‘ಫ್ಯಾಕ್ಟ್ ಚೆಕರ್ ಮೊಹಮ್ಮದ್ ಜುಬೇರ್’ ವಿರುದ್ಧ ದಾಖಲಾದ ಎಲ್ಲಾ ಪ್ರಕರಣಗಳಿಗೆ “ಸುಪ್ರೀಂ ಕೋರ್ಟ್” ನಿಂದ ಜಾಮೀನು!!!
ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೈರ್ ಯುಪಿಯ ಎಲ್ಲಾ ಪೊಲೀಸ್ ಎಫ್ ಐಆರ್ ಗಳಲ್ಲಿ ಮಧ್ಯಂತರ ಜಾಮೀನು ನೀಡಿ, ಅವರನ್ನು ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಬುಧವಾರ ಆದೇಶಿಸಿದೆ. ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರ ನೇತೃತ್ವದ ಪೀಠವು ಬಂಧನದ ಅಧಿಕಾರದ ಅಸ್ತಿತ್ವವನ್ನು ಪೊಲೀಸರು ಮಿತವಾಗಿ ಅನುಸರಿಸಬೇಕು ಎಂದು ಅಭಿಪ್ರಾಯಪಟ್ಟಿದೆ.
ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಎಎಸ್ ಬೋಪಣ್ಣ ಅವರಿದ್ದ ಪೀಠ ಈ ತೀರ್ಪು ನೀಡಿದೆ. “ನಾವು ಇತರ ಎಲ್ಲಾ ಪ್ರಕರಣಗಳಲ್ಲಿ ಅರ್ಜಿದಾರರಿಗೆ ಮಧ್ಯಂತರ ಜಾಮೀನು ನೀಡುತ್ತಿದ್ದೇವೆ. ಹಾಗಾಗಿ ಜುಬೈರ್‌ನನ್ನ ಅನಂತಕಾಲ ಬಂಧನದಲ್ಲಿಡುವುದು ಸರಿಯಲ್ಲ” ಸುಪ್ರೀಂಕೋರ್ಟ್ ತನ್ನ ತೀರ್ಪಿನಲ್ಲಿ ಹೇಳಿದೆ.
ಯುಪಿಯಲ್ಲಿ ದಾಖಲಾದ ಎಲ್ಲಾ ಎಫ್‌ಐಆರ್‌ಗಳನ್ನು ದೆಹಲಿ ಪೊಲೀಸರ ವಿಶೇಷ ಸೆಲ್‌ಗೆ ವರ್ಗಾಯಿಸಲಾಗುತ್ತಿದೆ ಎಂದು ನ್ಯಾಯಾಲಯ ಹೇಳಿದೆ, ಏಕೆಂದರೆ ದೆಹಲಿಯಲ್ಲಿ ದಾಖಲಾದ ಪ್ರಕರಣಗಳು ಮತ್ತು ಯುಪಿಯಲ್ಲಿ ದಾಖಲಾಗಿರುವ ಪ್ರಕರಣಗಳು ಒಂದೇ ಆಗಿವೆ. ಇದಲ್ಲದೆ, ಯುಪಿ ಪೊಲೀಸರು ರಚಿಸಿದ್ದ ಎಸ್‌ಐಟಿಯನ್ನು ರದ್ದುಗೊಳಿಸಲಾಗುತ್ತಿದೆ ಎಂದು ನ್ಯಾಯಾಲಯ ಹೇಳಿದೆ. ಅರ್ಜಿದಾರರು ಬಯಸಿದರೆ, ಈಗ ಅವರು ದೆಹಲಿ ಹೈಕೋರ್ಟ್‌ನಲ್ಲಿ ಎಫ್‌ಐಆರ್ ರದ್ದುಗೊಳಿಸಲು ಅರ್ಜಿ ಸಲ್ಲಿಸಬಹುದು. ಅದೇ ಪ್ರಕರಣಕ್ಕೆ ಸಂಬಂಧಿಸಿದ ಯಾವುದೇ ಹೊಸ ಎಫ್‌ಐಆರ್‌ನಲ್ಲಿ ಯಾವುದೇ ಬಂಧನ ಇರಬಾರದು.