ಸುಳ್ಯ: ಅಡುಗೆ ಮಾಡುವಾಗ ಆಕಸ್ಮಿಕ ಬೆಂಕಿ ತಗುಲಿದ ಮಹಿಳೆ ಸಾವು!

Share the Article

ಸುಳ್ಯ: ಅಡುಗೆ ಮಾಡುತ್ತಿರುವ ಸಂದರ್ಭದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಗಂಭೀರ ಗಾಯಗೊಂಡಿದ್ದ ಮಹಿಳೆಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಈ ಘಟನೆ ಕಳಂಜ ಗ್ರಾಮದ ಬಾಳೆಗುಡ್ಡೆಯಲ್ಲಿ ನಡೆದಿದೆ.

ಕುಂಞಣ್ಣ ನಾಯ್ಕರ ಪುತ್ರಿ ಕುಸುಮ (41) ಮೃತ ಯುವತಿ.

ಕುಸುಮ ಅವರು ಎಂದಿನಂತೆ ಬೆಳಿಗ್ಗೆ ಅಡುಗೆ ಮಾಡುವ ಸಂದರ್ಭದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿದೆ. ಕೂಡಲೇ ಮನೆಮಂದಿ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಡಾಕ್ಟರ್ ಹೇಳಿಕೆ ಪ್ರಕಾರ, ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ಸಂಜೆ ಅವರು ಕೊನೆಯುಸಿರೆಳೆದರು.

Leave A Reply