿಸಲು ಪಾಲಕರು ಮುಂದಾಗಿ ಆಸಕ್ತಿ ತೋರಿಸುತ್ತಿದ್ದಾರೆ. ಹೀಗಾಗಿ, ಭಾರತದ ಎಲ್ಲಾ ಮಾದರಿ ಶಾಲೆಗಳಲ್ಲಿ ಇಂಗ್ಲೀಷ್‌ನ್ನು ಸ್ಪೋಕನ್ ಇಂಗ್ಲೀಷ್ ಆಗಿ ಕಲಿಸಲು ಶಿಕ್ಷಣ ಇಲಾಖೆ ಮುಂದಾಗಿದೆ.

Leave A Reply

Your email address will not be published.