ಧ್ವಜ ಸಂಹಿತೆಯಲ್ಲಿ ಬದಲಾವಣೆ ತಂದ ಕೇಂದ್ರ ಸರ್ಕಾರ

ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವ ಆಚರಣೆಯನ್ನು ಭರ್ಜರಿ ಸಿದ್ಧತೆಯೊಂದಿಗೆ ನಡೆಸಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಧ್ವಜ ಸಂಹಿತೆಯಲ್ಲಿ ಬದಲಾವಣೆ ತಂದಿದೆ.

ಕೇಂದ್ರ ಸರ್ಕಾರವು ಧ್ವಜ ಸಂಹಿತೆಯಲ್ಲಿ ಬದಲಾವಣೆಯನ್ನು ತಂದಿದ್ದು, ಈ ಮೂಲಕ ರಾತ್ರಿ ಸಮಯದಲ್ಲೂ ಕೂಡ ಧ್ವಜ ಹಾರಿಸಲು ಕೇಂದ್ರ ಸರ್ಕಾರ ಅವಕಾಶ ನೀಡಿದೆ. ಇದರ ಜೊತೆಗೆ ಯಂತ್ರದಿಂದ ತಯಾರಿಸಿದ ಹಾಗೂ ಪಾಲಿಸ್ಟರ್ ಧ್ವಜಗಳನ್ನು ಕೂಡ ಬಳಸಬಹುದಾಗಿದೆ.


Ad Widget

Ad Widget

Ad Widget

Ad Widget

Ad Widget

Ad Widget

Ad Widget

ಆಜಾದಿ ಕಾ ಅಮೃತ್ ಮಹೋತ್ಸವ ಅಂಗವಾಗಿ ಆಗಸ್ಟ್ 13 ರಿಂದ 15 ನೇ ತಾರೀಖಿನವರೆಗೆ ನಡೆಯಲಿರುವ ‘ಹರ್ ಘರ್ ತಿರಂಗ’ ( ಪ್ರತಿಯೊಬ್ಬರ ಮನೆಯಲ್ಲೂ ತ್ರಿವರ್ಣ ಧ್ವಜ) ಅಭಿಯಾನದ ಅಂಗವಾಗಿ ಕೇಂದ್ರ ಸರ್ಕಾರವು ಈ ಬದಲಾವಣೆಯನ್ನು ತಂದಿದೆ ಎಂದು ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ಅವರು ತಿಳಿಸಿದ್ದು, ಈ ಮೂಲಕ ಎಲ್ಲಾ ಸಚಿವಾಲಯಗಳು ಮತ್ತು ಇಲಾಖೆಗಳ ಕಾರ್ಯದರ್ಶಿಗಳಿಗೆ ಪತ್ರವನ್ನು ಬರೆದಿದ್ದಾರೆ.

ಕಳೆದ ಬಾರಿ ಸೂರ್ಯೋದಯದಿಂದ ಸೂರ್ಯಾಸ್ತದವರೆಗೆ ಮಾತ್ರ ಧ್ವಜ ಹಾರಿಸಲು ಅವಕಾಶವನ್ನು ನೀಡಲಾಗಿತ್ತು. ಆಧುನಿಕ ಕೇಂದ್ರ ಸರ್ಕಾರ ಈ ಬದಲಾವಣೆಯನ್ನು ತಂದಿದೆ. 2002ರ ಭಾರತದ ಧ್ವಜ ಸಂಹಿತೆ ಮತ್ತು1971 ರ ರಾಷ್ಟ್ರೀಯ ಗೌರವಕ್ಕೆ ಅವಮಾನಗಳ ತಡೆ ಕಾಯಿದೆಗಳನ್ನು ಗಮನದಲ್ಲಿಟ್ಟುಕೊಂಡು ಭಾರತೀಯ ರಾಷ್ಟ್ರಧ್ವಜದ ಪ್ರದರ್ಶನ, ಹಾರಾಟ ಮತ್ತು ಬಳಕೆಯನ್ನು ಮಾಡಬೇಕು ಎಂದು ಎಲ್ಲಾ ಕೇಂದ್ರ ಸಚಿವಾಲಯಗಳು ಮತ್ತು ಇಲಾಖೆಗಳ ಕಾರ್ಯದರ್ಶಿಗಳಿಗೆ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ಪತ್ರ ಬರೆದಿದ್ದಾರೆ.

ಭಾರತದ ಧ್ವಜ ಸಂಹಿತೆ, 2002 ಅನ್ನು ಜುಲೈ 20, 2022 ರ ಆದೇಶದ ಮೂಲಕ ಮತ್ತಷ್ಟು ತಿದ್ದುಪಡಿ ಮಾಡಲಾಗಿದೆ. ಧ್ವಜವನ್ನು ತೆರೆದ ಸ್ಥಳಗಳಲ್ಲಿ, ಸಾರ್ವಜನಿಕ ಸದಸ್ಯರ ಮನೆಯ ಮೇಲೆ ಪ್ರದರ್ಶಿಸಬಹುದು. ಧ್ವಜವನ್ನು ಹಗಲು ರಾತ್ರಿಯಲ್ಲಿ ಹಾರಿಸಬಹುದು. ಜೊತೆಗೆ, ರಾಷ್ಟ್ರಧ್ವಜವನ್ನು ಕೈಯಿಂದ ನೂಲುವ ಮತ್ತು ಕೈಯಿಂದ ನೇಯ್ದ ಅಥವಾ ಯಂತ್ರದಿಂದ ತಯಾರಿಸಿದ ಹತ್ತಿ/ಪಾಲಿಸ್ಟರ್/ಉಣ್ಣೆ/ರೇಷ್ಮೆ/ಖಾದಿ ಯನ್ನು ಬಳಸಿ ತಯಾರಿಸಲಾಗುವುದು ಎಂದು ಬದಲಾಯಿಸಲಾಗಿದೆ. ಈ ಮೊದಲು ಯಂತ್ರದಿಂದ ತಯಾರಿಸಿದ ಮತ್ತು ಪಾಲಿಸ್ಟರ್ ಬಳಕೆಯನ್ನು ನಿಷೇಧಿಸಲಾಗಿತ್ತು

ಸ್ವತಂತ್ರ ಭಾರತದ 75 ವರ್ಷಗಳ ನೆನಪಿಗಾಗಿ ಆಜಾದಿ ಕಾ ಅಮೃತ್ ಮಹೋತ್ಸವವನ್ನು ಆಚರಿಸಲಾಗುತ್ತಿದೆ. ಆಗಸ್ಟ್ 13 ರಿಂದ 15 ರವರೆಗೆ ತಮ್ಮ ಮನೆಗಳಲ್ಲಿ ರಾಷ್ಟ್ರಧ್ವಜವನ್ನು ಹಾರಿಸುವಂತೆ ನಾಗರಿಕರನ್ನು ಉತ್ತೇಜಿಸಲು ‘ಹರ್ ಘರ್ ತಿರಂಗ’ ಅಭಿಯಾನವನ್ನು ಪ್ರಾರಂಭಿಸಲಾಗಿದೆ.

error: Content is protected !!
Scroll to Top
%d bloggers like this: