ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಇಂಜಿನಿಯರಿಂಗ್ ಪದವಿ ಅಭ್ಯರ್ಥಿಗಳಿಗೆ ಉದ್ಯೋಗವಕಾಶ | ಅರ್ಜಿ ಸಲ್ಲಿಸಲು ಕೊನೆ ದಿನಾಂಕ ಆಗಸ್ಟ್ 5
ಸುರತ್ಕಲ್ನಲ್ಲಿರು ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಇಂಜಿನಿಯರಿಂಗ್ ಪದವಿ ಅಭ್ಯರ್ಥಿಗಳಿಗೆ ಉದ್ಯೋಗವಕಾಶವಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಮೈರ್ ಟೆಕ್ನಿಮಾಂಟ್ ಸೆಂಟರ್ ಫಾರ್ ಕ್ಲೀನ್ ಎನರ್ಜಿ ಟ್ರಾನ್ಸಿಶನ್ ಫಾರ್ ಸಂಶೋಧನೆಗಾಗಿ ಈ ಹುದ್ದೆಯೂ ತಾತ್ಕಾಲಿಕ ಗುತ್ತಿಗೆ ಆಧಾರದ ನೇಮಕಾತಿ ಮಾಡುತ್ತಿದೆ.
ಸಂಸ್ಥೆಯ ಹೆಸರು: ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ
ಹುದ್ದೆಯ ಹೆಸರು: ಪ್ರಾಜೆಕ್ಟ್ ಅಸೋಸಿಯೇಟ್
ಹುದ್ದೆಗಳ ಸಂಖ್ಯೆ: 2
ಉದ್ಯೋಗ ಸ್ಥಳ: ಸುರತ್ಕಲ್ – ಕರ್ನಾಟಕ
ವೇತನ: 18000-31000 ರೂ. ಪ್ರತಿ ತಿಂಗಳು
ಹುದ್ದೆ, ಹುದ್ದೆ ಸಂಖ್ಯೆ, ವಿದ್ಯಾರ್ಹತೆ, ವೇತನ:
ಪ್ರಾಜೆಕ್ಟ್ ಅಸೋಸಿಯೇಟ್-1 1 ಥರ್ಮಲ್ ಇಂಜಿನಿಯರಿಂಗ್/ಕೆಮಿಕಲ್ ಇಂಜಿನಿಯರಿಂಗ್ ನಲ್ಲಿ ಎಂಇ ಅಥವಾ ಎಂಟೆಕ್ 31000 ರೂ ಮಾಸಿಕ
ಪ್ರಾಜೆಕ್ಟ್ ಅಸೋಸಿಯೇಟ್-2 1 ಎಂಎಸ್ಸಿ ಪದವಿ 18000 ರೂ ಮಾಸಿಕ
ವಯೋಮಿತಿ: ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯ ಗರಿಷ್ಠ ವಯಸ್ಸು 30 ವರ್ಷಗಳು ಮೀರಿರಬಾರದು.
ವಯೋಮಿತಿ ಸಡಿಲಿಕೆ:
ಪ.ಜಾ, ಪ.ಪಂ, ಹಿಂದುಳಿದ ವರ್ಗ ಮತ್ತು ವಿಕಲಚೇತನ ಮತ್ತು ಮಹಿಳಾ ಅಭ್ಯರ್ಥಿಗಳು: 05 ವರ್ಷಗಳು
ಆಯ್ಕೆ ಪ್ರಕ್ರಿಯೆ:
ಅರ್ಹತೆ, ಅನುಭವ, ಪರೀಕ್ಷಾ ಕಾರ್ಯಕ್ಷಮತೆ ಮತ್ತು ಸಂದರ್ಶನ
ಅರ್ಜಿ ಸಲ್ಲಿಕೆ: ಆಫ್ಲೈನ್ನ ಅಥವಾ ಇಮೇಲ್ ಮುಖಾಂತರ
ಇಮೇಲ್ ವಿಳಾಸ: mt.center-research@nitk.edu.in
ಪ್ರಮುಖ ದಿನಾಂಕಗಳು:
ಆಫ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 21-07-2022
ಆಫ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 05-ಆಗಸ್ಟ್-2022
ಅರ್ಜಿ ಸಲ್ಲಿಕೆ ಪ್ರಕ್ರಿಯೆ:
*ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ನೀಡಿ. ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಅವುಗಳನ್ನು ನೀಡಿ.
*ನಿಗದಿತ ನಮೂನೆಯಲ್ಲಿ ಫಾರ್ಮ್ ಅಲ್ಲಿ ಶೈಕ್ಷಣಿಕ ಮಾಹಿತಿ, ಅನುಭವ ಸೇರಿದಂತೆ ಇತರೆ ವಿವರಗಳನ್ನು ನೀಡಿ. ಯಾವ ಹುದ್ದೆಗೆ ಎಂಬುದನ್ನು ಅರ್ಜಿಯಲ್ಲಿ ನಮೂದಿಸಿ. ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ನೀಡಿ
*ಕೊನೆಯದಾಗಿ ಅರ್ಜಿ ನಮೂನೆಯನ್ನು ಪರಿಶೀಲಿಸಿ ಕೆಳಗಿನ ಇಮೇಲ್ ವಿಳಾಸ ಅಥವಾ ಪೋಸ್ಟಲ್ ನಿಗದಿತ ದಿನಾಂಕದೊಳಗೆ ಕಳುಹಿಸಬೇಕಿದೆ.
ಡಾ. ವಾಸುದೇವ ಮಾದವ್, ಸಿಎಸ್ಆರ್ ಪ್ರಾಜೆಕ್ಟ್ ಸಂಯೋಜಕರು, ಮೈರ್ ಟೆಕ್ನಿಮಾಂಟ್ ಸೆಂಟರ್ ಫಾರ್ ಕ್ಲೀನ್ ಎನರ್ಜಿ ಟ್ರಾನ್ಸಿಶನ್, ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ, ಸುರತ್ಕಲ್
ಅಧಿಕೃತ ವೆಬ್ಸೈಟ್: nitk.ac.in