BREAKING NEWS : ಗಾಂಧಿ ಕುಟುಂಬದ ಹೆಸರಲ್ಲಿ 3-4 ತಲೆಮಾರಿಗೆ ಬೇಕಾದಷ್ಟು ಆಸ್ತಿ ಮಾಡ್ಕೊಂಡಿದ್ದೇವೆ

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಯನ್ನು ಜಾರಿ ನಿರ್ದೇಶನಾಲಯ (ಇಡಿ) ಕಚೇರಿಯಲ್ಲಿ ವಿಚಾರಣೆ ವಿರೋಧಿಸಿ ಕೆಪಿಸಿಸಿ ನೇತೃತ್ವದಲ್ಲಿ ಹಮ್ಮಿಕೊಂಡಿತ್ತು. ಈ ಪ್ರತಿಭಟನೆ ಸಂದರ್ಭದಲ್ಲಿ ಮಾಜಿ ಸ್ಪೀಕರ್ ರಮೇಶ್ ಕುಮಾರ್‌ ಅವರು ಶಾಕಿಂಗ್ ಹೇಳಿಕೆಯನ್ನು ನೀಡಿದ್ದಾರೆ. ‘ಗಾಂಧಿ ಕುಟುಂಬ ಹೆಸರಲ್ಲಿ 3-4 ತಲೆಮಾರುಗಳಿಗೆ ಆಗುವಷ್ಟು ಹಣ, ಆಸ್ತಿ ಮಾಡಿಕೊಂಡಿದ್ದೇವೆ. ಈಗ ನಾವು ಗಾಂಧಿ ಕುಟುಂಬದ ಋಣ ತೀರಿಸಬೇಕಿದೆ” ಮಾಹಿತಿ ನೀಡಿದ್ದಾರೆ.

ಸುಮಾರು 70 ವರ್ಷದಿಂದ ಕಾಂಗ್ರೆಸ್ ದೇಶ ಆಳಿದೆ. ಹಾಗಾಗಿ ನಾವೆಲ್ಲರೂ ಕಾಂಗ್ರೆಸ್ಚನವರು ಮುಂದಿನ ಮೂರ್ನಾಲ್ಕು ತಲೆಮಾರುಗಳಿಗೆ ಆಗುವಷ್ಟು ಆಸ್ತಿ, ಹಣ, ಅಧಿಕಾರ ಅನುಭವಿಸಿದ್ದೇವೆ. ಆದರೆ ಈಗ ಸೋನಿಯಾ ಗಾಂಧಿ ಅವರ ಮೇಲೆ ನ್ಯಾಷನಲ್ ಹೆರಾಲ್ಡ್ ಪ್ರತ್ರಿಕೆ ಖರೀದಿ ಅವ್ಯವಹಾರ ಮತ್ತು ಹಣ ವರ್ಗಾವಣೆ ಆರೋಪದ ವಿಚಾರಣೆ ನಡೆಯುತ್ತಿದೆ. ಹಾಗಾಗಿ ನಾವೆಲ್ಲರೂ ದೇಶ ಉಳಿಯಲು, ಕಾಂಗ್ರೆಸ್‌ ಉಳಿಸಲು ಸೋನಿಯಾ ಗಾಂಧಿ ಅವರಿಗೆ ನೈತಿಕ ಬೆಂಬಲ ನೀಡಬೇಕು” ಎಂದು ಮನವಿ ಮಾಡಿದರು.

“ಈ ಋಣ ತೀರಿಸದೇ ಹೋದರೆ ನಾವು ತಿನ್ನುವ ಅನ್ನಕ್ಕೆ ಹುಳ ಬೀಳುತ್ತದೆ. ಕುಟುಂಬ ಪಕ್ಷ ಒಂದೇ. ಪಕ್ಷ ಎಂದ ಮೇಲೆ ಸಣ್ಣ ಪುಟ್ಟ ಮನಸ್ತಾಪ ಸಹಜ. ಅವನ್ನೆಲ್ಲ ಬದಿಗೊತ್ತಿ ನಾವು ಈಗ ಸಂಕಷ್ಟದಲ್ಲಿರುವ ಸೋನಿಯಾ ಅವರೊಂದಿಗೆ ನಿಲ್ಲಬೇಕು. ಆಗ ಮಾತ್ರ ನಾವು ತಿನ್ನುವ ಎರಡು ಹೊತ್ತಿನ ಊಟಕ್ಕೆ ಸಾರ್ಥಕ ಬರುತ್ತದೆ” ಎಂದು ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿದರು.

ಕರ್ನಾಟಕದ ಬೆಂಗಳೂರು, ಕೇರಳ, ದೆಹಲಿ ಸೇರಿದಂತೆ ವಿವಿಧ ಕಡೆ ಕಾಂಗ್ರೆಸ್ ನಾಯಕರು ಸೋನಿಯಾ ಗಾಂಧಿ ಇಡಿ ವಿಚಾರಣೆಯನ್ನು ವಿರೋಧಿಸಿ ಪ್ರತಿಭಟನೆ ಮಾಡುತ್ತಿದ್ದಾರೆ.

Leave A Reply

Your email address will not be published.