ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಇಂಜಿನಿಯರಿಂಗ್​ ಪದವಿ ಅಭ್ಯರ್ಥಿಗಳಿಗೆ ಉದ್ಯೋಗವಕಾಶ | ಅರ್ಜಿ ಸಲ್ಲಿಸಲು ಕೊನೆ ದಿನಾಂಕ ಆಗಸ್ಟ್ 5

ಸುರತ್ಕಲ್​ನಲ್ಲಿರು ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಇಂಜಿನಿಯರಿಂಗ್​ ಪದವಿ ಅಭ್ಯರ್ಥಿಗಳಿಗೆ ಉದ್ಯೋಗವಕಾಶವಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಮೈರ್ ಟೆಕ್ನಿಮಾಂಟ್ ಸೆಂಟರ್ ಫಾರ್ ಕ್ಲೀನ್ ಎನರ್ಜಿ ಟ್ರಾನ್ಸಿಶನ್ ಫಾರ್ ಸಂಶೋಧನೆಗಾಗಿ ಈ ಹುದ್ದೆಯೂ ತಾತ್ಕಾಲಿಕ ಗುತ್ತಿಗೆ ಆಧಾರದ ನೇಮಕಾತಿ ಮಾಡುತ್ತಿದೆ.

ಸಂಸ್ಥೆಯ ಹೆಸರು: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ
ಹುದ್ದೆಯ ಹೆಸರು: ಪ್ರಾಜೆಕ್ಟ್ ಅಸೋಸಿಯೇಟ್
ಹುದ್ದೆಗಳ ಸಂಖ್ಯೆ: 2
ಉದ್ಯೋಗ ಸ್ಥಳ: ಸುರತ್ಕಲ್ – ಕರ್ನಾಟಕ
ವೇತನ: 18000-31000 ರೂ. ಪ್ರತಿ ತಿಂಗಳು
ಹುದ್ದೆ, ಹುದ್ದೆ ಸಂಖ್ಯೆ, ವಿದ್ಯಾರ್ಹತೆ, ವೇತನ:
ಪ್ರಾಜೆಕ್ಟ್ ಅಸೋಸಿಯೇಟ್-1 1 ಥರ್ಮಲ್ ಇಂಜಿನಿಯರಿಂಗ್/ಕೆಮಿಕಲ್ ಇಂಜಿನಿಯರಿಂಗ್ ನಲ್ಲಿ ಎಂಇ ಅಥವಾ ಎಂಟೆಕ್​ 31000 ರೂ ಮಾಸಿಕ
ಪ್ರಾಜೆಕ್ಟ್ ಅಸೋಸಿಯೇಟ್-2 1 ಎಂಎಸ್ಸಿ ಪದವಿ 18000 ರೂ ಮಾಸಿಕ

ವಯೋಮಿತಿ: ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯ ಗರಿಷ್ಠ ವಯಸ್ಸು 30 ವರ್ಷಗಳು ಮೀರಿರಬಾರದು.

ವಯೋಮಿತಿ ಸಡಿಲಿಕೆ:
ಪ.ಜಾ, ಪ.ಪಂ, ಹಿಂದುಳಿದ ವರ್ಗ ಮತ್ತು ವಿಕಲಚೇತನ ಮತ್ತು ಮಹಿಳಾ ಅಭ್ಯರ್ಥಿಗಳು: 05 ವರ್ಷಗಳು

ಆಯ್ಕೆ ಪ್ರಕ್ರಿಯೆ:
ಅರ್ಹತೆ, ಅನುಭವ, ಪರೀಕ್ಷಾ ಕಾರ್ಯಕ್ಷಮತೆ ಮತ್ತು ಸಂದರ್ಶನ

ಅರ್ಜಿ ಸಲ್ಲಿಕೆ: ಆಫ್​ಲೈನ್​ನ ಅಥವಾ ಇಮೇಲ್​ ಮುಖಾಂತರ

ಇಮೇಲ್​ ವಿಳಾಸ: mt.center-research@nitk.edu.in

ಪ್ರಮುಖ ದಿನಾಂಕಗಳು:
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 21-07-2022
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 05-ಆಗಸ್ಟ್-2022

ಅರ್ಜಿ ಸಲ್ಲಿಕೆ ಪ್ರಕ್ರಿಯೆ:

*ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ನೀಡಿ. ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಅವುಗಳನ್ನು ನೀಡಿ.
*ನಿಗದಿತ ನಮೂನೆಯಲ್ಲಿ ಫಾರ್ಮ್ ಅಲ್ಲಿ ಶೈಕ್ಷಣಿಕ ಮಾಹಿತಿ, ಅನುಭವ ಸೇರಿದಂತೆ ಇತರೆ ವಿವರಗಳನ್ನು ನೀಡಿ. ಯಾವ ಹುದ್ದೆಗೆ ಎಂಬುದನ್ನು ಅರ್ಜಿಯಲ್ಲಿ ನಮೂದಿಸಿ. ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ನೀಡಿ
*ಕೊನೆಯದಾಗಿ ಅರ್ಜಿ ನಮೂನೆಯನ್ನು ಪರಿಶೀಲಿಸಿ ಕೆಳಗಿನ ಇಮೇಲ್​ ವಿಳಾಸ ಅಥವಾ ಪೋಸ್ಟಲ್​ ನಿಗದಿತ ದಿನಾಂಕದೊಳಗೆ ಕಳುಹಿಸಬೇಕಿದೆ.

ಡಾ. ವಾಸುದೇವ ಮಾದವ್, ಸಿಎಸ್‌ಆರ್ ಪ್ರಾಜೆಕ್ಟ್ ಸಂಯೋಜಕರು, ಮೈರ್ ಟೆಕ್ನಿಮಾಂಟ್ ಸೆಂಟರ್ ಫಾರ್ ಕ್ಲೀನ್ ಎನರ್ಜಿ ಟ್ರಾನ್ಸಿಶನ್, ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ, ಸುರತ್ಕಲ್

ಅಧಿಕೃತ ವೆಬ್‌ಸೈಟ್: nitk.ac.in

Leave A Reply

Your email address will not be published.