ಶಿರಾಡಿ ಘಾಟ್ ವಾಹನ ಸಂಚಾರಕ್ಕೆ ಮುಕ್ತ | ಆದರೆ ಷರತ್ತು ಅನ್ವಯ

ಕರಾವಳಿಯಾದ್ಯಂತ ಭಾರೀ ಮಳೆ ಹಾಗೂ ಶಿರಾಡಿ ಘಾಟಿನಲ್ಲಿ ಅಲ್ಲಲ್ಲಿ ರಸ್ತೆಗಳು ಬಿರುಕು ಬಿಟ್ಟಿದ್ದರಿಂದ ವಾಹನ ಸಂಚಾರಕ್ಕೆ ತಡೆ ಏರಿತ್ತು. ಜುಲೈ 15 ರಿಂದ ಇಲ್ಲಿಯವರೆಗೆ ಈ ರಸ್ತೆಯಲ್ಲಿ ಎಲ್ಲ ರೀತಿಯ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಲಾಗಿತ್ತು.

 

ಆದರೆ ಈಗ ಹಗಲಿನಲ್ಲಿ ಲಘು ವಾಹನ ಸಂಚಾರಕ್ಕೆ ಅವಕಾಶ ಮಾಡಿ ಕೊಡಲಾಗಿದ್ದು, ಭಾರಿ ವಾಹನಗಳ ಸಂಚಾರಕ್ಕೆ ನಿರ್ಬಂಧ ಮುಂದುವರಿದಿದೆ.

ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ -75 ರಲ್ಲಿ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಲಘು ವಾಹನಗಳ ಸಂಚಾರಕ್ಕೆ ಅವಕಾಶ ನೀಡಿ, ಇಲ್ಲಿನ ಜಿಲ್ಲಾಧಿಕಾರಿ ಆರ್. ಗಿರೀಶ್ ಆದೇಶ ಹೊರಡಿಸಿದ್ದಾರೆ.

ಬುಲೆಟ್ ಟ್ಯಾಂಕರ್‌ಗಳು, ಕಾರ್ಗೋ ಕಂಟೈನರ್‌ಗಳು, ಮಲ್ಟಿ ಎಕ್ಸೆಲ್ ಟ್ರಕ್ ಟ್ರೈಲರ್‌ಗಳು ಹಾಗೂ 20 ಟನ್‌ಗಿಂತ ಅಧಿಕ ಭಾರದ ಸರಕು ಸಾಗಣೆ ವಾಹನಗಳ ಸಂಚಾರಕ್ಕೆ ನಿರ್ಬಂಧಿಸಲಾಗಿದೆ.

ಬೆಳಿಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೆ ರಾಜಹಂಸ, ಕಾರು, ಜೀಪು, ಟೆಂಪೊ, ಮಿನಿ ವ್ಯಾನ್, ಸಾರಿಗೆ ಸಂಸ್ಥೆಯ ಬಸ್, ಐರಾವತ ಬಸ್‌ಗಳು, 6 ಚಕ್ರದ ವಾಹನಗಳು, 20 ಟನ್ ಸಾಮರ್ಥ್ಯದ ಸರಕು ಸಾಗಣೆ ವಾಹನಗಳು ಈ ಮಾರ್ಗದಲ್ಲಿ ಸಂಚರಿಸಬಹುದು. ಆಂಬುಲೆನ್ಸ್ ಅಗ್ನಿಶಾಮಕದಳದ ವಾಹನ ಸೇರಿದಂತೆ ತುರ್ತು ಸೇವಾ ವಾಹನಗಳು 24 ಗಂಟೆ ಸಂಚಾರ ಮಾಡಬಹುದು.

Leave A Reply

Your email address will not be published.