BIGG NEWS । ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಟವೆಲ್ ಹಾಕಲು ಕಾಯುತ್ತಿರುವ ಇನ್ನೊಬ್ಬ ಅಭ್ಯರ್ಥಿ ಯಾರು ಗೊತ್ತಾ ?
ಮೈಸೂರು : ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ವಿಚಾರದ ಕುರಿತಂತೆ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ ನೀಡಿದ್ದು, ಮುಖ್ಯಮಂತ್ರಿ ಯಾರೆಂದು ಪಕ್ಷದ ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಹೇಳಿದ್ದಾರೆ. ಆ ಮೂಲಕ ಹಲವು ವರ್ಷಗಳಿಂದ ಕೈತಪ್ಪಿ ಹೋಗುತ್ತಿರುವ ಮುಖ್ಯಮಂತ್ರಿ ಸ್ಥಾನಕ್ಕೆ ಟವೆಲ್ ಹಾಕಲು ಒಂದು ಹೆಜ್ಜೆ ಇಟ್ಟಿದ್ದಾರೆ ಖರ್ಗೆ. ಹೀಗಾಗಿ ಸಿದ್ದರಾಮಯ್ಯ, ಡಿಕೆಶಿ, ಶಾಮನೂರು ಜತೆಗೆ ಖರ್ಗೆ ಸ್ಪರ್ಧೆಯಲ್ಲಿ ಸೇರಿಕೊಂಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ಫಲಿತಾಂಶಕ್ಕೂ ಮುನ್ನ ಸಿಎಂ ಅಭ್ಯರ್ಥಿ ಯಾರೆಂದು ಹೇಳುವುದಿಲ್ಲ. ನಾನು ಸಿಎಂ, ನಾನು ಸಿಎಂ ಅಂತಾ ಹೇಳುವುದು ಸರಿಯಲ್ಲ. ಸಿಎಂ ಯಾರಗಬೇಕೆಂದು ಮೈಸೂರು, ಬೆಂಗಳೂರು, ಕಲಬುರಗಿಯಲ್ಲಿ ತೀರ್ಮಾನಿಸುವುದಿಲ್ಲ. ಸಿಎಂ ಯಾರಗಬೇಕೆಂದು ಪಕ್ಷದ ಹೈಕಮಾಂಡ್ ತೀರ್ಮಾನಿಸುತ್ತದೆ ಎಂದು ಹೇಳಿದ್ದಾರೆ.
ಅವತ್ತಿನ ರಾಜಕೀಯ ಪರಿಸ್ಥಿತಿ ಆಧಾರದ ಮೇಲೆ ಸಿಎಂ ಯಾರೆಂಬುದ ನಿರ್ಧಾರ ಮಾಡಲಾಗುತ್ತದೆ. ಯಾರಿಗೆ ನಾಯಕತ್ವ ಕೊಡಬೇಕು ಎಂದು ತೀರ್ಮಾನಿಸಲಾಗುತ್ತದೆ. ನಾವು ಸಾಮೂಹಿಕ ನಾಯಕತ್ವದಲ್ಲ ಚುನಾವಣೆಗೆ ಹೋಗುತ್ತದೆ. ಮೊದಲು ಪಕ್ಷವನ್ನು ಅಧಿಕಾರಕ್ಕೆ ತರುವುದು ನಮ್ಮ ಉದ್ದೇಶ ಎಂದರು.
ಇನ್ನು ಬಿ.ಎಸ್. ಯಡಿಯೂರಪ್ಪ ರಾಜಕೀಯ ನಿವೃತ್ತಿ ವಿಚಾರದ ಕುರಿತು ಪ್ರತಿಕ್ರಿಯೆ ನೀಡಿದ ಖರ್ಗೆ, ಅದು ಯಡಿಯೂರಪ್ಪ ಅವರ ವೈಯಕ್ತಿಕ ನಿರ್ಧಾರ, ಎಲ್ಲರಿಗೂ ತೀರ್ಮಾನ ತೆಗೆದುಕೊಳ್ಳುವ ಸ್ವಾತಂತ್ರ್ಯವಿದೆ.ನಾವು ಯಾರೇ ಇರಲಿ, ಬಿಡಲಿ ದೇಶ ಅಂತೂ ಇರುತ್ತದೆ ಎಂದು ಹೇಳಿದ್ದಾರೆ.