ಉಡುಪಿ: ಲಾಡ್ಜ್ ಒಂದಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಭಿನ್ನ ಕೋಮಿನ ಜೋಡಿ ತೆರಳಿದ ಮಾಹಿತಿ ತಿಳಿದ ಹಿಂದೂ ಸಂಘಟನೆ ಕಾರ್ಯಕರ್ತರು ಪೊಲೀಸರಿಗೆ ಮಾಹಿತಿ ರವಾಣಿಸಿದ್ದು, ಪೊಲೀಸರು ಜೋಡಿಯನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದ ಘಟನೆಯೊಂದು ಜಿಲ್ಲೆಯ ಬೈಂದೂರು ತಾಲೂಕಿನ ನಂದನವನ ವಸತಿಗೃಹದಲ್ಲಿ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ-ತೊಕ್ಕೊಟ್ಟು ಪರಿಸರದ ಗುಜುರಿ ವ್ಯಾಪಾರಿ ಅಮಿರ್ ಅಲಿ ಎಂಬಾತ ತನ್ನ ಅಂಗಡಿಯಲ್ಲಿ ಕೆಲಸಕ್ಕಿರುವ ಹಿಂದೂ ಯುವತಿಯನ್ನು ಲಾಡ್ಜ್ ಗೆ ಕರೆದುಕೊಂಡು ಹೋಗಿದ್ದ ಎನ್ನುವ ಮಾಹಿತಿಯೊಂದು ಮೂಲಗಳಿಂದ ತಿಳಿದುಬಂದಿತ್ತು.
ಜೋಡಿಯು ಉಡುಪಿಯತ್ತ ತೆರಳಿರುವ ಖಚಿತ ಮಾಹಿತಿ ಪಡೆದ ಹಿಂದೂ ಸಂಘಟನೆಗಳ ಕಾರ್ಯಕರ್ತರು ನಿಗಾ ಇಟ್ಟಿದ್ದು, ಬೈಂದೂರು ಸಮೀಪದ ಲಾಡ್ಜ್ ಗೆ ತೆರಳಿದ ವಿಷಯ ಗಮನಕ್ಕೆ ಬರುತ್ತಿದ್ದಂತೆ ಪೊಲೀಸರಿಗೆ ಮಾಹಿತಿ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.
ಪೊಲೀಸರು ಜೋಡಿಯನ್ನು ವಶಕ್ಕೆ ಪಡೆದಿದ್ದು, ಯುವತಿಯ ಒಪ್ಪಿಗೆಯ ಮೇರೆಗೆ ಲಾಡ್ಜ್ ಗೆ ತೆರಳಿದ್ದಾರೆ ಎಂದು ಹೇಳಲಾಗಿದ್ದು,ಯುವತಿಯ ಹೆತ್ತವರನ್ನು ಠಾಣೆಗೆ ಕರೆಸಲಾಗಿದೆ ಎಂದು ತಿಳಿದುಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
You must log in to post a comment.