SSLC ಪೂರಕ ಪರೀಕ್ಷೆ ಫಲಿತಾಂಶ : ಉತ್ತರ ಪತ್ರಿಕೆ ಸ್ಕ್ಯಾನ್ ಪ್ರತಿ ಹಾಗೂ ಮರು ಮೌಲ್ಯಮಾಪನಕ್ಕೆ ಅರ್ಜಿ ಕುರಿತು ಮಾಹಿತಿ!!!

ಈ ಬಾರಿಯ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಮೌಲ್ಯಮಾಪನಗೊಂಡ ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿ, ಮರು ಎಣಿಕೆ ಹಾಗೂ ಮರುಮೌಲ್ಯಮಾಪನಕ್ಕಾಗಿ  ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಅವಕಾಶ ನೀಡಿದೆ.

ವಿದ್ಯಾರ್ಥಿಗಳು ನೇರವಾಗಿ ಮರು ಎಣಿಕೆಗಾಗಿ ಭೌತಿಕವಾಗಿ ಅರ್ಜಿ ಸಲ್ಲಿಸುವಂತಿಲ್ಲ. ಮರು ಎಣಿಕೆ ಬಯಸುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಸಂಬಂದಪಟ್ಟ ವಿಷಯದ ಉತ್ತರ ಪತ್ರಿಕೆಯ ಸ್ಕ್ಯಾನ್ ಪ್ರತಿ ಹೊಂದಿರಬೇಕು. ಸ್ಕ್ಯಾನ್ ಪ್ರತಿಯನ್ನು ಪಡೆದ
ನಂತರ ಅಂಕಗಳ ಎಣಿಕೆಯಲ್ಲಿ ವ್ಯತ್ಯಾಸವಿದ್ದಲ್ಲಿ ಮರುಎಣಿಕೆಗಾಗಿ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಅಭ್ಯರ್ಥಿಗಳು ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದು. ಪ್ರತ್ಯೇಕ ಶುಲ್ಕ ಮರು ಎಣಿಕೆಗೆ ಇಲ್ಲ. ಮರು ಅಂಕಗಳ ಎಣಿಕೆಯಲ್ಲಿ ಅಂಕಗಳಲ್ಲಿ ಏನಾದರೂ ವ್ಯತ್ಯಾಸವಿದ್ದಲ್ಲಿ ಪರಿಶೀಲಿಸಿ ಪರಿಷ್ಕೃತ ಫಲಿತಾಂಶಪಟ್ಟಿಯನ್ನು ಸಂಬಂಧಿಸಿದ ಶಾಲೆಗೆ ಹಾಗೂ ವಿದ್ಯಾರ್ಥಿಗಳಿಗೆ ಮಾಹಿತಿಯನ್ನು  ನೀಡಲಾಗುವುದು.

ಸ್ಕ್ಯಾನ್ ಪ್ರತಿಗಾಗಿ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳ, ಉತ್ತರ ಪತ್ರಿಕೆಗಳನ್ನು ಸ್ಕ್ಯಾನ್ ಮಾಡಿ ಮಂಡಳಿಯ ಜಾಲತಾಣದಲ್ಲಿ ಅಪ್‌ಲೋಡ್ ಮಾಡಲಾಗುವುದು.  ಮಾಹಿತಿ ಸಿಕ್ಕ ನಂತರ ವಿದ್ಯಾರ್ಥಿಗಳು ಉತ್ತರ ಪತ್ರಿಕೆಯನ್ನ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಪಡೆದುಕೊಳ್ಳಬಹುದು.

ಸ್ಕ್ಯಾನ್ ಪ್ರತಿ ಮತ್ತು ಮರುಮೌಲ್ಯಮಾಪನ ಅರ್ಜಿ ಸಲ್ಲಿಕಿಗೆ ಶುಲ್ಕದ ವಿವರ ಈ ಕೆಳಗೆ ನೀಡಲಾಗಿದೆ.

ಆನ್‌ಲೈನ್ ಮೂಲಕ ಸ್ಕ್ಯಾನ್ ಪ್ರತಿ ಪಡೆಯಲು ಒಂದು ವಿಷಯಕ್ಕೆ – 410 ರೂಪಾಯಿ.
ಆನ್‌ಲೈನ್ ಮೂಲಕ ಮರುಮೌಲ್ಯಮಾಪನಕ್ಕೆ ಒಂದು ವಿಷಯಕ್ಕೆ- 810 ರೂಪಾಯಿ.
ಆಫ್‌ಲೈನ್ ಮೂಲಕ ಸ್ಕ್ಯಾನ್ ಪ್ರತಿ ಪಡೆಯಲು ಒಂದು ವಿಷಯಕ್ಕೆ – 420 ರೂಪಾಯಿ.
ಆಫ್‌ಲೈನ್ ಮೂಲಕ ಮರುಮೌಲ್ಯಮಾಪನಕ್ಕೆ ಒಂದು
ವಿಷಯಕ್ಕೆ- 820 ರೂಪಾಯಿ.

ಗಮನಿಸಿ ಬೇಕಾದ ದಿನಾಂಕಗಳು :
ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿಯನ್ನು ಪಡೆಯಲು  ಅರ್ಜಿ ಸಲ್ಲಿಸಲು ಆರಂಭ ದಿನಾಂಕ – 22-07-2022
ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿಯನ್ನು ಪಡೆಯಲು ಅರ್ಜಿ ಸಲ್ಲಿಸಲು ಅಂತಿಮ ದಿನಾಂಕ – 26-07-2022
ಡೆಬಿಟ್ ಕೊಟ್ ಕಾರ್ಡ್ ಆನ್‌ಲೈನ್ ಬ್ಯಾಂಕಿಂಗ್ ಸೌಲಭ್ಯವಿಲ್ಲದವರು ಆನ್‌ಲೈನ್‌ನಲ್ಲಿ ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿಯನ್ನು ಪಡೆಯಲು ಅರ್ಜಿ ಸಲ್ಲಿಸಿದ ನಂತರ Offline ಚಲನ್ ಡೌನ್‌ಲೋಡ್ ಮಾಡಿಕೊಂಡು ಶುಲ್ಕವನ್ನು ಬ್ಯಾಂಕಿಗೆ ಪಾವತಿಸುವ ಅಂತಿಮ ದಿನಾಂಕ – 27-07-2022
ಉತ್ತರ ಪತ್ರಿಕೆಗಳ ಮರು ಎಣಿಕೆಗೆ ಅರ್ಜಿ ಸಲ್ಲಿಸಲು ಆರಂಭ ದಿನಾಂಕ – 25-07-2022
ಉತ್ತರ ಪತ್ರಿಕೆಗಳ ಮರು ಎಣಿಕೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 31-07-2022
ಉತ್ತರ ಪತ್ರಿಕೆಗಳ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಆರಂಭ ದಿನಾಂಕ – 25-07-2022
ಉತ್ತರ ಪತ್ರಿಕೆಗಳ ಮರುಮೌಲ್ಯಮಾಪನಕ್ಕೆ ಅರ್ಜಿ
ಸಲ್ಲಿಸಲು ಅಂತಿಯ ದಿನಾಂಕ – 31-07-2022
ಡೆಬಿಟ್ ಕಾರ್ಡ್/ಕ್ರೀಟ್ ಕಾರ್ಡ್ ಆನ್‌ಲೈನ್ ಬ್ಯಾಂಕಿಂಗ್ ಸೌಲಭ್ಯವಿಲ್ಲದವರು ಆನ್‌ಲೈನ್‌ನಲ್ಲಿ ಉತ್ತರ ಪತ್ರಿಕೆಗಳ, ಮರುಮೌಲ್ಯ ಮಾಪನಕ್ಕೆ ಅರ್ಜಿ ಸಲ್ಲಿಸಿದ ನಂತರ ಶುಲ್ಕವನ್ನು ಬ್ಯಾಂಕಿಗೆ ಪಾವತಿಸುವ ಅಂತಿಮ ದಿನಾಂಕ 01-08-2022

Leave A Reply

Your email address will not be published.