ಬಂಟ್ವಾಳ : ಕಾಲೇಜಿನಲ್ಲಿ ವಿದ್ಯಾರ್ಥಿಗಳ ಮಾರಾಮಾರಿ | 14 ವಿದ್ಯಾರ್ಥಿಗಳಿಗೆ ತೀವ್ರವಾದ ಹಲ್ಲೆ, ದೂರು ದಾಖಲು

ಬಂಟ್ವಾಳ : ಬಿಸಿಎಂ ಹಾಸ್ಟೆಲ್‌ನ 14 ವಿದ್ಯಾರ್ಥಿಗಳಿಗೆ ಅದೇ ಹಾಸ್ಟೆಲ್ ನ ವಿದ್ಯಾರ್ಥಿಗಳು ಹಲ್ಲೆ ನಡೆಸಿದ ಘಟನೆಯೊಂದು ನಡೆದಿದೆ. ಜು.20 ರಂದು ಬೆಳ್ತಂಗಡಿ ತಾಲೂಕಿನ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

 

ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ವಾಮದಪದವಿನಲ್ಲಿರುವ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಹಲ್ಲೆಗೊಳಗಾದವರು. 14 ಪಿಯುಸಿ ವಿದ್ಯಾರ್ಥಿಗಳಿಗೆ ಬೆಲ್ಟ್, ವಿಕೇಟ್ ಗಳದ ತೀವ್ರವಾಗಿ ಹಲ್ಲೆ ಮಾಡಿದ್ದಾರೆ. ಹಾಗೂ ಇದರ ಬಗ್ಗೆ ಯಾರಿಗಾದರೂ ದೂರು ನೀಡಿದರೆ ಮತ್ತೆ ಹೊಡೆಯುವುದಾಗಿ ಜೀವ ಬೆದರಿಕೆ ಕೂಡಾ ಹಾಕಿದ್ದಾರೆಂದು ಆರೋಪಿಸಲಾಗಿದೆ. ಗಾಯಗೊಂಡ ವಿದ್ಯಾರ್ಥಿಗಳನ್ನು ಪಿಯು ಕಾಲೇಜಿನ ಪ್ರಾಂಶುಪಾಲರು ವಾಮದಪದವು ಸಮುದಾಯ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗಾಗಿ ದಾಖಲಿಸಿದ್ದಾರೆ.

ಈ ಘಟನೆ ಬಗ್ಗೆ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀಧರ ಹೆಚ್‌ಜಿಯವರು ಹಲ್ಲೆಯ ಬಗ್ಗೆ ಪುಂಜಾಲಕಟ್ಟೆ ಠಾಣೆಗೆ ದೂರು ನೀಡಿದ್ದಾರೆ.

ವಾಮದಪದವು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಾದ ಶರತ್ ಎಸ್, ಅಭಿಷೇಕ್, ಸುದೀಪ್ ರಾಕೇಶ್ ಹಾಗೂ ಸಂಗಡಿಗರು ಹಲ್ಲೆ ನಡೆಸಿದ ವಿದ್ಯಾರ್ಥಿಗಳು, ಇವರ ವಿರುದ್ಧ ಐಪಿಸಿ ಕಲಂ: 143, 148, 324, 506 ಜೊತೆಗೆ 149 ರಂತೆ ಹಾಗೂ 116 ಕರ್ನಾಟಕ ಎಜುಕೇಷನ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

Leave A Reply

Your email address will not be published.