KPSC ಯಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ, ಅರ್ಜಿ ಸಲ್ಲಿಕೆ ವಿವರ ಇಲ್ಲಿದೆ!!!

ಕರ್ನಾಟಕ ಲೋಕಸೇವಾ ಆಯೋಗ( KPSC)30 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಮುಖ್ಯ ವಿದ್ಯುತ್ ಪರಿವೀಕ್ಷಣಾಲಯದಲ್ಲಿ ಕಾರ್ಯ ನಿರ್ವಹಿಸಲು ಸಹಾಯಕ ವಿದ್ಯುತ್ ಪರಿವೀಕ್ಷಕರ ನೇಮಕಾತಿಗೆ ಮುಂದಾಗಿದೆ.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಆಗಸ್ಟ್ 23 ಆಗಿದೆ.

ಕರ್ನಾಟಕ ನಾಗರೀಕ ಸೇನಾ ನಿಯಮಗಳ ಅನುಸಾರ ಉಳಿಕೆ ಮೂಲ ವೃಂದದಲ್ಲಿ ಈ ಗ್ರೂಪ್ ಬಿ ಹುದ್ದೆಗಳ ಭರ್ತಿಗೆ ಕೆಪಿಎಸ್‌ಸಿ ಮುಂದಾಗಿದೆ. ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.

ಹುದ್ದೆ ಸಂಸ್ಥೆ; ಕರ್ನಾಟಕ ಲೋಕಸೇವಾ ಆಯೋಗ( KPSC)
ಹುದ್ದೆ :  ಸಹಾಯಕ ಎಲೆಕ್ಟ್ರಿಕಲ್ ಇನ್ಸ್‌ಪೆಕ್ಟರ್
ಹುದ್ದೆಗಳ ಸಂಖ್ಯೆ : 30
ಕಾರ್ಯನಿರ್ವಹಣಾ ಸ್ಥಳ : ಕರ್ನಾಟಕ
ವೇತನ : ರೂ.43100-ರೂ. 83900 ರೂ.ಪ್ರತಿ ತಿಂಗಳು

ಶೈಕ್ಷಣಿಕ ಅರ್ಹತೆ: ಅಧಿಕೃತ ಅಧಿಸೂಚನೆಯ ಪ್ರಕಾರ
ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾನಿಲಯಗಳಿಂದ ಎಲೆಕ್ಟ್ರಿಕಲ್ ಎಂಜಿನಿಯರಿಂಗ್ / ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್‌ನಲ್ಲಿ ಪದವಿ ಪೂರ್ಣಗೊಳಿಸಿರಬೇಕು.

ವಯೋಮಿತಿ: ಕರ್ನಾಟಕ ಲೋಕಸೇವಾ ಆಯೋಗದ
ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು.

ವಯೋಮಿತಿ ಸಡಿಲಿಕೆ: ಪ.ಜಾ, ಪ.ಪಂ ಮತ್ತು ಪ್ರವರ್ಗ-1 ಅಭ್ಯರ್ಥಿಗಳು: 05 ವರ್ಷಗಳು ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳು: 03 ವರ್ಷಗಳು
ವಿಕಲಚೇತನ, ವಿಧವೆ ಅಭ್ಯರ್ಥಿಗಳು: 10 ವರ್ಷಗಳು

ಅರ್ಜಿ ಶುಲ್ಕ : ಪ.ಜಾ, ಪ.ಪಂ ಮತ್ತು ಪ್ರವರ್ಗ-1 ಅಭ್ಯರ್ಥಿಗಳಿಗೆ: 35 ರೂ ಮಾಜಿ ಸೈನಿಕ ಅಭ್ಯರ್ಥಿಗಳು: 85 ರೂ ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ: 335, ಸಾಮಾನ್ಯ ಅಭ್ಯರ್ಥಿಗಳು: 635 ರೂ

ಆಯ್ಕೆ ಪ್ರಕ್ರಿಯೆ: ಕನ್ನಡ ಭಾಷಾ ಪರೀಕ್ಷೆ, ಸ್ಪರ್ಧಾತ್ಮಕ ಪರೀಕ್ಷೆ

ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 25 ಜುಲೈ 2022
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 23, ಆಗಸ್ಟ್ 2022
ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ:
24 ಆಗಸ್ಟ್ 2022

ಅಧಿಸೂಚನೆ ಪ್ರಮುಖ ಲಿಂಕ್‌ಗಳು :
ಅಧಿಕೃತ ಅಧಿಸೂಚನೆ ಪಿಡಿಎಫ್: ಇಲ್ಲಿ ಕ್ಲಿಕ್ ಮಾಡಿ ಅಧಿಕೃತ ವೆಬ್‌ಸೈಟ್: kpsc.kar.nic.in

ವಿಶೇಷ ಸೂಚನೆ: ಈ ಮೇಲ್ಕಂಡ ಹುದ್ದೆಗೆ ಅರ್ಜಿ ಸಲ್ಲಿಕೆ ಆರಂಭ ಜುಲೈ 25ರಿಂದ ಆರಂಭವಾಗಲಿದೆ. ಅಭ್ಯರ್ಥಿಗಳು ಅಂದಿನಿಂದ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ನೋಟಿಫಿಕೇಶನ್ ಕ್ಲಿಕ್ ಮಾಡಿ

Leave A Reply

Your email address will not be published.