ಮಂಗಳೂರು | ಅನುಮಾನಾಸ್ಪದ ಸ್ಥಿತಿಯಲ್ಲಿ ಸ್ವಾಮೀಜಿ ಶವ ಪತ್ತೆ

ಮಂಗಳೂರು : ಸ್ವಾಮೀಜಿಯೋರ್ವರು ಅನುಮಾನಾಸ್ಪದವಾಗಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರದಂದು ನಡೆದಿದೆ.

 

ಆತ್ಮಹತ್ಯೆ ಮಾಡಿಕೊಂಡವರನ್ನು ಬಜಪೆಯ ತಲಕಳ ಸ್ವಾಮಿ ಎಂದು ಗುರುತಿಸಲಾಗಿದೆ. ಇವರು ಜೀವನದಲ್ಲಿ ಜಿಗುಪ್ಪೆ ಹೊಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆಯಾದರೂ ಅವರ ಸಾವಿನ ಬಗ್ಗೆ ಹಲವಾರು ಅನುಮಾನಗಳಿದ್ದು, ಈ ಕುರಿತು ಶಿಷ್ಯ ವೃಂದವನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.

Leave A Reply

Your email address will not be published.