ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ ಫೈನಲ್ ನಲ್ಲಿ ಬೆಳ್ಳಿ ಪದಕಕ್ಕೆ ಕೊರಳೊಡ್ಡಿದ ನೀರಜ್ ಚೋಪ್ರಾ
ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ನೀರಜ್ ಚೋಪ್ರಾ ಜಾವೆಲಿನ್ ಫೈನಲ್ ನಲ್ಲಿ ಎರಡನೇ ಸ್ಥಾನಕ್ಕೆ ತೃಪ್ತಿ ಪಟ್ಟು, ಬೆಳ್ಳಿ ಪದಕಕ್ಕೆ ಕೊರಳೊಡ್ಡಿದ್ದಾರೆ.
ಪುರುಷರ ಜಾವೆಲಿನ್ ಫೈನಲ್‌ನಲ್ಲಿ ನೀರಜ್ ಚೋಪ್ರಾ ಬೆಳ್ಳಿಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. ಚಾಂಪಿಯನ್‌ಶಿಪ್‌ನ ನಾಲ್ಕನೇ ಪ್ರಯತ್ನದಲ್ಲಿ ನೀರಜ್ 88.13 ಮೀ. ದೂರ ಜಾವೆಲಿನ್ ಎಸೆಯುವ ಮೂಲಕ ರಜತ ಪದಕ ಪಡೆದರು.
ನೀರಜ್ ಚೋಪ್ರಾ ಅವರು ಜಾವೆಲಿನ್ ಅರ್ಹತೆಯನ್ನು ಪಡೆದ ಮೊದಲ ಅಥ್ಲೀಟ್ ಆಗಿದ್ದು, ಫೈನಲ್ ಗೆ ಅರ್ಹತೆ ಪಡೆಯಲು ಚೋಪ್ರಾ 83.5 ಮೀಟರ್ ಗೆ ಜಾವೆಲಿನ್ ಎಸೆಯಬೇಕಿತ್ತು. ಆದರೆ ನೀರಜ್ ಚೋಪ್ರಾ ಅವರು ತಮ್ಮ ಮೊದಲ ಪ್ರಯತ್ನದಲ್ಲೇ 88.39 ಮೀ ದೂರಕ್ಕೆ ಜಾವೆಲಿನ್ ಎಸೆದು ಚೊಚ್ಚಲ ವಿಶ್ವ ಚಾಂಪಿಯನ್‌ಶಿಪ್ ನ ಫೈನಲ್ ಪ್ರವೇಶ ಮಾಡಿದ್ದರು. ಇದೀಗ 88.13 ಮೀ. ದೂರ ಜಾವೆಲಿನ್ ಎಸೆಯುವ ಮೂಲಕ ಬೆಳ್ಳಿ ಪದಕಕ್ಕೆ ತೃಪ್ತಿ ಪಟ್ಟುಕೊಂಡಿದ್ದಾರೆ.