ಗಾಯಕ ಮೂಸೆವಾಲಾ ಹತ್ಯೆ ಪ್ರಕರಣ । ಶಾರ್ಪ್ ಶೂಟರ್ ಎನ್ ಕೌಂಟರ್, ಮುಂದುವರೆದ ಗುಂಡಿನ ಕಾಳಗ

ಗಾಯಕ ಸಿಧು ಮೂಸೆ ವಾಲಾ ಹತ್ಯೆಯ ಶಂಕಿತ ಆರೋಪಿಯ ಎನ್ ಕೌಂಟರ್ ನಡೆದಿದೆ. ಜಗ್ರೂಪ್ ಸಿಂಗ್ ರೂಪ ಎಂಬ ದರೋಡೆಕೋರ ಬುಧವಾರ ಅಮೃತಸರ ಬಳಿ ಪಂಜಾಬ್ ಪೊಲೀಸರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ. ಕಾರ್ಯಾಚರಣೆ ವೇಳೆ ಮೂವರು ಪೊಲೀಸರು ಗಾಯಗೊಂಡಿದ್ದಾರೆ.

 

ಪಂಜಾಬಿನ ಅಮೃತಸರದಿಂದ 20 ಕಿಮೀ ದೂರದಲ್ಲಿರುವ ಭಕ್ನಾ ಗ್ರಾಮದಲ್ಲಿ ಪಂಜಾಬ್ ಪೊಲೀಸರ ಆಂಟಿ-ಗ್ಯಾಂಗ್‌ಸ್ಟರ್ ಟಾಸ್ಕ್ ಫೋರ್ಸ್, ಜಗ್ರೂಪ್ ಸಿಂಗ್ ರೂಪ ಮತ್ತು ಮನ್‌ಪ್ರೀತ್ ಸಿಂಗ್ ಅಲಿಯಾಸ್ ಮನ್ನು ಕುಸ್ಸಾ ಎಂಬ ಇಬ್ಬರು ವ್ಯಕ್ತಿಗಳನ್ನು ಹಿಂಬಾಲಿಸುತ್ತಿದ್ದಾಗ ಎನ್‌ಕೌಂಟರ್ ಆರಂಭವಾಗಿದೆ. ಮೇ 29 ರಂದು ಎಕೆ-47 ರೈಫಲ್‌ನಿಂದ ಮೂಸೆ ವಾಲಾಗೆ ಮೊದಲು ಗುಂಡು ಹಾರಿಸಿದ ಆರೋಪ ಮನ್ನು ಕುಸ್ಸಾ ಮೇಲಿದೆ. ದೀಪಕ್ ಮುಂಡಿ ಎಂಬ ಇನ್ನೊಬ್ಬ ಶೂಟರ್ ಇನ್ನೂ ಪತ್ತೆಯಾಗಿಲ್ಲ. ಪ್ರಕರಣದಲ್ಲಿ ಕನಿಷ್ಠ ಎಂಟು ಶೂಟರ್‌ಗಳಿದ್ದು ಅವರನ್ನು ಬಂಧಿಸಲಾಗಿದೆ.

ಗೀತರಚನೆಕಾರ- ಗಾಯಕ ಅಲ್ಲದೆ ರ್ಯಾಪರ್ ಆಗಿದ್ದಲ್ಲದೆ ಕಾಂಗ್ರೆಸ್ ನಾಯಕರಾಗಿದ್ದ 28 ವರ್ಷದ ಶುಭದೀಪ್ ಸಿಂಗ್ ಸಿಧು ಅಲಿಯಾಸ್ ಸಿಧು ಮೂಸೆವಾಲಾ ಅವರನ್ನು ಪಂಜಾಬ್‌ನ ಮಾನ್ಸಾ ಜಿಲ್ಲೆಯ ಮೂಸಾ ಗ್ರಾಮದ ಬಳಿ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಪಂಜಾಬ್, ದೆಹಲಿ ಮತ್ತು ಮುಂಬೈ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಈಗಾಗಲೇ ದೆಹಲಿಯ ತಿಹಾರ್ ಜೈಲಿನಲ್ಲಿದ್ದ ದರೋಡೆಕೋರ ಲಾರೆನ್ಸ್ ಬಿಷ್ಣೋಯ್ ನಿರ್ದೇಶನದಂತೆ ಕೆನಡಾ ಮೂಲದ ಸತೀಂದರ್ಜಿತ್ ಸಿಂಗ್ ಅಲಿಯಾಸ್ ಗೋಲ್ಡಿ ಬ್ರಾರ್ ಈ ಕೊಲೆಯನ್ನು ನಿರ್ದೇಶಿಸಿದ್ದಾರೆ ಎಂದು ಹೇಳಲಾಗಿದೆ.

Leave A Reply

Your email address will not be published.