ಶಿಕಾರಿಪುರದಿಂದ ವಿಧಾನಸಭೆಗೆ ಬಿ.ವೈ.ವಿಜಯೇಂದ್ರ ಸ್ಪರ್ಧೆ -ಯಡಿಯೂರಪ್ಪ ಘೋಷಣೆ

ಶಿವಮೊಗ್ಗ: ವಿಧಾನಸಭಾ ಚುನಾವಣೆಗೆ ಆಡಳಿತ ಪಕ್ಷ ಬಿಜೆಪಿ ಭರ್ಜರಿ ಸಿದ್ಧತೆ ನಡೆಸಿದ್ದು, ಈ ನಡುವೆ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಸ್ಪರ್ಧೆಗೆ ಕ್ಷೇತ್ರವನ್ನು ಮಾಜಿ ಸಿಎಂ ಖಚಿತಪಡಿಸಿದ್ದಾರೆ.

ಶಿವಮೊಗ್ಗದ ಶಿಕಾರಿಪುರದಲ್ಲಿ ಮಾತನಾಡಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ತಮ್ಮ ಸ್ವಕ್ಷೇತ್ರವನ್ನು ಮಗ ವಿಜಯೇಂದ್ರಗೆ ಬಿಟ್ಟುಕೊಡುತ್ತೇನೆ. ನಾನು ಕ್ಷೇತ್ರ ಬಿಟ್ಟುಕೊಡುತ್ತಿರುವುದರಿಂದ ನೇರ ಸ್ಪರ್ಧೆಯಿದೆ ಎಂದು ಘೋಷಿಸಿದರು.


Ad Widget

Ad Widget

Ad Widget

Ad Widget

Ad Widget

Ad Widget

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿ.ವೈ.ವಿಜಯೇಂದ್ರಶಿಕಾರಿಪುರದಿಂದಸ್ಪರ್ಧಿಸಲಿದ್ದಾರೆ. ಮೈಸೂರು ಭಾಗದಲ್ಲಿ ವಿಜಯೇಂದ್ರ ಸ್ಪರ್ಧೆ ಮಾಡಬೇಕು ಎಂದು ಬಹಳ ಒತ್ತಾಯವಿದೆ. ಆದರೆ ಶಿಕಾರಿಪುರ ಕ್ಷೇತ್ರ ಸ್ಥಾನ ತೆರವಾಗುತ್ತಿರುವುದರಿಂದ ವಿಜಯೇಂದ್ರ ಶಿಕಾರಿಪುರದಿಂದ ಸ್ಪರ್ಧಿಸಲಿದ್ದಾರೆ ಎಂದು ಹೇಳಿದರು.

ಇದೇ ವೇಳೆ ಮಾತನಾಡಿದ ಬಿ.ವೈ.ವಿಜಯೇಂದ್ರ, ಬಿಜೆಪಿ ರಾಜ್ಯ ಉಪಾಧ್ಯಕ್ಷನಾಗಿ ಪಕ್ಷ ಸಂಘಟನೆ ನನ್ನ ಮೊದಲ ಆದ್ಯತೆ. ತಂದೆಯ ಮಾರ್ಗದರ್ಶನ ಹಾಗೂ ವರಿಷ್ಠರ ಮಾತಿನಂತೆ ನಡೆದುಕೊಳ್ಳುತ್ತೇನೆ. ತಿಂಗಳ ಹಿಂದೆ ಶಿಕಾರಿಪುರದ ಮುಖಂಡರು ತಂದೆಯವರನ್ನು
ಬೇಟಿಯಾಗಿ ನನ್ನ ಸ್ಪರ್ಧೆಗೆ ಒತ್ತಡ ಹಾಕಿದರು ಹಾಗಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.

ಯಡಿಯೂರಪ್ಪ ಅವರು ರಾಜಕೀಯ ನಿವೃತ್ತ ಘೋಷಿಸಿಲ್ಲ.ಆದರೆ ಚುನಾವಣೆ ನಿವೃತ್ತಿ ಘೋಷಿಸಿದರು

error: Content is protected !!
Scroll to Top
%d bloggers like this: