ಹತ್ತನೇ ತರಗತಿಯ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಡಿಕೇರಿ,ಕೊಡಗಿನ ಶುಂಠಿಕೊಪ್ಪದಲ್ಲಿ ನಡೆದಿದೆ.
ಅಣ್ಣು ಎಂಬವರ ಪುತ್ರಿ ಹರ್ಷಿತಾ (16) ಎಂಬಾಕೆಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಬಾಲಕಿ ಶುಂಠಿಕೊಪ್ಪ ಸರಕಾರಿ ಪ್ರೌಢಶಾಲೆಯಲ್ಲಿ ಹತ್ತನೇ ತರಗತಿ ವ್ಯಾಸಂಗ ಮಾಡುತ್ತಿದ್ದು, ಈಕೆ ನಿನ್ನೆ ಶಾಲೆಗೆ ಹೋಗದೆ ಮನೆಯಲ್ಲಿದ್ದಳು. ಮನೆಯವರು ಕೆಲಸಕ್ಕೆ ಹೋದ ಸಮಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸಂಜೆ ಹಿಂತಿರುಗಿ ಬಂದಾಗ ಮನೆಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಹರ್ಷಿತಾ ಪತ್ತೆಯಾಗಿದ್ದಾಳೆ.
ಬಾಲಕಿಯ ಆತ್ಮಹತ್ಯೆಗೆ ಕಾರಣ ಏನೆಂದು ಇನ್ನು ತಿಳಿದುಬಂದಿಲ್ಲ. ಈ ಘಟನೆ ಕುರಿತು ಕೇಸು ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ .
You must log in to post a comment.