ಖ್ಯಾತ ನಟ ಅರ್ಜುನ್ ಸರ್ಜಾ ತಾಯಿ ನಿಧನ

ಖ್ಯಾತ ನಟ ಧ್ರುವ ಸರ್ಜಾ ಅವರ ಅಜ್ಜಿ, ಅರ್ಜುನ್ ಸರ್ಜಾರ ತಾಯಿ ಲಕ್ಷ್ಮೀದೇವಿ ನಿಧನರಾಗಿದ್ದಾರೆ. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಲಕ್ಷ್ಮೀ ದೇವಿ ಅವರು ಮಧ್ಯಾಹ್ನ 12 ಗಂಟೆ ಸುಮಾರಿಗೆ ನಿಧನರಾಗಿದ್ದಾರೆ.

ಅವರಿಗೆ 84 ವರ್ಷಗಳಾಗಿತ್ತು. ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಲಕ್ಷ್ಮೀದೇವಿ ಅವರನ್ನ ಕಳೆದ 22 ದಿನಗಳಿಂದ ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಅವರು 22 ದಿನಗಳಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.

ಅಮ್ಮನಿಗೆ ಅನಾರೋಗ್ಯ ಹಿನ್ನೆಲೆಯಲ್ಲಿ ಅರ್ಜುನ್ ಸರ್ಜಾ ಬೆಂಗಳೂರಿನಲ್ಲಿಯೇ ಇದ್ದಾರೆ ಅನ್ನೋ ಮಾಹಿತಿ ಇದೆ. ಇನ್ನು ಧ್ರುವ ಸರ್ಜಾ, ಮಾರ್ಟಿನ್ ಚಿತ್ರದ ಚಿತ್ರೀಕರಣ ಹಿನ್ನೆಲೆಯಲ್ಲಿ ಹೈದ್ರಾಬಾದ್‌ನಲ್ಲಿ ಇದ್ದಾರೆ.

Leave A Reply

Your email address will not be published.