Breaking News | ಬೆಳ್ಳಾರೆಯಲ್ಲಿ ಮಾರಕಾಸ್ತ್ರದಿಂದ ದಾಳಿಗೊಳಗಾದ ಬಿಜೆಪಿ ಯುವ ನಾಯಕ ಪ್ರವೀಣ್ ಮೃತ್ಯು
ಬೆಳ್ಳಾರೆ : ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ಮಾಡಿ ಕೊಲೆ ನಡೆಸಿದ್ದಾರೆ. ದಾಳಿಯಿಂದ ಗಂಭೀರ ಗಾಯಗೊಂಡ ಪ್ರವೀಣ್ ಅವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಬೆಳ್ಳಾರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಬಿಜೆಪಿ ಯುವ ನಾಯಕ ಪ್ರವೀಣ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆದಿದೆ. ಈಗ ದಾಳಿಗೆ ಒಳಗಾದ ಪ್ರವೀಣ್ ಅವರು ದುರ್ಮರಣ ಹೊಂದಿದ್ದಾರೆ.
ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ಮಾಡಿ ಕೊಲೆಯತ್ನ ನಡೆಸಿದ ಬಗ್ಗೆ ವರದಿಯಾಗಿದೆ. ಸಾಮಾಜಿಕ ಕ್ಷೇತ್ರ ಸಕ್ರೀಯರಾಗಿದ್ದ ಪ್ರವೀಣ್ ನೆಟ್ಟಾರು ಅವರ ಮೇಲೆ ಯಾರು, ಯಾಕೆ ದಾಳಿ ಮಾಡಿದ್ದಾರೆ ಎಂದು ಇನ್ನಷ್ಟೇ ತಿಳಿದುಬರಬೇಕಿದೆ.
ರಾಜಕೀಯ ಕ್ಷೇತ್ರದಲ್ಲಿ ಪ್ರವೀಣ್ ಅವರು ಯುವನಾಯಕನಾಗಿ ಗುರ್ತಿಸಿಕೊಂಡಿದ್ದರು. ಅವರಿಗೆ 32 ವರ್ಷ ವಯಸ್ಸಾಗಿತ್ತು. ರಾಜಕೀಯ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದ ಪ್ರವೀಣ್ ನೆಟ್ಟಾರು ಅವರಿಗೆ ಕಳೆದ ವರ್ಷ ಮದುವೆಯಾಗಿದ್ದು, ಪುಟ್ಟ ಮಗುವೊಂದಿದೆ. ದ್ವೇಷದ ಜ್ವಾಲೆಗೆ ಒಂದು ಇಡೀ ಕುಟುಂಬ ಈಗ ರೋಧಿಸುತ್ತಿದೆ. ಈಗ ಪ್ರವೀಣ್ ಅವರು ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯ ಆಗಿದೆ. ಕೇರಳ ನಂಬರ್ ಪ್ಲೇಟಿನಲ್ಲಿ ಬಂದ ದುಷ್ಕರ್ಮಿಗಳಿಂದ ಹತ್ಯೆ ನಡೆದಿದೆ ಎನ್ನಲಾಗಿದೆ. ಕೇರಳದ ರಿಜಿಸ್ಟ್ರೇಷನ್ ಉಳ್ಳ ಬೈಕಿನಲ್ಲಿ ಬಂದ ದುಷ್ಕರ್ಮಿಗಳು ಮಚ್ಚು ಬೀಸಿದ್ದಾರೆ.
ಪ್ರವೀಣ್ ಅವರು ಬೆಳ್ಳಾರೆಯ ಮಾಸ್ತಿಕಟ್ಟೆಯಲ್ಲಿ ಚಿಕನ್ ಸೆಂಟರ್ ನಡೆಸುತ್ತಿದ್ದು ,ಇಬ್ಬರು ದುಷ್ಕರ್ಮಿಗಳು ಅವರ ಮೇಲೆ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ದಾಳಿಗೆ ಒಳಗಾದ ಕೂಡಲೇ ಪ್ರವೀಣ್ ಗಂಭೀರ ಗಾಯಗೊಂಡು ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ ಎನ್ನಲಾಗಿದೆ. ಆತ ತನ್ನ ಚಿಕನ್ ಅಂಗಡಿಯಲ್ಲಿ ಇದ್ದಾಗ ರಾತ್ರಿ 9 ಗಂಟೆಯ ಸುಮಾರಿಗೆ ಈ ದಾಳಿ ನಡೆದಿದೆ. ದುಷ್ಕರ್ಮಿಗಳು ಬೈಕಲ್ಲಿ ಬಂದಿದ್ದು ಪ್ರವೀಣ್ ಅವರ ಕುತ್ತಿಗೆಗೆ ತಳವಾರ್ ಬೀಸಿದ್ದರು ಎನ್ನಲಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಆಸ್ಪತ್ರೆ ಸಾಗಿಸುವ ಮಧ್ಯದಲ್ಲಿ ಮೃತಪಟ್ಟಿದ್ದಾರೆ.
ಮುಂಜಾಗೃತಾ ಕ್ರಮವಾಗಿ ಪುತ್ತೂರಿನ ಮತ್ತು ಬೆಳ್ಳಾರೆಯ ಎಲ್ಲಾ ಅಂಗಡಿಗಳನ್ನು ಪೊಲೀಸರು ಮುಚ್ಚಿಸಿದ್ದಾರೆ. ಪರಿಸ್ಥಿತಿ ಬಿಗುವಿನಿಂದ ಕೂಡಿದೆ.
ಆದರೆ ಇದು ಮಸೂದ್ ಹತ್ಯೆಗೆ ಪ್ರತಿಕಾರ ??!
ಹಿಂದೆ ಕೆಲದಿನಗಳ ಹಿಂದೆ ಬೆಳ್ಳಾರೆ ಸಮೀಪದ ಕಳಂಜದಲ್ಲಿ ಮಸೂದ್ ಎಂಬ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಬಳಿಕ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದು,ಇದಕ್ಕೆ ಪ್ರತೀಕಾರವಾಗಿ ಈ ಕೊಲೆ ನಡೆದಿದೆ ಎನ್ನಲಾಗಿದೆ. ಸ್ಥಳಕ್ಕೆ ಉನ್ನತ ಪೊಲೀಸ್ ಅಧಿಕಾರಿಗಳು ದೌಡಾಯಿಸಿದ್ದಾರೆ.
ಜು.19ರ ತಡರಾತ್ರಿ ಬೆಳ್ಳಾರೆ ಠಾಣಾ ವ್ಯಾಪ್ತಿಯ ಕಳಂಜದಲ್ಲಿ ಕ್ಷುಲ್ಲಕ ವಿಷಯಕ್ಕೆ ಬಾಟಲಿಯಿಂದ ಯುವಕನೊಬ್ಬನ ತಲೆಗೆ ಹೊಡೆದು ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಪ್ರಕರಣದಲ್ಲಿ ಯುವಕ ಮಸೂದ್ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದ. ಗಂಭೀರ ಗಾಯಗೊಂಡ ಯುವಕನನ್ನು ಸುಳ್ಯ ಆಸ್ಪತ್ರೆಗೆ ತಂದು ಅಲ್ಲಿಂದ ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದ. ಕಾಸರಗೋಡು ತಾಲೂಕು ಮೊಗ್ರಾಲ್ ಪುತ್ತೂರು ನಿವಾಸಿ ಮಸೂದ್ (18 ವರ್ಷ) ಮೃತ. ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಕೊನೆಗೆ ಆತ ಮೃತಪಟ್ಟಿದ್ದ. ಆ ಕೊಲೆಗೆ ಇದು ಪ್ರತೀಕಾರ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ತನಿಖೆಯಿಂದ ತಿಳಿದು ಬರಬೇಕಿದೆ.